ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ನಲ್ಲಿ ತಗಲಾಕಿಕೊಂಡು ಸಚಿವ ಸ್ಥಾನ ಕಳೆದುಕೊಂಡಿದ್ದರು. ಅವರೇ ರಾಜೀನಾಮೆ ನೀಡಿದ್ದರು. ಆ ಬಳಿಕ ಮತ್ತೆ ಸಚುವ ಸ್ಥಾನಕ್ಕಾಗಿ ಅವರು ಮಾಡಿದ ಕಸರತ್ತು ಅಷ್ಟಿಷ್ಟಲ್ಲ.

ಮತ್ತೆ ಸಚಿವರಾಗಲೇ ಬೇಕೆಂಬ ಬಯಕೆಯಿಂದ ದೊಡ್ಡದೊಡ್ಡವರ ಮನೆ ಬಾಗಿಲಿಗೆ ಹೋಗಿದ್ರು, ಆರ್ ಎಸ್ ಎಸ್ ನವರನ್ನು ಭೇಟಿಯಾಗಿದ್ರು. ಇದೆಲ್ಲಾ ಬೆಳವಣಿಗೆ ನಡುವೆ ಇನ್ನೇನು ಅವರು ಸಚಿವರಾಗ್ತಾರೆ ಎನ್ನುವಷ್ಟರಲ್ಲೇ ವಿಧಾನ ಪರಿಷತ್ ಚುನಾವಣೆಯಲ್ಲಿ ಯಡವಟ್ಟು ಮಾಡಿಕೊಂಡ್ರಾ ಎಂಬ ಪ್ರಶ್ನೆ ಕಾಡುತ್ತಿದೆ.
ಕಾಂಗ್ರೆಸ್ ಮಣಿಸಲು ಹೋಗಿ ಬಿಜೆಪಿ ಸೋಲಿಗೆ ಕಾರಣವಾಗಿದೆ. ಅದಕ್ಕಾಗಿಯೇ ಸೋದರ ಲಖನ್ ಜಾರಕಿಹೊಳಿಗೆ ಟಿಕೆಟ್ ಸಿಗದೆ ಇದ್ದಾಗ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಿಸಿದ್ರು. ಬಿಜೆಪಿ ಅಭ್ಯರ್ಥಿಗಿಂತ ಹೆಚ್ಚಾಗಿ ಲಖನ್ ಜಾರಕಿಹೊಳಿ ಅವರಿಗೆ ಬೆಂಬಲ ಸಿಕ್ಕಿದ್ರಿಂದ ಕಾಂಗ್ರೆಸ್ ಅಭ್ಯರ್ಥಿ ಜೊತೆಗೆ ಲಖನ್ ಅವರು ಕೂಡ ಗೆಲುವು ಸಾಧಿಸಿದ್ರು. ಇದೇ ಕಾರಣ ರಮೇಶ್ ಜಾರಕಿಹೊಳಿ ವಿರುದ್ದ ಶಿಸ್ತು ಉಲ್ಲಂಘನೆಯಾಗುತ್ತಾ ಎಂಬ ಪ್ರಶ್ನೆಗಳು ಉದ್ಭವಿಸಿವೆ.
ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಇದೇ ಸಮಯವನ್ನ ಕೆಲವರು ಉಪಯೋಗಿಸಿಕೊಂಡು ರಮೇಶ್ ಜಾರಕಿಹೊಳಿಗೆ ಮತ್ತೆ ಸಚಿವ ಸ್ಥಾನ ಕೈ ತಪ್ಪುವಂತೆ ಮಾಡ್ತಾರೆ ಎಂಬ ಮಾತುಗಳು ಬಲವಾಗಿ ಕೇಳಿ ಬರುತ್ತಿವೆ.
