Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಅಕ್ಟೋಬರ್ 21ರಂದು ಶಿಕ್ಷಕರ ಸ್ಥಳ ನಿಯುಕ್ತಿ ಕೌನ್ಸಿಲಿಂಗ್

---Advertisement---

 

ಚಿತ್ರದುರ್ಗ.ಅಕ್ಟೋಬರ್.19: ಪದವೀಧರ ಪ್ರಾಥಮಿಕ ಶಿಕ್ಷಕರ (6-8ನೇ ತರಗತಿ) ನೇಮಕಾತಿ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಇದೇ ಅಕ್ಟೋಬರ್ 21ರಂದು ಚಿತ್ರದುರ್ಗ ನಗರದ ಜಿಲ್ಲಾ ಉಪನಿರ್ದೇಶಕರ ಕಚೇರಿ ಆವರಣದ ಎಸ್.ಎಸ್.ಎ ಸಭಾಂಗಣದಲ್ಲಿ ನಡೆಯಲಿದೆ.

ಪದವೀಧರ ಪ್ರಾಥಮಿಕ ಶಿಕ್ಷಕರ (06 ರಿಂದ 08ನೇ ತರಗತಿ) ನೇಮಕಾತಿ 2022ರ ನೇಮಕಾತಿಗೆ ಸಂಬಂಧಿಸಿದಂತೆ 2023ರ ಮಾರ್ಚ್ 8ರಂದು ಪ್ರಕಟಿಸಲಾಗಿರುವ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಿಲಿಂಗ್‍ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ಅಕ್ಟೋಬರ್ 19ರಂದು ಶಾಲಾ ಶಿಕ್ಷಣ ಇಲಾಖೆಯ ವೆಬ್‍ಸೈಟ್ https://schooleducation.karnataka.giv.in  ನಲ್ಲಿ ಪ್ರಕಟಿಸಲಾಗುತ್ತದೆ.

ಈ ಪಟ್ಟಿಯಲ್ಲಿನ ಅಭ್ಯರ್ಥಿಗಳ ಕ್ರಮವಾಗಿ ಗಣಿತ & ವಿಜ್ಞಾನ, ಸಮಾಜ ವಿಜ್ಞಾನ, ಜೀವವಿಜ್ಞಾನ ಮತ್ತು ಆಂಗ್ಲಭಾಷಾ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸಿಲಿಂಗ್‍ನ್ನು ಇದೇ ಅಕ್ಟೋಬರ್ 21ರಂದು ಉಪನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆ, ಚಿತ್ರದುರ್ಗ ಜಿಲ್ಲೆ ಇಲ್ಲಿನ ಕಛೇರಿ ಆವರಣದ ಎಸ್.ಎಸ್.ಎ ಸಭಾಂಗಣದಲ್ಲಿ ಬೆಳಿಗ್ಗೆ 10.30 ರಿಂದ ಕೌನ್ಸಿಲಿಂಗ್ ಮುಗಿಯುವವರೆಗೆ ಇಲಾಖೆ ವೆಬ್ ಸೈಟ್‍ನಲ್ಲಿರುವಂತೆ 1:1 ಆಯ್ಕೆ ಪಟ್ಟಿಯಲ್ಲಿರುವ ಎಲ್ಲಾ ಅಭ್ಯರ್ಥಿಗಳಿಗೆ ನಡೆಸಲಾಗುವುದು.

ಅಭ್ಯರ್ಥಿಗಳು ಭಾವಚಿತ್ರವಿರುವ ಗುರುತಿನ ಚೀಟಿ ಮತ್ತು ನೇಮಕಾತಿಗೆ ಸಂಬಂಧಪಟ್ಟಂತೆ ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಾಗುವುದು.

ಹೆಚ್ಚಿನ ವಿವರಗಳಿಗೆ .ಕೆ.ರವಿಶಂಕರರೆಡ್ಡಿ, ಉಪನಿರ್ದೇಶಕರು (ಆಡಳಿತ) ಇವರ ದೂರವಾಣಿ ಸಂಖ್ಯೆ 9448999336, ನೋಡಲ್ ಅಧಿಕಾರಿ ಸಿದ್ದಪ್ಪ ದೂರವಾಣಿ ಸಂಖ್ಯೆ 7483662424, ಅಧೀಕ್ಷಕ ಮಲ್ಲಿಕಾರ್ಜುನ ದೂರವಾಣಿ ಸಂಖ್ಯೆ  9591516171,  ವಿಷಯ ನಿರ್ವಾಹಕ ಬಿ.ಶಿವಶಂಕರ ದೂರವಾಣಿ ಸಂಖ್ಯೆ 9845564258 ಕ್ಕೆ ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರರೆಡ್ಡಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment