Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೆನ್ಸಾರ್ ಮಂಡಳಿಯಲ್ಲಿ ಯು-ಎ ಸರ್ಟಿಫಿಕೇಟ್ ಪಡೆದ ರವಿಕೆ ಪ್ರಸಂಗ’

---Advertisement---

ಮಂಗಳೂರು: ರವಿಕೆ ಪ್ರಸಂಗ ಸಿನಿಮಾ ಮೂಲಕ ಗೀತಾ ಭಾರತೀ ಮೋಡಿ ಮಾಡಲು ಬರುತ್ತಿದ್ದಾರೆ. ಬ್ರಹ್ಮಗಂಟು ಸೀರಿಯಲ್ ಆದ್ಮೇಲೆ ಗೀತಾ ಅವರನ್ನ ಎಲ್ಲರೂ ಮಿಸ್ ಮಾಡಿಕೊಳ್ಳುತ್ತಾ ಇದ್ದರು. ಇದೀಗ ಬೇಳ್ಳಿ ತೆರೆ ಮೇಲೆ ಮನೆ ಮಗಳು ಗುಂಡಮ್ಮನನ್ನು ನೋಡಲು ಕಾತುರರಾಗಿದ್ದಾರೆ. ಈಗಾಗಲೇ ರವಿಕೆ ಪ್ರಸಂಗ ಸಿನಿಮಾ ಸೆನ್ಸಾರ್ ಮಂಡಳಿಯಿಂದಾನು ಶಬ್ಬಾಶ್ ಎನಿಸಿಕೊಂಡಿದೆ.

ದೃಷ್ಟಿ ಮೀಡಿಯಾ ಪ್ರೊಡಕ್ಷನ್ ನಡಿ ತಯಾರಾದ ಸಂತೋಷ್ ಕೊಡೆಂಕೇರಿ ನಿರ್ದೇಶನದ ರವಿಕೆ ಪ್ರಸಂಗ ಸಿನಿಮಾವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಿ ಯು-ಎ ಸರ್ಟಿಫಿಕೇಟ್ ನೀಡಿದೆ.
ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆಗೊಂಡು ಜನರಿಂದ ಮೆಚ್ಚುಗೆ ಗಳಿಸಿದೆ. ಸಿನಿಮಾ ಫೆಬ್ರವರಿ 16 ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್‌ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ ‘ರವಿಕೆ ಪ್ರಸಂಗ’. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸ‌ರ್ ಮತ್ತು ಟ್ರೈಲರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ರವಿಕೆ ಅಂದರೆ ಬ್ಲೌಸನ್ನು ಪ್ರಮುಖವಾಗಿ ಇಟ್ಟುಕೊಂಡು ಕೌಟುಂಬಿಕ ಕಥಾ ಹಂದರದಿಂದ ಹಾಸ್ಯಭರಿತ ಉತ್ತಮ ಸಂದೇಶವನ್ನು ಸಮಾಜಕ್ಕೆ ತಿಳಿಸುವ ಪ್ರಯತನವನ್ನು ನಿರ್ದೇಶಕರು ರವಿಕೆಪ್ರಸಂಗ ಸಿನಿಮಾದಲ್ಲಿ ಮಾಡಿದ್ದಾರೆ.

ರವಿಕೆ ಪ್ರಸಂಗ ಸಿನಿಮಾವನ್ನು ಮಾಷ್೯ ಡಿಸ್ಟ್ರಿಬ್ಯುಟರ್ಸ್ ಸಂಸ್ಥೆ ವಿಶಾಲ ಕರ್ನಾಟಕದಲ್ಲಿ ಬಿಡುಗಡೆಗೊಳಿಸಲಿದ್ದಾರೆ. ಜೊತೆಗೆ ವಿದೇಶದಲ್ಲೂ ಸಿನಿಮಾ ಬಿಡುಗಡೆಗೊಳ್ಳಲಿದೆ. ಕುಟುಂಬ ಸಮೇತ ನೋಡಬೇಕಾದ ಸಿನಿಮಾ ಇದಾಗಿದೆ. ಪ್ರತಿಯೊಬ್ಬ ಮಹಿಳೆಯರ ಜೀವನದಲ್ಲಿ ನಡೆಯುವಂತಹ ಕತೆಯನ್ನು ಈ ಸಿನಿಮಾ ಹೊಂದಿದೆ.

ಈ ಚಿತ್ರಕ್ಕೆ ಪಾವನಾ ಸಂತೋಷ್ ಕಥೆ ಸಂಭಾಷಣೆ ಬರೆದಿದ್ದಾರೆ. ಸಾಮಾನ್ಯವಾಗಿ ಸೀರೆ ಅಂದರೆ ಹೆಣ್ಣು ಮಕ್ಕಳಿಗೆ ಬಹಳ ಇಷ್ಟ ಅದರಲ್ಲೂ ಸೀರೆ ಎಷ್ಟು ಚೆನ್ನಾಗಿರುತ್ತೋ, ಅಷ್ಟೇ
ಸುಂದರವಾಗಿ ಬ್ಲೌಸ್ ಇರಬೇಕು. ಸಾವಿರಾರೂ ಖರ್ಚು ಮಾಡಿ ರವಿಕೆ ಹೊಲಿಸುತ್ತಾರೆ. ಒಂದು ಸಮಾರಂಭಕ್ಕೆ ಇಂಥದ್ದೇ ಸೀರೆ ಹೀಗೆ ಇರಬೇಕು ಅಂತ ಆಸೆಯಿಂದ ಒಳ್ಳೆಯ ಟೇಲರ್‌ ಹತ್ತಿರ ರವಿಕೆ ಹೊಲಿಸುತ್ತಾರೆ. ಆದರೆ, ಪ್ರತಿ ಬಾರಿ ಆ ರವಿಕೆ ಪರ್ಫೆಕ್ಟ್ ಆಗಿ ಇರಲ್ಲ. ಏನೋ ಒಂದು ಸರಿಯಾಗಿರಲ್ಲ. ಇಂಥದ್ದೇ ಸರಿಹೊಂದದ ರವಿಕೆಯ ರಗಳೆಯ ಕಾಮಿಡಿ ಕಥೆ ‘ರವಿಕೆ ಪ್ರಸಂಗ’. ಚಿತ್ರದಲ್ಲಿ ಒಂದು ರವಿಕೆಯಿಂದ ನಾಯಕಿಯ ಜೀವನದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ಎನ್ನುವುದನ್ನು ಹೇಳಲಾಗಿದ್ದು, ಚಿತ್ರದಲ್ಲಿ ಮಂಗಳೂರು ಕನ್ನಡ ಶೈಲಿ ಬಳಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುತ್ತಮುತ್ತಲು ಚಿತ್ರೀಕರಣ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...