Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೈತ ಚಂದ್ರಪ್ಪನವರಿಗೆ ಆಗಿರುವ ಅನ್ಯಾಯ ಸರಿಪಡಿಸಿ : ಕರುನಾಡ ವಿಜಯಸೇನೆಯಿಂದ ಪ್ರತಿಭಟನೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 01 : ತಾಲ್ಲೂಕು ಕಚೇರಿ ಅಧಿಕಾರಿಗಳ ನಿರ್ಲಕ್ಷೆಯಿಂದ ಹಿರೇಗುಂಟನೂರು ಹೋಬಳಿಯ ಗೂಳಯ್ಯನಹಟ್ಟಿ ಗ್ರಾಮದ ಚಂದ್ರಪ್ಪನವರಿಗೆ ಅನ್ಯಾಯವಾಗಿರುವುದನ್ನು ಖಂಡಿಸಿ ಕರುನಾಡ ವಿಜಯಸೇನೆಯಿಂದ ಶನಿವಾರ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ ತಪ್ಪಿತಸ್ಥರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್‍ಗೆ ಮನವಿ ಸಲ್ಲಿಸಲಾಯಿತು.

ಹಿರೇಗುಂಟನೂರು ಹೋಬಳಿ ಚಿಕ್ಕಪುರ ಗ್ರಾಮದಲ್ಲಿರುವ ರಿ.ಸ.ನಂ.8/1 ರಲ್ಲಿ ಎರಡು ಎಕರೆ 20 ಗುಂಟೆ ಜಮೀನು ಹೊಂದಿರುವ ಚಂದ್ರಪ್ಪ 1 ಎಕರೆ 20 ಗುಂಟೆ
ಜಮೀನನ್ನು ಸರ್ವೆ ಸೈಟ್ ಸ್ಕೆಚ್ ನಕ್ಷೆ ಸಂಖ್ಯೆ 13030925111232001 ಪ್ರಕಾರ ದಿನಾಂಕ : 19-5-2026 ರಂದು ಜಯಲಕ್ಷ್ಮಿ ಎನ್ನುವವರಿಗೆ ಮಾರಾಟ ಮಾಡಿದ್ದು, ಚಿತ್ರದುರ್ಗ ಉಪ ನೊಂದಣಾಧಿಕಾರಿ ಕಚೇರಿಯಲ್ಲಿ ನೊಂದಣಿ ಮಾಡಿಸಿದ್ದಾರೆ. ಆದರೆ ಪಹಣಿಯಲ್ಲಿ ಜಯಲಕ್ಷ್ಮಿಯವರಿಗೆ 2 ಎಕರೆ 20 ಗುಂಟೆ ಜಮೀನು ವರ್ಗಾವಣೆಯಾಗಿರುವುದರ ಹಿಂದೆ ತಾಲ್ಲೂಕು ಕಚೇರಿ ಅಧಿಕಾರಿಗಳ ಕುಮ್ಮಕ್ಕಿದೆ. ಕೂಡಲೆ ತನಿಖೆ ನಡೆಸಿ ಚಂದ್ರಪ್ಪನವರಿಗೆ ನ್ಯಾಯ ದೊರಕಿಸಿ ಒಂದು ಎಕರೆ ಜಮೀನು ಉಳಿಸಿಕೊಡಬೇಕು. ಇಲ್ಲವಾದಲ್ಲಿ ಆ.3 ರಂದು ರೈತರ ಜೊತೆಗೂಡಿ ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಲಾಗುವುದೆಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಬಿಜೆಪಿ ನಗರ ಉಪಾಧ್ಯಕ್ಷ ವಿ.ಆರ್.ನಾಗರಾಜ್, ಲಿಂಗರಾಜು ಕವಾಡಿಗರಹಟ್ಟಿ, ಸುರೇಶ್ ಈಚಲನಾಗೇನಹಳ್ಳಿ, ಹೊಲದ ಮಾಲೀಕ ಚಂದ್ರಪ್ಪ ಗೂಳಯ್ಯನಹಟ್ಟಿ, ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now