Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಷನ್ ಕಾರ್ಡ್ ಇ-ಕೆವೈಸಿ ಅವಧಿ ಅ.20ರವರೆಗೆ ವಿಸ್ತರಣೆ: ಪಡಿತರ ವಿತರಣಾ ಸಮಯದಲ್ಲೂ ಬದಲಾವಣೆ

---Advertisement---

ಬೆಂಗಳೂರು.ಸೆಪ್ಟೆಂಬರ್.22: ರಾಜ್ಯದ ಜನಸಾಮಾನ್ಯರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ ಪಡಿತರ ಪಡೆಯುವ ಪ್ರಕ್ರಿಯೆಯನ್ನು ಇನ್ನಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಈ ಹಿಂದೆ ಸೆಪ್ಟೆಂಬರ್ 30ರವರೆಗೆ ನಿಗದಿಯಾಗಿದ್ದ ರೇಷನ್ ಕಾರ್ಡ್‌ಗಳ ಇ-ಕೆವೈಸಿ (e-KYC) ಪ್ರಕ್ರಿಯೆಯ ಅಂತಿಮ ಗಡುವನ್ನು ಇದೀಗ ಅಕ್ಟೋಬರ್ 20ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ.

 

ಇದರ ಜೊತೆಗೆ, ಸಾರ್ವಜನಿಕರ ಅನುಕೂಲಕ್ಕಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯ ಸಮಯದಲ್ಲೂ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಮೊದಲು ದಿನಕ್ಕೆ 6 ಗಂಟೆಗಳ ಕಾಲ ಪಡಿತರ ವಿತರಣೆ ಮಾಡಲಾಗುತ್ತಿದ್ದು, ಇನ್ನು ಮುಂದೆ ಅದನ್ನು 8 ಗಂಟೆಗಳಿಗೆ ಹೆಚ್ಚಿಸಲಾಗಿದೆ.

ಹೊಸ ವೇಳಾಪಟ್ಟಿಯ ಪ್ರಕಾರ, ಪ್ರತಿದಿನ ಬೆಳಗ್ಗೆ 7:00 ರಿಂದ ಮಧ್ಯಾಹ್ನ 12:00 ರವರೆಗೆ ಹಾಗೂ ಸಂಜೆ 4:00 ರಿಂದ ರಾತ್ರಿ 8:00 ರವರೆಗೆ ಸಾರ್ವಜನಿಕರಿಗೆ ಪಡಿತರ ವಿತರಿಸಲು ಸೂಚಿಸಲಾಗಿದೆ. ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಪಡಿತರ ತಲುಪಿಸುವುದು ಹಾಗೂ ಪ್ರತಿಯೊಂದು ಕುಟುಂಬಕ್ಕೂ ನೆಮ್ಮದಿ ಕಲ್ಪಿಸುವುದೇ ಸರ್ಕಾರದ ಮುಖ್ಯ ಉದ್ದೇಶವಾಗಿದೆ.

Join WhatsApp

Join Now

Join Telegram

Join Now