ಮುನಿರತ್ನ ವಿರುದ್ಧ ರಾಮನಗರ ವ್ಯಾಪ್ತಿಯಲ್ಲಿ ದಾಖಲಾಯ್ತು ಅತ್ಯಾಚಾರ ಪ್ರಕರಣ..!

suddionenews
1 Min Read

ಬೆಂಗಳೂರು: ದಲಿತ ಹಾಗೂ ಒಕ್ಕಲಿಗ ಸಮುದಾಯದವರಿಗೆ ಕೆಟ್ಟದಾಗಿ ಮಾತನಾಡಿ ಜೈಲು ಸೇರಿರುವ ಮುನಿರತ್ನ ಅವರಿಗೆ ಈಗಾಗಲೇ ಆ ಎರಡು ಸಮುದಾಯಗಳ ವಿರೋಧ ವ್ಯಕ್ತವಾಗಿದೆ. ಜೊತೆಗೆ ಮುನಿರತ್ನ ವಿರುದ್ಧ ಪ್ರತಿಭಟನೆಗಳು ಎದುರಾಗಿವೆ. ಇದೀಗ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣವೊಂದು ದಾಖಲಾಗಿದೆ.

ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ. ಬೆಂಗಳೂರು ಮೂಲದ‌ ಮಹಿಳೆಯೊಬ್ಬರು ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕತಣ ದಾಖಲಿಸಿದ್ದಾರೆ. ಕಗ್ಗಲಿಪುರ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಕಗ್ಗಲಿಪುರ ರೆಸಾರ್ಟ್ ನಲ್ಲಿ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ದೂರು ದಾಖಲಿಸಿದ್ದು, ಮುನಿರತ್ನ ಸೇರಿ ಏಳು ಜನರ ಮೇಲೆ ದೂರು ದಾಖಲಾಗಿದೆ. ಶಾಸಕ ಮುನಿರತ್ನ, ವಿಜಯ್ ಕುಮಾರ್, ಕಿರಣ್, ಲೋಹಿತ್, ಮಂಜುನಾಥ್, ಲೋಕಿ ಎಂಬುವವರ ವಿರುದ್ಧ ಈ ದೂರು ದಾಖಲಾಗಿದೆ. ಈ ಸಂಬಂಧ ಎಫ್ಐಆರ್ ಕೂಡ ಹಾಕಲಾಗಿದೆ.

ಖಾಸಗಿ ರೆಸಾರ್ಟ್ ನಲ್ಲು ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ್ದಾರೆಂದು ಡಿವೈಎಸ್ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಮಹಿಳೆ ದೂರು ನೀಡಿದ್ದಾರೆ. ಸುಮಾರು 2 ಗಂಟೆಗಳ ಕಾಲ ಅಂದಿನ ಘಟನೆಯನ್ನು ವಿವರಿಸಿದ್ದಾರೆ. ಸಂತ್ರಸ್ತೆಯ ಜೊತೆಗೆ ಪೊಲೀಸರು ಸ್ಥಳ ಮಹಜರು ಮಾಡುವುದಕ್ಕೆ ಸಿದ್ಧತೆ ನಡೆಸಿದ್ದಾರೆ. ಇನ್ನು ಮುನಿರತ್ನ ವಿರುದ್ಧ ಗುತ್ತಿಗೆದಾರ ಚೆಲುವರಾಜ್ ದಾಖಲಿಸಿದ್ದ ವಂಚನೆ ಪ್ರಕರಣದಲ್ಲಿ ರಿಲೀಫ್ ಸಿಕ್ಕಿದೆ. ಬುಧವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಜಾತಿನಿಂದನೆ ಕೇಸಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದು, ಇಂದು ವಿಚಾರಣೆ ನಡೆಯಲಿದೆ. ಇದರ ಬೆನ್ನಲ್ಲೇ ಇದೀಗ ಅತ್ಯಾಚಾರ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *