ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಚಿತ್ರದುರ್ಗ: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಹಿರಿಯೂರಿನ ಆದಿ ಜಾಂಬವ ಬೃಹನ್ಮಠ ಕೋಡಿಹಳ್ಳಿಯ ಷಡಕ್ಷರಿಮುನಿ ದೇಶಿಕೇಂದ್ರ ಸ್ವಾಮೀಜಿ ಬುಧವಾರ ಉಪವಿಭಾಗಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಪರಿಶಿಷ್ಟರ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳ ಪೈಕಿ ಮಾದಿಗ ಸಮುದಾಯವು ಒಂದಾಗಿದ್ದು ಇತರೆ ಎಲ್ಲಾ ಪರಿಶಿಷ್ಠ ಜಾತಿಯವರಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿದ್ದರು.
ಜನಸಂಖ್ಯೆಗನುಗುಣವಾಗಿ ಮೀಸಲಾತಿಯಿಂದ ವಂಚನೆ ಅನುಭವಿಸಿಕೊಂಡು ಬರುತ್ತಿದೆ. ಆರ್ಥಿಕ ಶೈಕ್ಷಣಿಕ, ರಾಜಕೀಯ, ಸಾಮಾಜಿಕವಾಗಿ ಒಳಮೀಸಲಾತಿ ಮಾದಿಗ ಸಮುದಾಯಕ್ಕೆ ಅತ್ಯವಶ್ಯಕವಾಗಿದ್ದು, ಕಳೆದ 25-30 ವರ್ಷಗಳಿಂದ ಹೋರಾಟ ಮಾಡಿಕೊಂಡು ಬರುತ್ತಿದ್ದರು. ಸರ್ಕಾರಕ್ಕೆ ನಮ್ಮ ಬೇಡಿಕೆಗಳನ್ನು ಈಡೇರಿಸಲು ಇಚ್ಛಾಶಕ್ತಿ ಇದ್ದಂತಿಲ್ಲ ಹಾಗಾಗಿ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಸಮುದಾಯದ ಮಠಾಧೀಶರು, ಹೋರಾಟಗಾರರು, ವಿವಿಧ ಸಂಘಟನೆಗಳು ಚಿಂತಕರುಗಳೊಂದಿಗೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಷಡಕ್ಷರಿಮುನಿ ದೇಶಿಕೇಂದ್ರ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹೆಚ್. ಸಮರ್ಥರಾಯ್, ಎಸ್.ಎನ್. ವಿಶ್ವನಾಥಮೂರ್ತಿ, ಶಿವಕುಮಾರ್, ಶಶಿಕಿರಣ್, ಕಾರ್ತಿಕ್ ಟಿ.ಹೆಚ್. ಎಸ್.ಎನ್. ಮಹಂತೇಶ್, ದೇವರಾಜ್, ದಲಿತ ಮುಖಂಡ ಬಿ. ರಾಜಪ್ಪ, ಗುತ್ತಿಗೆದಾರ ಬ್ಯಾಲಾಳ್ ಜಯಪ್ಪ ಸೇರಿದಂತೆ ಮಾದಿಗ ಸಮುದಾಯದ ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.
ಫೋಟೊ ವಿವರಣೆ : ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಷಡಕ್ಷರಿಮುನಿ ದೇಶಿಕೇಂದ್ರ ಸ್ವಾಮೀಜಿ ಒತ್ತಾಯ.
ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…
ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…
ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…
ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…