Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ರಂಜಾನ್ ಸಂಭ್ರಮ | ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 11 : ಮೂವತ್ತು ದಿನಗಳ ಕಾಲ ಒಪ್ಪತ್ತು ಉಪವಾಸವಿದ್ದು, ಗುರುವಾರ ಆಚರಿಸಿದ ಪರಮ ಪವಿತ್ರವಾದ ರಂಜಾನ್ ಹಬ್ಬದಲ್ಲಿ ಮುಸ್ಲಿಂ ಭಾಂಧವರು ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಶ್ವೇತ ವಸ್ತ್ರಧಾರಿಗಳಾಗಿದ್ದ ಮುಸ್ಲಿಂರು ತಲೆ ಮೇಲೆ ಟೋಪಿಗಳನ್ನು ಧರಿಸಿ ಪ್ರಾರ್ಥನೆಯಲ್ಲಿ ತೊಡಗಿದ್ದರೆ ಇನ್ನು ಕೆಲವರು ಕರವಸ್ತ್ರಗಳನ್ನು ತಲೆಗೆ ಸುತ್ತಿಕೊಂಡಿದ್ದರು. ಕೆಲವರು ಮನೆಗಳಿಂದ ಚಾಪೆ, ಜಮಖಾನ ತಂದು ಈದ್ಗಾ ಮೈದಾನದಲ್ಲಿ ಹಾಸಿಕೊಂಡಿದ್ದರು. ಪ್ರಾರ್ಥನೆಯ ನಂತರ ಪರಸ್ಪರರು ಅಪ್ಪಿಕೊಂಡು ರಂಜಾನ್ ಹಬ್ಬದ ಶುಭಾಷಯಗಳನ್ನು ವಿನಿಮಯ ಮಾಡಿಕೊಂಡರು. ದಾವಣಗೆರೆ ರಸ್ತೆಯಲ್ಲಿ ಅಲ್ಲಲ್ಲಿ ಪೊಲೀಸ್ ಬ್ಯಾರಿಕೇಡ್‍ಗಳನ್ನಿಟ್ಟು ವಾಹನಗಳ ಸಂಚಾರವನ್ನು ನಿಯಂತ್ರಿಸಿದರು.

ಮಾಜಿ ಸಂಸದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ, ಶಾಸಕ ಕೆ.ಸಿ.ವೀರೇಂದ್ರಪಪ್ಪಿ, ಟಿಪ್ಪುಖಾಸಿಂ ಆಲಿ, ಶಂಶೀರ್‍ಆಲಿ, ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷ ಎಂ.ಸಿ.ಓ. ಬಾಬು, ವಕ್ಫ್ ಬೋರ್ಡ್ ಚೇರ್ಮನ್ ಕೆ.ಅನ್ವರ್‍ಪಾಷ ಇನ್ನು ಅನೇಕರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...