Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಟಕಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ಸರಿಪಡಿಸಬಲ್ಲ ಶಕ್ತಿ ರಂಗಭೂಮಿಗಿದೆ : ಡಾ.ಜಿ.ಇ.ಭೈರಸಿದ್ದಪ್ಪ

---Advertisement---

 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.02 : ನೀನಾಸಂ ನಿಂದ ರೂಪುಗೊಂಡ ಅನೇಕ ರಂಗಕರ್ಮಿಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ರಂಗ ತರಬೇತಿ ನೀಡುತ್ತಿರುವುದು ಶ್ಲಾಘನೀಯ. ರಂಗಭೂಮಿಯಲ್ಲಿ ಆತ್ಮಸ್ಥೈರ್ಯವಿದೆ. ನಾಟಕಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ಸರಿಪಡಿಸಬಲ್ಲ ಶಕ್ತಿಯನ್ನು ರಂಗಭೂಮಿ ಹೊಂದಿದೆ ಎಂದು ಎಸ್.ವಿ.ಸಿ.ಇ ಪ್ರಾಚಾರ್ಯ ಡಾ.ಜಿ.ಇ.ಭೈರಸಿದ್ದಪ್ಪ ಅಭಿಪ್ರಾಯಪಟ್ಟರು.


ರಂಗಸೌರಭ ಕಲಾ ಸಂಘದ ವತಿಯಿಂದ ನಗರದ ಶ್ರೀ ವೆಂಕಟೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಗೆ ಏರ್ಪಡಿಸಿದ್ದ ಶಿಕ್ಷಣದಲ್ಲಿ ರಂಗಕಲೆ ರಂಗಭೂಮಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಶಿಕ್ಷಣಾರ್ಥಿಗಳು ರಂಗಭೂಮಿಯ ಆಯಾಮಗಳ ಬಗ್ಗೆ ಆಳವಾದ ಅಧ್ಯಯನ ಮಾಡಬೇಕು. ಒಂದೆರಡು ದಿನಗಳಲ್ಲಿ ರಂಗಶಿಕ್ಷಣ ಕರಗತವಾಗುವುದಿಲ್ಲ. ಬದಲಿಗೆ ನಿರಂತರ ಅಭ್ಯಾಸದಲ್ಲಿ ತೊಡಗಿದರೆ ಮಾತ್ರ ರಂಗಭೂಮಿ ಸಿದ್ಧಿಸುತ್ತದೆ. ರಂಗಭೂಮಿಯ ಶಿಸ್ತು ಪ್ರಶಿಕ್ಷಣಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡುತ್ತದೆ. ವರ್ತಮಾನಗಳ ಬಗ್ಗೆ ಅಪಾರವಾದ ಜ್ಞಾನ ಸಂಪಾದಿಸಬೇಕು ಜೊತೆಗೆ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸುವ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು ಎಂದರು.

ಉಪನ್ಯಾಸಕರಾದ ಎಂ.ವಿ.ಗೋವಿಂದರಾಜು, ಆರ್.ಎಸ್.ರಾಜು, ಡಾ.ಜಿ.ಬಿ.ರಾಜಪ್ಪ, ಡಾ.ಬಿ.ಚಂದ್ರಪ್ಪ, ಡಾ.ಎಲ್.ಆರ್.ಹಂಚಿನಮನಿ ಮುಖ್ಯಅತಿಥಿಗಳಾಗಿ ಉಪಸ್ಥಿತರಿದ್ದರು.

ರಂಗ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ನಿರ್ದೇಶನದಲ್ಲಿ ಪ್ರಶಿಕ್ಷಣಾರ್ಥಿಗಳು ಮದ್ಯಪಾನ, ಬಾಲಕಾರ್ಮಿಕ, ನಿರುದ್ಯೋಗ, ವರದಕ್ಷಿಣೆ, ಮೊಬೈಲ್‍ನಿಂದಾಗುವ ದುಷ್ಪರಿಣಾಮಗಳು, ಅನಕ್ಷರತೆ, ದೇವದಾಸಿ, ಭ್ರಷ್ಟಾಚಾರ ಮುಂತಾದ ನಾಟಕಗಳನ್ನು ಪ್ರಶಿಕ್ಷಣಾರ್ಥಿಗಳು ಅಭಿನಯಿಸಿದರು. ಡಾ.ಕೆ.ಪಿ.ನಾಗಭೂಷಣಶೆಟ್ಟಿ ಸ್ವಾಗತಿಸಿದರು. ಡಾ.ಬಿ.ಸಿ.ಅನಂತರಾಮ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಶಕ್ಷಣಾರ್ಥಿ ಅಪೂರ್ವ.ಪಿ. ನಿರೂಪಿಸಿದರು. ವನಿತ, ಉತ್ಪಲ, ಕಾವ್ಯ ಪ್ರಾರ್ಥಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...