Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯಮಿ ಪ್ರಸನ್ನ ಕುಮಾರ್ ರೆಡ್ಡಿ ಅವರಿಗೆ ಸನ್ಮಾನ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 21 : ನಗರದ ಖ್ಯಾತ ಉದ್ಯಮಿ ಕೆ.ಎಸ್. ಪ್ರಸನ್ನ ಕುಮಾರ್ ರೆಡ್ಡಿ ಅವರಿಗೆ ರೆಡ್ಡಿ ಸಮಾಜದ ಮುಖಂಡರು ಎಸ್.ಜಿ. ಕಲ್ಯಾಣ ಮಂಟಪದಲ್ಲಿ ಸನ್ಮಾನಿಸಿದರು.

ಜನವರಿ 19 ರಂದು ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಮಹಾಯೋಗಿ ವೇಮನ ಜಯಂತಿ ಆಚರಿಸಲಾಯಿತು.

ಈ ಕಾರ್ಯಕ್ರಮಕ್ಕೆ ರೆಡ್ಡಿ ಸಮುದಾಯದ ಪರವಾಗಿ ಅಗತ್ಯ ಸಹಕಾರ ನೀಡಿದ್ದರು. ಮುಖ್ಯವಾಗಿ ಅತಿಥಿಗಳಿಗೆ ಮತ್ತು ಸಮಾಜ ಬಾಂಧವರಿಗೆ ಊಟದ ವ್ಯವಸ್ಥೆ ಸೇರಿ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕರಿಸಿದ್ದರು. ಈ ಹಿನ್ನೆಲೆಯಲ್ಲಿ ಸಮಾಜದ ಮುಖಂಡರು ಮಂಗಳವಾರ ಅವರನ್ನು ಅಭಿನಂದಿಸಿ ಸನ್ಮಾನಿಸಿ ಗೌರವಿಸಿದರು.

ಈ ವೇಳೆ ಭೀಮಾರೆಡ್ಡಿ, ವೆಂಕಟ ಶಿವಾ ರೆಡ್ಡಿ, ವಿಜಯಕುಮಾರ್, ಅಶ್ವಥ್ ರೆಡ್ಡಿ, ಮಂಜುನಾಥ ರೆಡ್ಡಿ, ತಿಪ್ಪಾರೆಡ್ಡಿ ಕಟ್ಟಾ,ಕೃಷ್ಣ ರೆಡ್ಡಿ ಭವನಂ, ಧನುಂಜಯ ರೆಡ್ಡಿ, ವೆಂಕಟೇಶ ರೆಡ್ಡಿ, ಕೋದಂಡರಾಮ ರೆಡ್ಡಿ, ವಿಶಾಲ್, ನಾಗಭೂಷಣ್ ರೆಡ್ಡಿ ಸೇರಿದಂತೆ ಸಮಾಜದ ಅನೇಕರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment