Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BHEL ನಲ್ಲಿ ನೇಮಕಾತಿ: ನಾಳೆಯಿಂದ ಅರ್ಜಿ ಆಹ್ವಾನ

---Advertisement---

ಬೆಂಗಳೂರು: ಟರ್ನರ್,‌ ಮೆಕ್ಯಾನಿಸ್ಟ್, ಫಿಟ್ಟರ್, ಎಲೆಕ್ಟ್ರಿಷಿಯನ್, ಫೌಂಡ್ರಿ ಮ್ಯಾನ್ ಹಾಗೂ ಎಲೆಕ್ಟ್ರಾನಿಕ್ ಮೆಕ್ಯಾನಿಕ್ ಪೋಸ್ಟ್ ಗಳು ಖಾಲಿ ಇದ್ದು, ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟ್ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು. ನಾಳೆಯಿಂದಾನೇ ಅರ್ಜಿ ಸಲ್ಲಿಕೆಗೆ ದಿನಾಂಕ ಬಿಡಲಾಗಿದೆ. ಯಾರೆಲ್ಲಾ ಅರ್ಜಿ ಸಲ್ಲಿಕೆ ಮಾಡಬಹುದು, ಅರ್ಜಿ ಸಲ್ಲಿಕೆ ಹೇಗೆ ಎಂಬೆಲ್ಲಾ ಮಾಹಿತಿ ಇಲ್ಲಿದೆ.

ಬರೋಬ್ಬರಿ 515 ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಬೆಂಗಳೂರಿನಲ್ಲಿಯೇ ಉದ್ಯೋಗ ಪಡೆಯಬಹುದಾಗಿದೆ. ಆನ್ಲೈನ್ ಮೂಲಕ ಅರ್ಜಿಯನ್ನು ಹಾಕಬಹುದಾಗಿದೆ. ಕನಿಷ್ಠ ಪಕ್ಷ ಎಸ್ಎಸ್ಎಲ್ಸಿ ಯನ್ನಾದರೂ ಮುಗಿಸಿರಬೇಕು‌. ಟ್ರೇಡ್ ನಲ್ಲಿ ಐಟಿಐ, ರಾಷ್ಟ್ರೀಯ ವ್ಯಾಪಾರ ಪ್ರಮಾಣ ಪತ್ರ ಮತ್ತು ರಾಷ್ಟ್ರೀಯ ಅಪ್ರೆಂಟಿಸ್ ಶಿಪ್ ಪ್ರಮಾಣ ಪತ್ರವನ್ನು ಹೊಂದಿರಬೇಕು. ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು ಕನಿಷ್ಠ 60% ಮತ್ತು SC/ST ವರ್ಗದ ಅಭ್ಯರ್ಥಿಗಳು ಕನಿಷ್ಠ 55% ಅಂಕಗಳನ್ನು ಪಡೆದಿರಬೇಕು.

ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವವರ ವಯಸ್ಸು ಗರಿಷ್ಟ 27, ಒಬಿಸಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿ ಸಮುದಾಯಕ್ಕೆ 5 ವರ್ಷಗಳ ಸಡಿಲಿಕೆ ಮಾಡಿರುತ್ತಾರೆ. ಆಸಕ್ತ ಅರ್ಹ ಅಭ್ಯರ್ಥಿಗಳು ಮೊದಲು BHEL ವೆಬ್‌ಸೈಟ್‌ಗೆ https://bhel.com/ ಭೇಟಿ ನೀಡಬೇಕು. ಪರದೆ ಮೇಲೆ ಕಾಣುವ ‘ಅಪ್ರೆಂಟಿಸ್ ನೇಮಕಾತಿ 2025’ ಲಿಂಕ್ ಆಯ್ಕೆ ಮಾಡಿಕೊಂಡು ಹೊಸದಾಗಿ ರಜಿಸ್ಟರ್ ಮಾಡಿಕೊಳ್ಳಬೇಕು. ಅಗತ್ಯ ಮಾಹಿತಿ ನಮೂದಿಸಿ ಲಾಗಿನ್ ಆಗಬೇಕು. ಅಲ್ಲಿ ಕೇಳಲಾಗುವ ಅಗತ್ಯ ವಿವರ ಹಾಕಿ, ದಾಖಲೆ ಅಪ್‌ಲೋಡ್ ಮಾಡಬೇಕು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment