ಸಿಡಿ ಪ್ರಕರಣದಿಂದಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ರಮೇಶ್ ಜಾರಕಿಹೊಳಿ ಇದೀಗ ಮರಳಿ ಸಚಿವ ಸ್ಥಾನ ಪಡೆಯುವುದಕ್ಕೆ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಚುನಾವಣೆ ಇನ್ನು ಕೆಲವೇ ತಿಂಗಳು ಬಾಕಿ ಇರುವಾಗಲೂ ಸಚಿವ ಸ್ಥಾನವನ್ನು ಮರಳಿ ಪಡೆಯಲೇಬೇಕು ಎಂದು ಪಣ ತೊಟ್ಟಿದ್ದಾರೆ. ಅದರ ಫಲವಾಗಿ ಇಂದು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.
ಮಂಡ್ಯ ಭೇಟಿ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರ ಭೇಟಿಗೆ ತೆರಳುವುದು ರಮೇಶ್ ಜಾರಕಿಹೊಳಿಗೆ ಗೊತ್ತಿತ್ತು. ಹೀಗಾಗಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಅಮಿತ್ ಶಾ ಅವರನ್ನು ಅವರ ಜೊತೆಯಲ್ಲಿಯೇ ಇದ್ದುಕೊಂಡು ಭೇಟಿಯಾಗಿದ್ದಾರೆ.
ಅದಕ್ಕಾಗಿಯೇ ರಮೇಶ್ ಜಾರಕಿಹೊಳಿ ಅವರು ಬೆಳಗ್ಗೆಯೇ ಸಿಎಂ ನಿವಾಸ ಆರ್ ಟಿ ನಗರಕ್ಕೆ ತೆರಳಿದ್ದರು. ಅಲ್ಲಿಂದ ಸಿಎಂ ಬೊಮ್ಮಾಯಿ ಅವರ ಜೊತೆಗೆ ಸಿಎಂ ಸರ್ಕಾರಿ ನಿವಾಸಕ್ಕೂ ತೆರಳಿದ್ದಾರೆ. ಬಳಿಕ ಅಲ್ಲಿಂದ ತಾಜ್ ವೆಸ್ಟೆಂಡ್ ಕಡೆಗೂ ಪಯಣ ಬೆಳೆಸಿದ್ದಾರೆ. ಇಲ್ಲೆಲ್ಲಾ ರಮೇಶ್ ಜಾರಕಿಹೊಳಿ ಅವರು ಸಿಎಂ ಬೊಮ್ಮಾಯಿ ಅವರ ಜೊತೆಗೇನೆ ಇದ್ದದ್ದು ಗಮನಾರ್ಹ. ಕಡೆಗೂ ಸಿಎಂ ಬೊಮ್ಮಾಯಿ ಅವರ ಜೊತೆಗೇನೆ ತೆರಳಿ ಅಮಿತ್ ಶಾ ಅವರನ್ನು ಭೇಟಿ ಮಾಡಿ ಬಂದಿದ್ದಾರೆ.