ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ : ಇನ್ನೂ ಎಷ್ಟು ದಿನ ಮಳೆ ?

1 Min Read

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಬಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ವರದಿ ನೀಡಿದೆ. ಕರಾವಳಿ ಜಿಲ್ಲೆಗಳು, ಮಲೆನಾಡಿನ ಭಾಗದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಬೆಳಗ್ಗೆಯಿಂದಾನೇ ಮೋಡ ಕವಿದ ವಾತಾವರಣ ಮನೆ ಮಾಡಿದೆ. ಹೀಗಾಗಿ ಈ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದಜ ಹವಮಾನ ಇಲಾಖೆ ಸೂಚನೆ ನೀಡಿದೆ.

ಉಳಿದಂತೆ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗೆ ಆಗಸ್ಟ್ 18ರಂದು ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಧಾರವಾಡ, ಗದಗ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೇರೆ ಭಾಗದಲ್ಲೆಲ್ಲಾ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ.

ಕಾರವಳಿಯ ಕರ್ನಾಟಕವೂ ಅತ್ಯಂತ ತೀವ್ರ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಆದರೆ ಉತ್ತರ ಮತ್ತು ದಕ್ಷಿಣ ಒಳನಾಡು ಪ್ರದೇಶಗಳು ವಾರದ ಮಧ್ಯದಲ್ಲಿ ಬದಲಾವಣೆಗಳನ್ನು ಗಮನಿಸಬೇಕಿದೆ. ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆ ಇದೆ. ಸಂಚಾರ ಸಮಸ್ಯೆಗಳು ಎದುರಾಗಲಿವೆಮ ಬೆಟ್ಟಗುಡ್ಡಗಳು ಮತ್ತು ಕರಾವಳು ಪ್ರದೇಶಗಲಕಲ್ಲಿ ಭೂಕುಸಿತದ ಸಾಧ್ಯತೆ ಹೆಚ್ಚಾಗಿದೆ. ರೈತರು ಮತ್ತು ಸ್ಥಳೀಯ ಆಡಳಿತವು ಬೆಳೆ ಮತ್ತು ಮೂಲ ಸೌಕರ್ಯದ ಹಾನಿಯನ್ನು ತಗ್ಗಿಸಲು ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ಹಾಗೇ ಹೊರಗೆ ಹೋಗುವ ಜನ ಕೂಡ ಮುಂಜಾಗ್ರತ ಎಚ್ಚರದೊಂದಿಗೆ ಹೋಗಬೇಕಾಗುತ್ತದೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks