Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿಕ್ಕಮಗಳೂರು ಪರಿಷತ್ ಚುನಾವಣೆಯ ಮರು ಮತ ಎಣಿಕೆ : ಕಾಂಗ್ರೆಸ್ ನ ಮೂರು ವರ್ಷಗಳ ಹೋರಾಟಕ್ಕೆ ಇಂದು ಉತ್ತರ

---Advertisement---

ಬೆಂಗಳೂರು; ಇಂದು ಇಡೀ ಚಿಕ್ಕಮಗಳೂರು ಮಂದಿ ಸುಪ್ರೀಂ ತೀರ್ಪಿಗಾಗಿ ಕಾಯುತ್ತಿದ್ದಾರೆ. ಚಿಕ್ಕಮಗಳೂರು ಪರಿಷತ್ ನ ಮರು ಮತ ಎಣಿಕೆ ಸುಪ್ರೀಂ ಅಂಗಳ ತಲುಪಿದೆ. ಇಂದು ಆ ಸಂಬಂಧ ಮಹತ್ವದ ತೀರ್ಪು ಹೊರ ಬರಲಿದೆ. ಹೀಗಾಗಿ ಎಲ್ಲರೂ ಸುಪ್ರೀಂ ಕೋರ್ಟ್ ಕೊಡುವ ತೀರ್ಪಿನ ಕಡೆಗೆ ಗಮನ ಹರಿಸಿದ್ದಾರೆ. ಮೂರು ವರ್ಷಗಳ ಬಳಿಕ ಎಂಎಲ್ಸಿ ಚುನಾವಣೆಯ ಮರು ಎಣಿಕೆ‌ ಮುಗಿದಾಗಿತ್ತು. ನಿನ್ನೆ ಈ ಮರು ಎಣಿಕೆ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್ ಗೆ ತಲುಪಿದೆ.

ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳಿಂದ ನಡೆದಿದ್ದ ಚುನಾವಣೆಯ ಮರು ಮತ ಎಣಿಕೆ ಫಲಿತಾಂಶ ಇಂದು ಹೊರ ಬೀಳಲಿದೆ. ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಫೆಬ್ರವರಿ 28ರಂದು ಮರು ಮತ ಎಣಿಕೆ ಕಾರ್ಯ ನಡೆದಿತ್ತು. ಕಳೆದ ಮೂರು ವರ್ಷದಿಂದ ಕಾಂಗ್ರೆಸ್ ನಡೆಸುತ್ತಿದ್ದ ಹೋರಾಟಕ್ಕೆ ಇಂದು ಜಯ ಸಿಗುವ ನಿರೀಕ್ಷೆ ಇದೆ. ಸುಪ್ರೀಂ ನಿಂದ ತೀರ್ಪಂತು ಹೊರಬೀಳಲಿದ್ದು, ಯಾರಿಗೆ ಗೆಲುವು ಸಿಗಲಿದೆ, ಯಾರೂ ಸೋಲಲಿದ್ದಾರೆ ಅನ್ನೋದಂತು ತಿಳಿಯಲಿದೆ.

ಅಷ್ಟಕ್ಕೂ ಮರು ಮತ ಎಣಿಕೆಯಾಗಲು ಕಾರಣವೇನು..? ಸುಪ್ರೀಂ ಅಂಗಳ ತಲುಪುವುದಕ್ಕೆ ಕಾರಣವೇನು ಎಂಬುದನ್ನು ನೋಡುವುದಾದರೆ, 2021 ರ ಡಿಸೆಂಬರ್ 10 ರಂದು ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಗೆ ಚುನಾವಣೆ ನಡೆದಿತ್ತು. ಆಗ ಕಾಂಗ್ರೆಸ್ ನ ಎ.ವಿ.ಗಾಯತ್ರಿ ಶಾಂತೇಗೌಡ ವಿರುದ್ಧ ಎಂ.ಕೆ.ಪ್ರಾಣೇಶ್ ಕೇವಲ 6 ಮತಗಳ ಅಂತರದಲ್ಲಿ ಗೆಲುವು ಸಾಧಿಸಿ ಪರಿಷತ್ ಗೆ ಪ್ರವೇಶ ಪಡೆದಿದ್ದರು. ಆದರೆ ಇದರಲ್ಲಿ 12 ಜನ ನಾಮನಿರ್ದೇಶಿತರು ಮತ ಚಲಾಯಿಸಿದ್ದರು. ನಾಮನಿರ್ದೇಶಿತರ ಮತದಾನ ಪ್ರಶ್ನಿಸಿ ಗಾಯತ್ರಿ ಕೋರ್ಟ್ ಮೆಟ್ಟೇರಿದ್ದರು. ಕೋರ್ಟ್ ಮರುಮತದಾನಕ್ಕೆ ಆದೇಶ ನೀಡಿತ್ತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment