ಸುದ್ದಿಒನ್, ಚಿತ್ರದುರ್ಗ, ಜುಲೈ. 03 : ಕರ್ನಾಟಕ ಸರ್ಕಾರವು ಆಡಳಿತಾತ್ಮಕ ಬದಲಾವಣೆ ಪ್ರಕ್ರಿಯೆಯ ಭಾಗವಾಗಿ ಐಎಎಸ್ ಅಧಿಕಾರಿಗಳ ವರ್ಗಾವಣೆ ಆದೇಶವನ್ನು ಹೊರಡಿಸಿದೆ. ಇದರನ್ವಯ ಚಿತ್ರದುರ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರಮ್ಯಾ ಎಸ್., IAS ಅವರನ್ನು ನೇಮಕ ಮಾಡಲಾಗಿದೆ.
ಈ ಹಿಂದೆ ಬೆಂಗಳೂರಿನ ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ 2013ರ ಬ್ಯಾಚ್ ನ ಐಎಎಸ್ ಅಧಿಕಾರಿ ರಮ್ಯಾ ಎಸ್. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.
ಚಿತ್ರದುರ್ಗದ ಜಿಲ್ಲಾಧಿಕಾರಿಯಾಗಿದ್ದ ವೆಂಕಟೇಶ್ ಟಿ., IAS ಅವರನ್ನು ವರ್ಗಾವಣೆಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ ರಮ್ಯಾ ಎಸ್. ಅವರನ್ನು ನಿಯೋಜಿಸಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








