Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು : ಗೃಹ ಸಚಿವ ಡಾ.ಜಿ.ಪರಮೇಶ್ವರ

ಸಚಿವ ಪರಮೇಶ್ವರ್
---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್.17 : ಸ್ಥಗಿತಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು  ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಸಿದರು.

ಬಸವೇಶ್ವರ ನಗರದ ಪೊಲೀಸ್ ವಸತಿ ಗೃಹದಲ್ಲಿ ರಾಜ್ಯ ಪೊಲೀಸ್, ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಪೊಲೀಸ್ ಸಮುಚ್ಚಯ ಮತ್ತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ, ತಳಕು ಪೊಲೀಸ್ ಠಾಣೆಗಳ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಪ್ರಸ್ತುತ 15 ಸಾವಿರ ಕಾನ್ಸ್‍ಟೇಬಲ್ ಹುದ್ದೆಗಳು ಖಾಲಿ ಇವೆ. ಕಳೆದ ನಾಲ್ಕು ವರ್ಷದಿಂದ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ.  ಪ್ರಸ್ತುತ ದಿನಗಳಲ್ಲಿ ಪೊಲೀಸ್ ಕಾನ್ಸ್‍ಟೇಬಲ್‍ಗಳ ಅಗತ್ಯತೆ ಇದೆ. ಪ್ರತಿ ವರ್ಷವೂ 3 ಸಾವಿರ ಪೊಲೀಸ್ ಸಿಬ್ಬಂದಿ ನಿವೃತ್ತಿ ಹೊಂದುತ್ತಿದ್ದಾರೆ. ಹಾಗಾಗಿ ಸ್ಥಗಿತಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಪೊಲೀಸ್ ಕಾನ್ಸ್‍ಟೇಬಲ್‍ಗೆ ಕನಿಷ್ಟ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಹತೆಯಾಗಿದೆ. ಆದರೆ ಈ ಹುದ್ದೆಗೆ ಬಿಇ, ಎಂಬಿಎ, ಎಂಎ ಎಂಇಡಿ ಸೇರಿದಂತೆ ಶೇ.60ರಷ್ಟು ಅರ್ಜಿಗಳು ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳೇ ಹೆಚ್ಚಾಗಿ ಅರ್ಜಿ ಸಲ್ಲಿಸುತ್ತಾರೆ. ಇದರ ಅರ್ಥ ಪೊಲೀಸ್ ಹುದ್ದೆ ಕೂಡ ಗೌರವಯುತವಾಗಿದೆ ಎಂಬುದಕ್ಕೆ ಇದು ಸಾಕ್ಷಿ ಎಂದು ಅಭಿಪ್ರಾಯಪಟ್ಟರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment