Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

6,155 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ : 10ನೇ, ಪಿಯುಸಿ, ಡಿಪ್ಲೊಮಾ, ಪದವೀಧರರಿಗೆ ಅವಕಾಶ

---Advertisement---

ದೆಹಲಿ.ಸೆಪ್ಟೆಂಬರ್.11: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಿಬ್ಬಂದಿ ನೇಮಕಾತಿ ಆಯೋಗ (SSC) ಸರಣಿ ಅಧಿಸೂಚನೆಗಳನ್ನು ಹೊರಡಿಸಿದೆ. ಪಿಯುಸಿ (ಇಂಟರ್ಮೀಡಿಯೆಟ್), ಡಿಪ್ಲೊಮಾ ಹಾಗೂ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಜೂನಿಯರ್ ಇಂಜಿನಿಯರ್, ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (CHSL), ದೆಹಲಿ ಪೊಲೀಸ್ ಮತ್ತು ಸಿಎಪಿಎಫ್ ಎಸ್‌ಐ ಸೇರಿದಂತೆ ಒಟ್ಟು 6,155 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ:

ಜೂನಿಯರ್ ಇಂಜಿನಿಯರ್ (JE): 1,748 ಹುದ್ದೆಗಳು

ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಅಥವಾ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಸಿಎಚ್‌ಎಸ್‌ಎಲ್ (CHSL): 2,536 ಹುದ್ದೆಗಳು

ಇದರಲ್ಲಿ ಲೋವರ್ ಡಿವಿಷನ್ ಕ್ಲರ್ಕ್ (LDC), ಜೂನಿಯರ್ ಸೆಕ್ರೆಟೇರಿಯಟ್ ಅಸಿಸ್ಟೆಂಟ್ (JSA) ಹಾಗೂ ಡೇಟಾ ಎಂಟ್ರಿ ಆಪರೇಟರ್ (DEO) ಹುದ್ದೆಗಳು ಒಳಗೊಂಡಿವೆ. ಪಿಯುಸಿ (10+2) ಉತ್ತೀರ್ಣರಾದವರು ಅರ್ಹರು.

ದೆಹಲಿ ಪೊಲೀಸ್ ಮತ್ತು CAPF ಸಬ್-ಇನ್‌ಸ್ಪೆಕ್ಟರ್ (SI): 1,871 ಹುದ್ದೆಗಳು

ದೆಹಲಿ ಪೊಲೀಸ್ ಹಾಗೂ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPF) ಎಸ್‌ಐ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದ್ದು, ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ.

ಒಂದೇ ಬಾರಿಗೆ ವಿವಿಧ ಇಲಾಖೆಗಳಲ್ಲಿ ಸಾವಿರಾರು ಹುದ್ದೆಗಳು ಲಭ್ಯವಾಗಿರುವುದು ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಆಕಾಂಕ್ಷಿಗಳಿಗೆ ಉತ್ತಮ ಅವಕಾಶ ತಂದಿದೆ. ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿ, ವಿದ್ಯಾರ್ಹತೆ, ಆಯ್ಕೆ ಪ್ರಕ್ರಿಯೆ ಹಾಗೂ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕಗಳು ಬದಲಾಗಲಿದ್ದು, ಅಭ್ಯರ್ಥಿಗಳು ಎಸ್‌ಎಸ್‌ಸಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅಧಿಸೂಚನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

Join WhatsApp

Join Now

Join Telegram

Join Now