Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ನೂತನ ಎಸ್.ಪಿ. ಆಗಿ ರಂಜಿತ್ ಕುಮಾರ್ ಬಂಡಾರು

---Advertisement---

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 17 : ಚಿತ್ರದುರ್ಗ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಧರ್ಮೇಂದ್ರ ಕುಮಾರ್ ಮೀನಾ ಅವರನ್ನು ಕಳೆದ ಜುಲೈ 30 ರಂದು ವರ್ಗಾವಣೆ ಮಾಡಲಾಗಿತ್ತು. ಇದೀಗ ಖಾಲಿಯಿದ್ದ ಅವರ ಸ್ಥಾನಕ್ಕೆ ರಂಜಿತ್ ಕುಮಾರ್ ಬಂಡಾರು ಅವರನ್ನು ವರ್ಗಾಯಿಸಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ನಾಗಪ್ಪ ಪರೀಟ್ ಅವರು ಆದೇಶಿಸಿದ್ದಾರೆ.

ಬಳ್ಳಾರಿ ಎಸ್ಪಿ ಆಗಿದ್ದ ರಂಜಿತ್ ಕುಮಾರ್ ಬಂಡಾರು ಅವರು ಕೆಲ‌ ದಿನಗಳ‌ ಹಿಂದೆ ವರ್ಗಾವಣೆ ಆಗಿದ್ದರು. ಆದರೆ ಅವರಿಗೆ ಯಾವುದೇ ಸ್ಥಳ ನಿಯೋಜನೆಯಾಗಿರಲಿಲ್ಲ. ಇದೀಗ ಚಿತ್ರದುರ್ಗಕ್ಕೆ ಎಸ್. ಪಿ‌. ಆಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಮೊದಲು ಅವರು ಬಳ್ಳಾರಿ ಜಿಲ್ಲೆಯ ಎಸ್.ಪಿ ಆಗಿ,
ಆಂತರಿಕ ಭದ್ರತಾ ವಿಭಾಗ, ಭಯೋತ್ಪಾದನಾ ನಿಗ್ರಹ ದಳದ ಎಸ್ಪಿಯಾಗಿದ್ದ ರಂಜಿತ್‌ಕುಮಾರ್ ಬಂಡಾರು ಅವರು ಮಂಗಳೂರು ಸೇರಿದಂತೆ ವಿವಿಧೆಡೆ ಕಾರ್ಯ ನಿರ್ವಹಿಸಿದ್ದಾರೆ. ರಂಜಿತ್ ಕುಮಾರ್ ಅವರು 2017ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದು, ಕರ್ನಾಟಕ ಕೇಡರ್ ಅಧಿಕಾರಿಯಾಗಿದ್ದಾರೆ. ಇವರು ಮೂಲತಃ ಆಂಧ್ರಪ್ರದೇಶ ಮೂಲದವರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment