Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಗರ್‍ಹುಕುಂ ಅರ್ಜಿಗಳನ್ನು ಮರು ಪರಿಶೀಲಿಸಿ : ಕುಮಾರ್ ಸಮತಳ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07 : ಕಾನೂನು ತೊಡಕುಗಳನ್ನು ಮುಂದಿಟ್ಟುಕೊಂಡು ಬಗರ್‍ಹುಕುಂ ಸಾಗುವಳಿದಾರರು ಸಲ್ಲಿಸಿರುವ ಅರ್ಜಿಗಳನ್ನು ತಿರಸ್ಕರಿಸಿವುದನ್ನು ಮರು ಪರಿಶೀಲಿಸಿ ಹಕ್ಕುಪತ್ರತಗಳನ್ನು ನೀಡುವಂತೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ರಾಜ್ಯ ಕಾರ್ಯದರ್ಶಿ ಕುಮಾರ್ ಸಮತಳ ಒತ್ತಾಯಿಸಿದರು.

ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ 25 ಲಕ್ಷ ಅರ್ಜಿಗಳು ಬಾಕಿಯಿದ್ದು, ಸಾಮಾಜಿಕ ಭದ್ರತೆ, ಬಡವರ ರಕ್ಷಣೆಗಾಗಿ ಕಾನೂನು ಬದಲಾವಣೆ ಮಾಡಿ ಬಗರ್‍ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರಗಳನ್ನು ಕೊಡದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು. ಬಡವರು, ದಲಿತರು, ಹಿಂದುಳಿದವರ ಭವಿಷ್ಯದ ಪ್ರಶ್ನೆಯಾಗಿರುವುದರಿಂದ ಫೆ.10 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದೆಂದರು.

ಅರಣ್ಯ ಭೂಮಿಗಳನ್ನು ಸಾಗುವಳಿ ಮಾಡುತ್ತಿರುವವರು ಸಲ್ಲಿಸಿರುವ ಅರ್ಜಿಗಳನ್ನು ಅರಣ್ಯ ಹಕ್ಕು ಕಾಯಿದೆಯಡಿ ಪರಿಶೀಲಿಸಿ ಹಕ್ಕುಪತ್ರಗಳನ್ನು ನೀಡಬೇಕು. ಅಲ್ಲಿಯತನಕ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದೆಂದು ಕುಮಾರ್ ಸಮತಳ ಆಗ್ರಹಿಸಿದರು.

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಮುಖಂಡ ಸತ್ಯಪ್ಪ ಮಲ್ಲಾಪುರ ಮಾತನಾಡಿ ಸಾಗುವಳಿ ಹಕ್ಕುಪತ್ರಕ್ಕಾಗಿ ಜಿಲ್ಲೆಯಿಂದ 52 ಸಾವಿರ ಅರ್ಜಿಗಳನ್ನು ಸಲ್ಲಿಸಲಾಗಿದೆ. ಅನಾದಿ ಕಾಲದಿಂದಲೂ ಜೀವನೋಪಾಯಕ್ಕಾಗಿ ಬಗರ್‍ಹುಕುಂ ಭೂಮಿಗಳನ್ನು ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕುಪತ್ರ ನೀಡಲು ಭೂಮಿ ಇಲ್ಲ ಎನ್ನುತ್ತಿರುವ ಸರ್ಕಾರ ಕಂಪನಿಗಳಿಗೆ ಭೂಮಿ ನೀಡಲು ತುದಿಗಾಲಲ್ಲಿ ನಿಂತಿದೆ. ಸ್ಥಳೀಯವಾಗಿ ಶಾಸಕರು ಧ್ವನಿ ಎತ್ತುತ್ತಿಲ್ಲ. ಬಗರ್‍ಹುಕುಂ ಸಮಿತಿ ಸಭೆಗಳು ನಡೆದಿಲ್ಲ. ಬಾಕಿಯಿರುವ ಅರ್ಜಿಗಳನ್ನು ಪರಿಗಣಿಸಿ ತುರ್ತಾಗಿ ಸಾಗುವಳಿ ಚೀಟಿಗಳನ್ನು ನೀಡಬೇಕು. ಇಲ್ಲವಾದಲ್ಲಿ ಉಗ್ರವಾದ ಹೋರಾಟ ನಡೆಸಲಾಗುವುದೆಂದರು.

ಹೆಚ್.ವೆಂಕಟೇಶ್, ಹನುಮಂತಪ್ಪ, ರಾಮಚಂದ್ರಪ್ಪ, ಹನುಮಂತಪ್ಪ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment