ಸುದ್ದಿಒನ್, ಹಿರಿಯೂರು, ಆಗಸ್ಟ್. 01 : ಪಿಯುಸಿ ಓದುತ್ತಿರುವ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ, ಗರ್ಭಿಣಿ ಮಾಡಿದ ಕೈಕೊಟ್ಟ ಯುವಕನ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಸಂಬಂಧಿಕರ ಮನೆಯಲ್ಲಿದ್ದುಕೊಂಡು ನಗರದ ಕಾಲೇಜಿಗೆ ಬರುತ್ತಿದ್ದ ಬಾಲಕಿಯನ್ನು ಸಂಗೇನಹಳ್ಳಿ ಗ್ರಾಮದ ದರ್ಶನ್ ಎಂಬ ಯುವಕ ಪರಿಚಯಿಸಿಕೊಂಡು ಅಪ್ರಾಪ್ತೆಯಿಂದ ಮೊಬೈಲ್ ನಂಬರ್ ಪಡೆದು ಮೆಸೇಜ್, ಪೋನ್ ಕಾಲ್ ಮಾಡಿ ಮತನಾಡುತ್ತಾ, ಮದುವೆಯಾಗುವುದಾಗಿ ನಂಬಿಸಿ ಬಾಲಕಿಯನ್ನು ದೈಹಿಕವಾಗಿ ಬಳಸಿಕೊಂಡು, ಪ್ರಾಣ ಬೆದರಿಕೆ ಹಾಕಿದ್ದಲ್ಲದೆ, ಜಾತಿ ನಿಂದನೆ ಮಾಡಿದ್ದಾನೆಂದು ಬಾಲಕಿಯ ಪೋಷಕರು ಆರೋಪಿಯ ವಿರುದ್ಧ ಪೋಕ್ಸೋ, ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














