Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಡಿತರ ಅಪ್ಡೇಟ್ : ಅಕ್ಕಿ ಬದಲಿಗೆ ಬರ್ತಿದ್ದ ಹಣಕ್ಕೆ ಬ್ರೇಕ್ : ಸರ್ಕಾರದ ನಿರ್ಧಾರವೇನು ಗೊತ್ತಾ..?

---Advertisement---

ಬೆಂಗಳೂರು: ರಾಜ್ಯ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೂ ಮುನ್ನ ಗ್ಯಾರಂಟಿ ಯೋಜನೆಗಳನ್ನ ಘೋಷಣೆ ಮಾಡಿತ್ತು. ಅದರಂತೆ ಎಷ್ಟೇ ಕಷ್ಟವಾದರೂ ಸಹ ಗ್ಯಾರಂಟಿಗಳನ್ನ ನಿಭಾಯಿಸಿಕೊಂಡು ಬಂದಿದೆ. ಅದರಲ್ಲಿ ಅನ್ನಭಾಗ್ಯ ಯೋಜನೆಯೂ ಒಂದು. ಆರಂಭದಿಂದ ಐದು ಕೆಜಿ ಅಕ್ಕಿ ಇನ್ನುಳಿದ ಐದು ಕೆಜಿ ಅಕ್ಕಿ ಬದಲಿಗೆ ಹಣವನ್ನ ನೀಡುತ್ತಾ ಇತ್ತು. ಈಗ ಈ ವಿಚಾರದಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನ ಕೈಗೊಂಡಿದೆ.

ಫಲಾನುಭವಿಗಳಿಗೆ ನೀಡುತ್ತಿದ್ದ ಹಣವನ್ನು ಸರ್ಕಾರ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ರಾಜ್ಯ ಸರ್ಕಾರ ಆ ನಿರ್ಧಾರದಲ್ಲಿ ಬದಲಾವಣೆ ಮಾಡಿಕೊಂಡಿದ್ದು, ಪ್ರತಿ ಫಲಾನುಭವಿಗಳಿಗೆ 10 ಕೆಜಿ ಅಕ್ಕಿಯನ್ನು ನೀಡಲು ನಿರ್ಧರಿಸಿದೆ‌. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಮಹತ್ವದ ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ವಿತರಿಸಲಾಗುವುದು ಎಂದು ಇಲಾಖೆ ಕಡೆಯಿಂದ ಪ್ರಕಟಣೆ ಹೊರಡಿಸಿದೆ.

ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗಳಿಗೆ 10 ಕೆಜಿ ಅಕ್ಕಿಯನ್ನು ವಿತರಿಸಲು ಚುನಾವಣೆಯ ಸಂದರ್ಭದಲ್ಲಿ ಘೋಷಣೆ ಮಾಡಲಾಗಿತ್ತು. ನಂತರದ ದಿನಗಳಲ್ಲಿ ಅಕ್ಕಿ ಲಭ್ಯವಾಗದ ಕಾರಣ ನಮ್ಮ ಸರ್ಕಾರ ಸಾರ್ವಜನಿಕರಿಗೆ ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ. ಪ್ರತಿ ಫಲಾನುಭವಿಗೆ 5 ಕೆಜಿ ಅಕ್ಕಿಯ ಜೊತೆಗೆ ಉಳಿದ 5 ಕೆಜಿ ಅಕ್ಕಿಗೆ 170 ರೂಪಾಯಿ ನೇರ ನಗದು ವರ್ಗಾವಣೆ ಮಾಡುತ್ತಿದೆ. ಕೇಂದ್ರ ಸರ್ಕಾರದಿಂದ ಅಕ್ಕಿ ಲಭ್ಯವಿರುವ ಹಿನ್ನಲೆಯಲ್ಲಿ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯನ್ನು ಒಎಂಎಸ್ಎಸ್ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದಿಂದ ಖರೀದಿಸಿ 2025 ಮಾಹೆಯಿಂದ ಅಕ್ಕಿಯನ್ನು ವಿತರಿಸಲು ತೀರ್ಮಾನಿಸಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment