ಚಿತ್ರದುರ್ಗ,(ಜುಲೈ.01): ಜಿಲ್ಲೆಯ ಮೊಳಕಾಲ್ಮುರು ತಾಲ್ಲೂಕಿನ ರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಂಪುರ, ಕೆರೆಕೊಂಡಾಪುರ ಹಾಗೂ ವಡೇರಹಳ್ಳಿ ಗ್ರಾಮಗಳಲ್ಲಿ ಘನತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲಾಗುತ್ತಿದೆ. ಪಂಚಾಯಿತಿ ವ್ಯಾಪ್ತಿಯ ಪ್ರತಿ ಮನೆಗೂ ಎರಡು ಕಸದ ಡಬ್ಬಿಗಳನ್ನು ವಿತರಿಸಲಾಗಿದೆ. ಮೂಲದಲ್ಲಿಯೇ ಹಸಿ ಕಸ, ಒಣ ಕಸ ವಿಂಗಡಣೆಗೆ ಕ್ರಮವಹಿಸಲಾಗಿದೆ. ಈ ಮೂಲಕ ರಾಂಪುರ ಗ್ರಾಮ ಪಂಚಾಯತಿ ಕಾರ್ಯ ಮಾದರಿಯನಿಸಿದೆ.
ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಎರಡು ಸ್ವಚ್ಛವಾಹಿನಿಗಳ ಮೂಲಕ ಘನತ್ಯಾಜ್ಯ ನಿರ್ವಹಣೆಯನ್ನು ಕುರಿತು ವ್ಯಾಪಾಕ ಪ್ರಚಾರ ಮಾಡಲಾಗುತ್ತಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಸಿಬ್ಬಂದಿಗಳು ಮನೆ ಮನೆಗೂ ಭೇಟಿ ನೀಡಿ ಮೂಲದಲ್ಲಿಯೇ ಕಸ ವಿಂಗಡಣೆ ಕುರಿತು ಗ್ರಾಮಸ್ಥರಿಗೆ ತಿಳಿ ಹೇಳಿದ್ದಾರೆ. ಬೀದಿ ನಾಟಕದ ಮೂಲಕ ಮಾಹಿತಿ ನೀಡಿ ಜನ ಜಾಗೃತಿ ಮೂಡಿಸಲಾಗಿದೆ.
ತಾಜ್ಯ ವಿಲೇವಾರಿಗೆ ಶುಲ್ಕ ಸಂಗ್ರಹಣೆ :
******** ಸ್ವಚ್ಛ ಸಂಕೀರ್ಣ ಘಟಕಗಳಲ್ಲಿ ಗ್ರಾಮ ಪಂಚಾಯಿತಿಯ ಸ್ವ-ಸಹಾಯ ಸಂಘದ ಗುಂಪಿನ 4 ಜನ ಸದಸ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿ ಮನೆಯಿಂದ ರೂ.20/- ಅಂಗಡಿ ಮತ್ತು ಹೋಟೆಲ್‍ಗಳಿಂದ ರೂ.30/-ಗಳನ್ನು ಕಲ್ಯಾಣ ಮಂಟಪದಿಂದ ರೂ.500/-ಗಳನ್ನು ಶುಲ್ಕವನ್ನು ಪಡೆಯಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪರಿಣಾಮಕಾರಿಯಾಗಿ ಘನ ತ್ಯಾಜ್ಯ ಸಂಗ್ರಹಣೆ ವಿಂಗಡಣೆ ವಿಲೇವಾರಿ ಮಾಡಲು ಕ್ರಮವಹಿಸಲಾಗಿದೆ.
ಗ್ರಾಮ ಪಂಚಾಯತಿ ಸದಸ್ಯರಿಗೆ ಹಾಗೂ ನೀರು ಮತ್ತು ನೈರ್ಮಲ್ಯ ಸಮಿತಿಯ ಸದಸ್ಯರುಗಳಿಗೆ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯ ಘಟಕಾಂಶಗಳ ಕುರಿತು ಗ್ರಾಮಸಭೆಗಳಲ್ಲಿ ಸಾಮಾನ್ಯ ಸಭೆಗಳಲ್ಲಿ ಮಾಹಿತಿ ನೀಡಲಾಗಿದೆ. ಸಾರ್ವಜನಿಕರ ಸ್ಥಳಗಳಲ್ಲಿ ಕಸದ ತೊಟ್ಟಿಗಳನ್ನು ಹಾಗೂ ಎಚ್ಚರಿಕೆ ಫಲಕಗಳನ್ನು ಅಳವಡಿಸಲಾಗಿದೆ.
ಸ್ಚಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯ ಘಟಕಾಂಶಗಳಾದ ವೈಯಕ್ತಿಕ ಶೌಚಾಲಯ, ಸಮುದಾಯ ಶೌಚಾಲಯ, ಘನತ್ಯಾಜ್ಯ ನಿರ್ವಹಣೆ, ದ್ರವತ್ಯಾಜ್ಯ ನಿರ್ವಹಣೆ, ಮಲತ್ಯಾಜ್ಯ ನಿರ್ವಹಣೆ, ಸಮಗ್ರ ಘನ ತ್ಯಾಜ್ಯ ವಿಲೇವಾರಿ ಘಟಕಗಳ ಕುರಿತು ಗ್ರಾಮ ಪಂಚಾಯಿತಿ ಚುನಾಯಿತ ಸದಸ್ಯರಿಗೆ, ಸ್ವಚ್ಛಗ್ರಾಹಿಗಳಿಗೆ, ನೀರು ಮತ್ತು ನೈರ್ಮಲ್ಯ ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಆಶಾ ಅಂಗನವಾಡಿ ಕಾರ್ಯಕರ್ತರು, ಶಾಲಾ ಶಿಕ್ಷಕರಿಗೆ ಅನೇಕ ತರಬೇತಿಗಳು ಹಾಗೂ ಮಾಹಿತಿ ಶಿಕ್ಷಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮನೆ ಮನೆ ಭೇಟಿ ನೀಡಿ ಸ್ವಚ್ಛ ಭಾರತ್ ಮಿಷನ್ ಗ್ರಾಮೀಣಾ ಯೋಜನೆ ಘಟಕಾಂಶಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆ.
ದ್ರವತ್ಯಾಜ್ಯ ನಿರ್ವಾಹಣೆ : ರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಕೊಂಡಾಪುರ ಗ್ರಾಮದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆ, ನರೇಗಾ ಯೋಜನೆ, 15ನೇ ಹಣಕಾಸಿನ ಅಡಿಯಲ್ಲಿ ಬೂದು ನೀರು ನಿರ್ವಾಹಣೆಗಾಗಿ ಚರಂಡಿಯಲ್ಲಿ ಸಂಸ್ಕರಿಸುವ ವಿಧಾನ (ಇನ್‍ಲೈನ್ ಟ್ರೀಟ್‍ಮೆಂಟ್) ಹಾಗೂ ಕನ್ಸೆಟ್ರೆಕ್ಟಡ್ ವಿಟ್‍ಲ್ಯಾಂಡ್ ವಿಧಾನ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ ಎಂದು ರಾಂಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್. ಗುಂಡಪ್ಪ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…