ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು : ಇಂದಿರಾನಗರದಲ್ಲಿರುವ ರಾಮೇಶ್ವರಂ ಕೆಫೆ ಸ್ಪೋಟ ಸಿಲಿಕಾನ್ ಸಿಟಿ ಮಂದಿಯಲ್ಲಿ ಕೊಂಚ ಭಯದ ವಾತಾವರಣವನ್ನು ಉಂಟು ಮಾಡಿದೆ. ಸೇಫ್ ಬೆಂಗಳೂರು ಬಗ್ಗೆ ಅನೇಕ ಕಾರ್ಯಕ್ರಮಗಳನ್ನು ಮಾಡಲಾಗಿದೆ. ಆದರೂ ಈ ರೀತಿಯ ಬಾಂಬ್ ಬ್ಲಾಸ್ಟ್ ಘಟನೆಗಳ ಕೆಲವೊಂದು ಆತಂಕ ಸೃಷ್ಟಿ ಮಾಡುತ್ತವೆ. ರಾಮೇಶ್ವರಂ ಕೆಫೆ ಬ್ಲಾಸ್ಟ್ ಬಗ್ಗೆ ನಿನ್ನೆಯಿಂದಾನೂ ತನಿಖೆ ನಡೆಯುತ್ತಿದೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿದ್ದಾರೆ.
‘ಘಟನೆ ಸಂಬಂಧ ಬಹಳ ಸೀರಿಯಸ್ ಆಗಿ, ಆಳವಾಗಿ ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಹಳಷ್ಟು ಕುರುಹುಗಳು ಸಿಕ್ಕಿವೆ. ಸಿಸಿಟಿವಿಯಲ್ಲೂ ಸಾಕ್ಷ್ಯಗಳು ಸಿಕ್ಕಿವೆ. ಆತ ಸುಮಾರು 28 ಬಸ್ ಗಳು ಓಡಾಡಿವೆ. ಆತ ಬಸ್ ನಲ್ಲಿ ಬಂದಿದ್ದಾನೆ ಎಂಬ ಮಾಹಿತಿ ನಮಗೆ ಸಿಕ್ಕಿದೆ. ಬಸ್ ಗಳಲ್ಲೂ ಸಿಸಿ ಕ್ಯಾಮೆರಾಗಳಿವೆ. ಯಾವುದೇ ಕಾರಣಕ್ಕೂ ಅಪರಾಧಿಯನ್ನು ತಪ್ಪಿಸಿಕೊಳ್ಳುವುದಕ್ಕೆ ಬಿಡುವುದಿಲ್ಲ.
ಈ ಕೃತ್ಯ ಒಬ್ಬನಿಂದ ಮಾತ್ರ ನಡೆದಿದೆಯೋ ಅಥವಾ ಅವನ ಹಿಂದೆ ಬೇರೆ ಯಾರಾದರೂ ಇದ್ದಾರ ಎಂಬೆಲ್ಲಾ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ. ಹೊಟೇಲ್ ನವರು ಮೂರ್ನಾಲ್ಕು ಕಡೆ ಸಕ್ಸಸ್ ಆಗಿದ್ದಾರೆ ಎಂಬ ಕಾರಣಕ್ಕೂ ಹೀಗೆ ಮಾಡಿರಬಹುದು. ಸ್ಥಳಕ್ಕೆ ಹೋದಾಗ ಅಲ್ಲಿ ಕೆಲವರು ಈ ವಿಚಾರವಾಗಿ ಮಾತನಾಡಿದ್ದಾರೆ. ಹೀಗಾಗಿ ಎಲ್ಲಾ ಆಯಾಮದಿಂದಾನೂ ತನಿಖೆ ನಡೆಯುತ್ತಿದೆ. 2022ರಲ್ಲಿ ಕುಕ್ಕರ್ ಬ್ಲಾಸ್ಟ್ ಆದಾಗ ಅವರು ರಾಜೀನಾಮೆ ನೀಡಿದ್ರಾ..? ಅವರು ಎಲ್ಲದಕ್ಕೂ ರಾಜೀನಾಮೆ ಕೇಳ್ತಾರೆ. ಈ ಸಮಯದಲ್ಲಿ ಸಹಕಾರ ಕೋರಿದ್ದೇವೆ. ಇದು ರಾಜ್ಯದ ಮತ್ತು ಬೆಂಗಳೂರು ಸೇಫ್ಟಿಯ ಪ್ರಶ್ನೆ. ಹೀಗಾಗಿ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್