ಶೀಘ್ರದಲ್ಲಿಯೇ ನಡೆಯಲಿದೆ ಅಂಗನವಾಡಿ ಶಿಕ್ಷಕರ ನೇಮಕಾತಿ..!

suddionenews
1 Min Read

ಬೆಂಗಳೂರು: ಇಂದಿನ ವುಧಾನ ಪರಿಷತ್ ಕಲಾಪದಲ್ಲಿ ಪ್ರಶ್ನೋತ್ತರ ಸುತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಶೀಘ್ರವೇ ಅಂಗನವಾಡಿ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಆದಷ್ಟು ಬೇಗ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ನಡೆಯಲಿದೆ‌. ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಒಳಗೊಂಡ ಜಿಲ್ಲಾಮಟ್ಟದ ಸಮಿತಿಯಲ್ಲಿ ನೇಮಕಾತಿ ನಡೆಯಲಿದೆ. ಅಂಗನವಾಡಿಯ ಮೂಲ ಉದ್ದೇಶವೆ ಉತ್ತಮ ಶಿಕ್ಷಣದ ಜೊತೆಗೆ ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ನೀಡುವುದು. ಮುಖ್ಯಮಂತ್ರಿಗಳು ಈಗಾಗಲೇ ಮೌಖಿಕವಾಗಿ ಈ ಸಂಬಂಧ ಆದೇಶ ನೀಡಿದ್ದಾರೆ. ಇದೇ 22 ರಿಂದ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ತರಗತಿಗಳನ್ನು ಆರಂಭಿಸಲಾಗುತ್ತಿದ್ದು, ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡಲಾಗುವುದು ಎಂದಿದ್ದಾರೆ.

2017ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಸೃಷ್ಟಿ ಎಂಬ ಯೋಜನೆಯನ್ನು ಆರಂಭಿಸಿದ್ದರು. ಆ‌ ಮೂಲಕ ಪೌಷ್ಠಿಕ ಆಹಾರ ನೀಡುವುದಕ್ಕೆ ಮೊಟ್ಟೆ ನೀಡುವುದಕ್ಕೆ ತೀರ್ಮಾನಿಸಿದರು. ರಾಜ್ಯದಲ್ಲಿ 69 ಸಾವಿರ ಅಂಗನವಾಡಿ ಕೇಂದ್ರಗಳು ಇದಾವೆ. ಈ ಪೈಕಿ ಕೆಲವೊಂದು ಕೇಂದ್ರಗಳಲ್ಲಿ ಸಮಸ್ಯೆಗಳು ಬಂದಿದ್ದವು. ಇದರ ಬಗ್ಗೆಯೂ ಪರಿಶೀಲನೆ ಮಾಡಲಾಗುತ್ತಿದೆ ಎಂದಿದ್ದಾರೆ. ಈ ಮೂಲಕ ಅಂಗನವಾಡಿ ಶಿಕ್ಷಕರ ನೇಮಕಾತಿಯ ಬಗ್ಗೆ ಸುಳಿವು ನೀಡಿದ್ದಾರೆ.

ಕೆಲಸಕ್ಕಾಗಿ ಕಾಯುತ್ತಿದ್ದವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿಯಂತು ಸಿಕ್ಕಿದೆ. ಆದಷ್ಟು ಬೇಗ ನೇಮಕಾತಿ ಮಾಡಿಕೊಂಡರೆ ಸಾಕು ಎಂದೇ ಅರ್ಜಿ ಸಲ್ಲಿಕೆ ಮಾಡಿದವರು ಕಾಯುತ್ತಿದ್ದಾರೆ. ಇನ್ನು ಅಂಗನವಾಡಿಯ ಮಕ್ಕಳಿಗೆ ಪೌಷ್ಠಿಕಾಂಶದ ಕಡೆಗೂ ಸರ್ಕಾರ ಗಮನ ಕೊಡುತ್ತದೆ. ಪ್ರಶ್ನೋತ್ತರದ ವೇಳೆ ಸಚುವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *