Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮತ್ತೆ ಅರ್ಜಿ ಸಲ್ಲಿಕೆ : ಫಲಾನುಭವಿಗಳಿಗೆ ಏನೆಲ್ಲಾ ದಾಖಲೆ ಬೇಕು?

---Advertisement---

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಅತಿ ಹೆಚ್ಚು ಜನಪ್ರಿಯತೆ ಪಡೆದಿರುವ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಯೋಜನೆಗಳಲ್ಲಿ ಈಗ ಭಾರಿ ಬದಲಾವಣೆ ತರಲು ಸರ್ಕಾರ ಮುಂದಾಗಿದೆ. ಈ ಎರಡೂ ಯೋಜನೆಗಳಲ್ಲಿ ಆಗುತ್ತಿರುವ ಅಕ್ರಮ ಮತ್ತು ನಕಲಿ ಫಲಾನುಭವಿಗಳನ್ನು ಪತ್ತೆ ಹಚ್ಚುವ ಉದ್ದೇಶದಿಂದ, ಅರ್ಹರು ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಮಾಹಿತಿ ಪ್ರಕಾರ, ಗ್ಯಾರಂಟಿ ಯೋಜನೆಗಳು ವ್ಯಾಪಕವಾಗಿ ದುರ್ಬಳಕೆಯಾಗುತ್ತಿವೆ. ಪ್ರಸ್ತುತ 1.28 ಕೋಟಿ ಫಲಾನುಭವಿಗಳಿದ್ದು, ಈ ಪೈಕಿ ಸುಮಾರು 4.30 ಲಕ್ಷಕ್ಕೂ ಹೆಚ್ಚು ಮಂದಿ ತೆರಿಗೆ ಪಾವತಿದಾರರು (Tax Payers) ಇದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲದೆ, ಮೃತಪಟ್ಟ ಮಹಿಳೆಯರ ಖಾತೆಗಳಿಗೂ ಇನ್ನೂ ಹಣ ಜಮೆಯಾಗುತ್ತಿದ್ದು, ಸುಮಾರು 100 ಕೋಟಿ ರೂ.ಗಳಿಗೂ ಅಧಿಕ ಹಣ ದುರ್ಬಳಕೆಯಾಗಿದೆ ಎಂದು ಹೇಳಲಾಗಿದೆ. ಕೆಲವರು ಬೇರೆ ಬೇರೆ ಮೊಬೈಲ್ ಸಂಖ್ಯೆಗಳನ್ನು ಲಿಂಕ್ ಮಾಡಿ ಅಕ್ರಮವಾಗಿ ಹಣ ಪಡೆಯುತ್ತಿದ್ದಾರೆ.

1.68 ಕೋಟಿಗೂ ಅಧಿಕ ಗ್ರಾಹಕರು ಗೃಹಜ್ಯೋತಿ ಸೌಲಭ್ಯ ಪಡೆಯುತ್ತಿದ್ದು, ಕೆಲವರು ಒಂದಕ್ಕಿಂತ ಹೆಚ್ಚು (ಐದಾರು) ಮೀಟರ್‌ ಗಳಿಗೂ ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ. ಅಲ್ಲದೆ ವಾಸವಿರುವವರು ನಿಜಕ್ಕೂ ಕರ್ನಾಟಕದವರೇ ಅಥವಾ ಹೊರ ರಾಜ್ಯದವರೇ ಎಂಬುದನ್ನು ಪತ್ತೆ ಹಚ್ಚಲು ಸರ್ಕಾರ ಮುಂದಾಗಿದೆ. ವಾಸದ ಮನೆ ಮತ್ತು ವ್ಯಾಪಾರ ಮಳಿಗೆ ಎರಡನ್ನೂ ಒಟ್ಟಿಗೆ ಹೊಂದಿರುವವರು ಗೃಹಜ್ಯೋತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕೇವಲ ವಾಸದ ಮನೆಗೆ ಮಾತ್ರ ಉಚಿತ ವಿದ್ಯುತ್ ಸೀಮಿತ ಎಂದು ಸ್ಪಷ್ಟಪಡಿಸಿದ್ದಾರೆ.

ಹೊಸ ಅರ್ಜಿ ಪ್ರಕ್ರಿಯೆ ಮತ್ತು ನಿಯಮಗಳು

ಈ ಬಾರಿ ಮರು ಅರ್ಜಿ ಸಲ್ಲಿಸುವವರಿಗೆ ಸರ್ಕಾರದಿಂದ ಹೊಸ ‘ಗ್ಯಾರಂಟಿ ಕಾರ್ಡ್’ ನೀಡಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಗೃಹಲಕ್ಷ್ಮಿ ಯೋಜನೆಗಾಗಿ ಹೊಸ ಅರ್ಜಿಯನ್ನು ಸಿದ್ಧಪಡಿಸಿದ್ದು, ಅದರಲ್ಲಿ ಪ್ರಮುಖವಾಗಿ 8 ರಿಂದ 10 ಪ್ರಶ್ನೆಗಳನ್ನು ಒಳಗೊಂಡಿರಲಿದೆ. ಫಲಾನುಭವಿಗಳು ಕಡ್ಡಾಯವಾಗಿ ಬಯೋಮೆಟ್ರಿಕ್ ನೀಡುವುದರ ಜೊತೆಗೆ ಕೆಳಗಿನ ವಿವರಗಳನ್ನು ಒದಗಿಸಬೇಕಾಗುತ್ತದೆ:
ಮನೆಯ ಯಜಮಾನಿ ಯಾರು ಮತ್ತು ಅವರ ಆಧಾರ್ ಸಂಖ್ಯೆ.

ಯಜಮಾನಿಯ ಬ್ಯಾಂಕ್ ಖಾತೆ ವಿವರಗಳು.

ಈ ಹಿಂದೆ ಮನೆಯಲ್ಲಿ ಎಷ್ಟು ಜನರಿಗೆ ಹಣ ಬರುತ್ತಿತ್ತು ಎಂಬ ಮಾಹಿತಿ.

ಪತಿಯ ಹೆಸರು ಮತ್ತು ಅವರ ಆಧಾರ್ ಕಾರ್ಡ್ ವಿವರ.

ಜಾತಿ ಮತ್ತು ಇತರ ಕುಟುಂಬದ ಸದಸ್ಯರ ಮಾಹಿತಿ.

ದುರ್ಬಳಕೆ ತಡೆದು ಕೇವಲ ಅರ್ಹ ಬಡ ಕುಟುಂಬಗಳಿಗೆ ಮಾತ್ರ ಯೋಜನೆ ತಲುಪಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಈ ಕಠಿಣ ಕ್ರಮಕ್ಕೆ ಮುಂದಾಗಿದೆ. ಆದರೆ, ಸರ್ಕಾರದ ಈ ನಿರ್ಧಾರಕ್ಕೆ ಈಗಾಗಲೇ ಸೌಲಭ್ಯ ಪಡೆಯುತ್ತಿದ್ದ ಹಲವು ಮಹಿಳೆಯರು ಮತ್ತು ಸಾರ್ವಜನಿಕರಿಂದ ತೀವ್ರ ಆಕ್ರೋಶವೂ ವ್ಯಕ್ತವಾಗುತ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now