ಸುದ್ದಿಒನ್,ಬೆಂಗಳೂರು,ಮೇ.09:ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ ನೀಡಿದೆ. ರಾಜ್ಯಾದ್ಯಂತ ಪಡಿತರ ಚೀಟಿ (Ration Card) ತಿದ್ದುಪಡಿ ಹಾಗೂ ಹೊಸ ಕಾರ್ಡ್ಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಅಧಿಕೃತವಾಗಿ ಆರಂಭಗೊಂಡಿದೆ.
ಇ-ಶ್ರಮ (E-Shram), ಪಿವಿಟಿಜಿ (PVTG) ಹಾಗೂ ವೈದ್ಯಕೀಯ ತುರ್ತು ಪರಿಸ್ಥಿತಿಗೆ ಸಂಬಂಧಿಸಿದ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಮತ್ತು ಅನುಮೋದನೆ ಮಾಡ್ಯೂಲ್ಗಳನ್ನು ಸಕ್ರಿಯಗೊಳಿಸಲಾಗಿದೆ. ಇದರೊಂದಿಗೆ GSC/ತಿದ್ದುಪಡಿ ಅರ್ಜಿ ಸಲ್ಲಿಕೆ ಮತ್ತು ಅನುಮೋದನೆ ಪ್ರಕ್ರಿಯೆಯೂ ಸಹ ಎಲ್ಲಾ ಮೂರು ಸರ್ವರ್ ಗಳಲ್ಲಿ ಲಭ್ಯವಿದೆ.ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆಗೆ ಮೇ 08, 2026 ರಿಂದ ಮಾರ್ಚ್ 31, 2027 ರವರೆಗೆ ಅವಕಾಶವಿರುತ್ತದೆ. ಅರ್ಜಿಗಳನ್ನು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ ಸಲ್ಲಿಸಬಹುದು.
ಹೊಸ ಪಡಿತರ ಚೀಟಿ FI ಅನುಮೋದನೆ: ಮೇ 08, 2026 ರಿಂದ ಮಾರ್ಚ್ 31, 2027 ರವರೆಗೆ, ಬೆಳಗ್ಗೆ 10:00 ರಿಂದ ರಾತ್ರಿ 09:00 ಗಂಟೆಯವರೆಗೆ ಈ ಪ್ರಕ್ರಿಯೆ ನಡೆಯಲಿದೆ.
GSC / ತಿದ್ದುಪಡಿ ಅರ್ಜಿ ಸಲ್ಲಿಕೆ: ರೇಷನ್ ಕಾರ್ಡ್ ತಿದ್ದುಪಡಿಗಾಗಿ ಮೇ 08, 2026 ರಿಂದ ಮಾರ್ಚ್ 31, 2027 ರವರೆಗೆ ಸಮಯ ನೀಡಲಾಗಿದೆ. ಸಾರ್ವಜನಿಕರು ಬೆಳಗ್ಗೆ 10:00 ರಿಂದ ಸಂಜೆ 05:00 ರ ಅವಧಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. GSC / ತಿದ್ದುಪಡಿ FI ಅನುಮೋದನೆ: ತಿದ್ದುಪಡಿ ಅರ್ಜಿಗಳ ಅನುಮೋದನೆಯು ಮೇ 08, 2026 ರಿಂದ ಮಾರ್ಚ್ 31, 2027 ರವರೆಗೆ, ಬೆಳಗ್ಗೆ 10:00 ರಿಂದ ರಾತ್ರಿ 09:00 ಗಂಟೆಯವರೆಗೆ ನಡೆಯಲಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








