ರತನ್ ಟಾಟಾ ಅವರ ಕೊನೆಯ ಪೋಸ್ಟರ್ ವೈರಲ್ : ಸೋಷಿಯಲ್ ಮೀಡಿಯಾದಲ್ಲಿ ಅವರಾಕಿದ್ದು ಏನು ಗೊತ್ತಾ..?

ಹಿರಿಯ ಉದ್ಯಮಿ, ಕೈಗಾರಿಕೋದ್ಯಮದ ಸಾಮ್ರಾಜ್ಯ ಕಟ್ಟಿದ ಧೀಮಂತ ಇಂದು ನಮ್ಮೊಡನೆ ಇಲ್ಲ. ವಯೋ ಸಹಜ ಕಾಯಿಲೆಯಿಂದ ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ರತನ್ ಟಾಟಾ ಅವರ ಆರೋಗ್ಯದ ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತಿದ್ದವು. ಗಂಭೀರ ಪರಿಸ್ಥಿತಿಯಲ್ಲಿದ್ದಾರೆ ಎನ್ನಲಾಗಿತ್ತು. ಆ ವದಂತಿಗಳನ್ನು ತಳ್ಳಿ ಹಾಕುವ ಪ್ರಯತ್ನವನ್ನು ರತನ್ ಟಾಟಾ ಅವರು ಮಾಡಿದ್ದರು. ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕ ವದಂತಿಗಳಿಗೆ ತೆತೆ ಎಳೆದಿದ್ದರು. ಆ ಕೊನೆಯ ಪೋಸ್ಟ್ ಈಗ ವೈರಲ್ ಆಗುತ್ತಿದೆ.

ಆ ಪೋಸ್ಟ್ ನಲ್ಲಿ ‘ನನ್ನ ಬಗ್ಗೆ ಯೋಚಿಸಿದ್ದಕ್ಕಾಗಿ ಧನ್ಯವಾದಗಳು’ ಎಂದು ಬರೆದಿದ್ದರು. ‘ನನ್ನ ಆರೋಗ್ಯದ ಬಗ್ಗೆ ಹರಡುತ್ತಿರುವ ಇತ್ತೀಚಿನ ವದಂತಿಗಳ ಬಗ್ಗೆ ನನಗೆ ತಿಳಿದಿದೆ ಮತ್ತು ಈ ಹಕ್ಕುಗಳು ಆಧಾರರಹಿತವಾಗಿವೆ ಎಂದು ಎಲ್ಲರಿಗೂ ಭರವಸೆ ನೀಡಲು ನಾನು ಬಯಸುತ್ತೇನೆ. ನನ್ನ ವಯಸ್ಸು ಮತ್ತು ಸಂಬಂಧಿತ ವೈದ್ಯಕೀಯ ಪರಿಸ್ಥಿತಿಗಳಿಂದಾಗಿ ನಾನು ಪ್ರಸ್ತುತ ವೈದ್ಯಕೀಯ ತಪಾಸಣೆಗೆ ಒಳಗಾಗುತ್ತಿದ್ದೇನೆ. ನಾನು ಉತ್ತಮ ಉತ್ಸಾಹದಲ್ಲಿ ಇದ್ದೇನೆ’ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು.

ಆ ಪೋಸ್ಟ್ ನೋಡಿದ ಸಾಕಷ್ಟು ಜನ ಅವರಿಗೆ ಹರಸಿ, ಹಾರೈಸಿದ್ದರು. ಆದಷ್ಟು ಬೇಗ ಗುಣಮುಖರಾಗಿ ಬನ್ನಿ ಎಂದು ಕೇಳಿದ್ದರು. ದೇವರಲ್ಲಿಯೂ ಪ್ರಾರ್ಥನೆ ಸಲ್ಲಿಸಿದ್ದರು. ಆದರೆ ಇಂದು ಅವರಿಲ್ಲ ಎಂಬ ಸತ್ಯವನ್ನು ಅರಗಿಸಿಕೊಳ್ಳಲಾಗದೆ ದುಃಖಿತರಾಗಿದ್ದಾರೆ. ಎರಡು ದಿನದ ಹಿಂದೆ ಪೋಸ್ಟ್ ಹಾಕಿದ್ದ ವ್ಯಕ್ತಿ ಜಗತ್ತನ್ನೇ ತೊರೆದು ಹೋಗಿದ್ದಾರೆ. ಇಂದು ಮಧ್ಯಾಹ್ನದವರೆಗೆ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಟ್ಟು ಸಂಜೆ ವೇಳೆಗೆ ಅಂತ್ಯ ಸಂಸ್ಕಾರ ಮಾಡಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *