Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BWSSB ನಲ್ಲಿ ನೇಮಕಾತಿ : ಲಕ್ಷಾಂತರ ರೂಪಾಯಿ ಸಂಬಳ : ಯಾರೆಲ್ಲಾ ಅಪ್ಲೈ ಮಾಡಬಹುದು..?

---Advertisement---

ಬೆಂಗಳೂರು: ಸರ್ಕಾರಿ ಕೆಲಸಕ್ಕೆಂದು ಕಾಯುತ್ತಿರುವವರು BWSSB ನಲ್ಲಿ ಅರ್ಜಿ ಆಹ್ವಾನ ಮಾಡಲಾಗಿದೆ, ಅಪ್ಲೈ ಮಾಡಬಹುದು. ಅರ್ಜಿ ಹಾಕುವುದಕ್ಕೆ ಯಾರೆಲ್ಲಾ ಅರ್ಹರು, ಅಪ್ಲೈ ಮಾಡಲು ಯಾವಾಗ ಕೊನೆ ದಿನ ಈ ಎಲ್ಲಾ ಮಾಹಿತಿ ಇಲ್ಲಿವೆ.

 

ಕಾನೂನು ಅಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಸೇವಾ ವಿಷಯಗಳಲ್ಲಿ ನುರಿತ ಹಾಗೂ ಹೆಚ್ಚಿನ ಅನುಭವವುಳ್ಳ ನಿವೃತ್ತ ಜಿಲ್ಲಾ ಮತ್ತು ಸೆಷನ್ಸಗ ನ್ಯಾಯಾಧೀಶರು ಅರ್ಜಿ ಸಲ್ಲಿಸಬಹುದಾಗಿದೆ. ಸದರಿ ಸೇವೆಯಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವವರು ನ್ಯಾಯಾಂಗ ಇಲಾಖೆಯಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ಕನಿಷ್ಠ 5 ವರ್ಷಗಳ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿರಬೇಕು. ಹಿಂದಿನ ಸೇವೆಯಿಂದ ವಜಾಗೊಂಡಿರಬಾರದು. ಕಾನೂನು ಅಧಿಕಾರಿ ಹುದ್ದೆಗೆ ಸಂಭಾವನೆ 1.15 ಲಕ್ಷ ರೂಪಾಯಿ ಹಾಗೂ ವಾಹನ ಭತ್ಯೆ 35 ಸಾವಿರ ರೂಪಾಯಿ ನಿಗದಿಪಡಿಸಲಗಿದೆ. ಸದರಿಯವರ ಸೇವೆಯನ್ನು 2 ವರ್ಷಗಳ ಅವಧಿಗೆ ನೇಮಕ ಮಾಡಲಾಗುತ್ತಿದೆ.

1 ವರ್ಷದ ನಂತರ ಅವರ ಕಾರ್ಯನಿರ್ವಹಣೆಯ ಆಧಾರದ ಮೇಲೆ‌ನಂತರದ ಮುಂದಿನ 1 ವರ್ಷದವರೆಗೆ ಮುಂದುವರೆಸಲಾಗುವುದು. ಅರ್ಹರು ತಮ್ಮ ಹೆಸರು, ವಿಳಾಸ, ಜನ್ಮದಿನಾಂಕ, ವಿದ್ಯಾರ್ಹತೆ, ಸೇವಾ ವಿವರಗಳನ್ನೊಳಗೊಂಡ ಸಂಪೂರ್ಣ ಮಾಹಿತಿ ಹಾಗೂ ಅಗತ್ಯ ದಾಖಲೆಗಳನ್ನ ಲಗತ್ತಿಸಿ ಅಧಿಸೂಚನೆ ಹೊರಡಿಸಿದ 15 ದಿನದೊಳಗೆ ಮುಚ್ಚಿದ ಲಕೋಟೆಯಲ್ಲಿ ಅರ್ಜಿ ಸಲ್ಲಿಸಬೇಕು. ಮುಖ್ಯ ಆಡಳಿತಾಧಿಕಾರಿ ಹಾಗೂ ಕಾರ್ಯದರ್ಶಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, 1ನೇ ಮಹಡಿ, ಕಾವೇರಿ ಭವನ, ಕೆ.ಜಿ.ರಸ್ತೆ,ಬೆಂಗಳೂರು-560009 ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮುಖಾಂತರ ಸಲ್ಲಿಸಬಹುದು. ಅರ್ಹ ಆಸಕ್ತರು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment