Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಷ್ಟ್ರೀಯ ಲೋಕ ಅದಾಲತ್ : 29 ವರ್ಷಗಳ ಹಳೆಯ ವ್ಯಾಜ್ಯ ಸೇರಿದಂತೆ 2854 ಪ್ರಕರಣಗಳು ಇತ್ಯರ್ಥ : ಪ್ರೇಮಾವತಿ ಮನಗೂಳಿ ಮಾಹಿತಿ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಜುಲೈ13) : ಜಿಲ್ಲೆಯಲ್ಲಿ ಕಳೆದ ಜುಲೈ 8ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಒಟ್ಟು 2854 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಪ್ರೇಮಾವತಿ ಮನಗೂಳಿ ಎಂ ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲಾ 23 ನ್ಯಾಯಾಲಯಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ಚಾಲ್ತಿಯಲ್ಲಿದ್ದ ಪ್ರಕರಣಗಳು ರಾಜೀ ಮುಖಾಂತರ ಇತ್ಯರ್ಥ ಆಗಿರುವುದು ಸಂತೋಷದ ಸಂಗತಿ ಮತ್ತು ಮುಂದಿನ ಲೋಕ ಅದಾಲತ್‍ಗೆ ಉತ್ತೇಜನ ನೀಡಿದೆ ಎಂದು ತಿಳಿಸಿದರು.

ಲೋಕ ಅದಾಲತ್‍ನಲ್ಲಿ 5525 ಪ್ರಕರಣಗಳನ್ನು ರಾಜೀ ಸಂಧಾನಕ್ಕೆ ಕೈಗೆತ್ತಿಕೊಳ್ಳಲಾಗಿತ್ತು. ಇದರಲ್ಲಿ 2854 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಅದರಲ್ಲಿ ವಿಶೇಷವಾಗಿ 74 ಪಾಲು ವಿಭಾಗದ ಪ್ರಕರಣಗಳು, 322 ಚೆಕ್‍ಬೌನ್ಸ್ ಪ್ರಕರಣಗಳು, 122 ಕ್ರಿಮಿನಲ್ ಕಾಂಪೌಂಡ್ ಪ್ರಕರಣಗಳು, 133 ಅಪಘಾತ ವಿಮಾ ಪ್ರಕರಣಗಳು, 73 ಕೌಟುಂಬಿಕ ಪ್ರಕರಣಗಳು, 188 ಅಮಲ್ ಜಾರಿ ಪ್ರಕರಣಗಳು, 322 ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, 24 ಕರಾರಿಗೆ ಸಂಬಂಧಿಸಿದ ದಾವೆಗಳು, 166 ವಿವಿಧ ರೀತಿಯ ಸಿವಿಲ್ ದಾವೆಗಳು, 160 ಕ್ರಿಮಿನಲ್ ಕಾಂಪೌಂಡಬಲ್ ಪ್ರಕರಣಗಳು (ಐಪಿಸಿ ಹೊರತುಪಡಿಸಿ ಬೇರೆ ಕಾಯ್ದೆಗಳಲ್ಲಿ ದಾಖಲಾದ ಪ್ರಕರಣಗಳು), ಇತರೆ ಅಪರಾಧಿಕ ಕಾಯ್ದೆಗಳ ಅಡಿಯಲ್ಲಿ ಸಾವಿರಕ್ಕೂ ಹೆಚ್ಚು ಪ್ರಕರಣಗಳು ಇತ್ಯರ್ಥವಾಗಿರುವುದು ಗಮನಾರ್ಹ ಸಂಗತಿಯಾಗಿದೆ ಎಂದರು.

ಲೋಕ ಅದಾಲತ್‍ನಲ್ಲಿ ವಿಶೇಷವಾಗಿ ಚಿತ್ರದುರ್ಗದ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯದಲ್ಲಿ 29 ವರ್ಷಗಳ ಹಳೆಯದಾದ ವ್ಯಾಜ್ಯವನ್ನು ಪಕ್ಷಗಾರರು ರಾಜೀ ಮಾಡಿಕೊಂಡಿದ್ದು, ವಿವಾದಕ್ಕೆ ತಾರ್ಕಿಕ ಅಂತ್ಯ ಸಿಕ್ಕಿದೆ. ಹಿರಿಯೂರಿನ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಮೂಲ ದಾವೆಯಲ್ಲಿ ರೂ.5,06,92,092/- ಮೊತ್ತದ (ಐದು ಕೋಟಿ ಆರು ಲಕ್ಷ ತೊಂಭತ್ತೆರಡು ಸಾವಿರದ ತೊಂಭತ್ತೆರಡು ರೂಪಾಯಿಗಳು) ಪರಿಹಾರದ ಹಣವನ್ನು ರಾಜೀ ಮೂಲಕ ಇತ್ಯರ್ಥಪಡಿಸಿರುವುದು ವಿಶೇಷವಾಗಿದೆ.

ಈ ಪ್ರಕರಣವು ಒಂದೇ ಕುಟುಂಬದ ಸದಸ್ಯರ ನಡುವಿನ ವ್ಯಾಜ್ಯದಿಂದಾಗಿ ಭೂಸ್ವಾಧೀನದ ಪರಿಹಾರದ ಹಣವನ್ನು ಕೋರ್ಟಿನಲ್ಲಿ ಡಿಫಾಸಿಟ್ ಮಾಡಲಾಗಿತ್ತು. ಇದೀಗ ಕುಟುಂಬದ ಸದಸ್ಯರೆಲ್ಲರೂ ಲೋಕ ಅದಾಲತ್‍ನಲ್ಲಿ ರಾಜೀ ಮಾಡಿಕೊಂಡು ಪ್ರಕರಣ ಇತ್ಯರ್ಥ ಪಡಿಸಲಾಗಿದೆ.

ಅಲ್ಲದೇ ಹೊಸದುರ್ಗದ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ 13 ವರ್ಷಗಳಿಂದ ದೂರವಿದ್ದ ದಂಪತಿಗಳ ರಾಜೀ ಮಾಡಿ ಒಂದಾಗಿ ಹೋಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಲೋಕ ಅದಾಲತ್‍ಗೆ ಸಹಕರಿಸಿದ ವಕೀಲರು, ವಿಮಾ ಕಂಪನಿಗಳು, ಪೊಲೀಸ್ ಇಲಾಖೆ, ಕೆಪಿಟಿಸಿಎಲ್, ಪೈನಾನ್ಸ್ ಕಂಪನಿಗಳು, ಪಕ್ಷಗಾರರು, ನಗರಸಭೆ ಮತ್ತು ಇತರೆ ಇಲಾಖೆಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಧನ್ಯವಾದ ಸಲ್ಲಿಸಿದ ಅವರು, ಮುಂಬರುವ ಸೆಪ್ಟೆಂಬರ್ 9ಕ್ಕೆ ರಾಷ್ಟ್ರೀಯ ಲೋಕ ಅದಾಲತ್ ನಿಗಧಿಯಾಗಿದ್ದು, ಇನ್ನೂ ಹೆಚ್ಚಿನ ಪ್ರಕರಣಗಳನ್ನು ರಾಜೀ ಮೂಲಕ ಬಗೆಹರಿಸಿಕೊಳ್ಳಲು ಸಾರ್ವಜನಿಕರಲ್ಲಿ ವಿನಂತಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

error: Content is protected !!