Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಜೇರಿಯನ್ ಹೆರಿಗೆ ಪ್ರಮಾಣ ಕಡಿಮೆ ಮಾಡಿ : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

Facebook
Twitter
Telegram
WhatsApp

 

ಚಿತ್ರದುರ್ಗ,(ಮೇ.13) : ಜಿಲ್ಲೆಯಲ್ಲಿ ಡೆಂಗೀ ಮತ್ತು ಚಿಕುಂಗುನ್ಯಾ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಡೆಂಗೀ ತಡೆಗಟ್ಟಬಹುದು : ಬನ್ನಿ ಎಲ್ಲರೂ ಕೈ ಜೋಡಿಸೋಣ ಎಂಬ ಘೋಷವಾಕ್ಯದೊಂದಿಗೆ ಎಲ್ಲರೂ ಡೆಂಗೀ ನಿಯಂತ್ರಣಕ್ಕೆ ಕೈಜೋಡಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಮೂಡಿಸುವ ಮೂಲಕ ಡೆಂಗೀ ಹಾಗೂ ಚಿಕುಂಗುನ್ಯಾ ನಿರ್ಮೂಲನೆ ಸಹಕರಿಸಬೇಕು. ಕೀಟಜನ್ಯ ರೋಗಗಳ ನಿಯಂತ್ರಣ ಕಾರ್ಯಕ್ರಮದಲ್ಲಿ ನಗರಸಭೆ, ಪುರಸಭೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಗಣಿ ಮತ್ತು ವಿಜ್ಞಾನ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಹಭಾಗಿತ್ವ ಅಗತ್ಯವಾಗಿದೆ ಎಂದು ತಿಳಿಸಿದರು.

ಸಿಜೇರಿಯನ್ ಹೆರಿಗೆ ಪ್ರಮಾಣ ಕಡಿಮೆ ಮಾಡಿ: ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಿಜೇರಿಯನ್ ಹೆರಿಗೆ ಪ್ರಮಾಣಗಳು ನಡೆಯುತ್ತಿವೆ ಎಂದು ದೂರುಗಳು ಬರುತ್ತಿದ್ದು, ಮುಂದಿನ ದಿನಗಳಲ್ಲಿ ಸಿಜೇರಿಯನ್ ಹೆರಿಗೆ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.56 ರಷ್ಟು ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಶೇ.79 ರಷ್ಟು ಸಿಜೇರಿಯನ್ ಹೆರಿಗೆ ಪ್ರಮಾಣಗಳು ನಡೆದಿವೆ ಎಂಬ ಮಾಹಿತಿ ದೊರೆತ್ತಿದ್ದು, ನಾರ್ಮಲ್ ಹೆರಿಗೆ ಪ್ರಮಾಣ ಹೆಚ್ಚಳಕ್ಕೆ ಅಗತ್ಯ ಕ್ರಮವಹಿಸಿ, ಸಿಜೇರಿಯನ್ ಹೆರಿಗೆ ಪ್ರಮಾಣವನ್ನು ಶೇ.20ರೊಳಗೆ ಬರುವಂತೆ ಮಾಡಬೇಕು ಎಂದು ತಿಳಿಸಿದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಕಾಶೀ ಮಾತನಾಡಿ, ಜಿಲ್ಲೆಯಲ್ಲಿ ಕೀಟಜನ್ಯ ರೋಗಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯಗಳಲ್ಲಿ ಗಪ್ಪಿ ಮತ್ತು ಗಾಂಬೂಸಿಯ ಲಾರ್ವಾ ಹಾರಿ ಮೀನುಗಳ ಸಾಕಾಣಿಕೆ ತೊಟ್ಟಿಗಳನ್ನು ನಿರ್ಮಿಸಿ ನೀರು ನಿಂತಿರುವ ಕೆರೆ, ಕಟ್ಟೆ, ಬಾವಿ, ಕುಂಟೆಗಳಿಗೆ ಪ್ರತಿ ಮಾಹೆ ಲಾರ್ವಾಹಾರಿ ಮೀನುಗಳನ್ನು ಬಿಡಲಾಗುತ್ತಿದೆ. ಮುಂದುವರಿದಂತೆ ಪ್ರತಿನಿತ್ಯ ಆರೋಗ್ಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರನ್ನು ಮನೆ ಮನೆ ಲಾರ್ವ ಸಮೀಕ್ಷೆ ಹಾಗೂ ನಗರ ಪ್ರದೇಶಗಳಲ್ಲಿ ಪ್ರತಿ ಮಾಹೆಯ ಮೊದಲನೇ ಶುಕ್ರವಾರ ಮತ್ತು ಮೂರನೇ ಶುಕ್ರವಾರಗಳಂದು ಲಾರ್ವಾ ಸಮೀಕ್ಷೆ ನಡೆಸಿ ಐಈಸಿ ಚಟುವಟಿಕೆ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಲಾರ್ವಾ ನಾಶ ಮಾಡುವ ಹಾಗೂ ಡೆಮಗೀ, ಚಿಕುಂಗುನ್ಯಾ ಪ್ರಕರಣಗಳು ವರದಿಯಾದ ಪ್ರದೇಶಗಳಲ್ಲಿ ಸ್ಥಳೀಯ ಗ್ರಾಮ ಪಂಚಾಯಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸಹಯೋಗದೊಂದಿಗೆ ಧೂಮಿಕರಣ ಮಾಡುವ ಮೂಲಕ ಡೆಂಗೀ ಚಿಕೂಂಗುನ್ಯ ರೋಗಳನ್ನು ನಿಯಂತ್ರಣಕ್ಕೆ ತರುವ ಉದ್ದೇಶವನ್ನು ಹೊಂದಲಾಗಿದೆ ಎಂದು ತಿಳಿಸಿದರು.

ಘನತ್ಯಾಜ್ಯ ವಸ್ತುಗಳನ್ನು ಸೂಕ್ತವಾಗಿ ವಿಲೇವಾರಿ ಮಾಡಿಸಿ, ನೀರು ನಿಲ್ಲದಂತೆ ಗುಂಡಿಗಳನ್ನು ಮುಚ್ಚಿಸುವುದು, ಅವಶ್ಯವಿದ್ದಾಗ ವ್ಯಾಪಕವಾಗಿ ಫಾಗಿಂಗ್ ಮಾಡಿಸುವುದು, ಕಸ ಸಂಗ್ರಹದ ಜೊತೆಗೆ ವಾಹನದಲ್ಲಿ ಧ್ವನಿವರ್ಧಕದ ಮೂಲಕ ಆರೋಗ್ಯ ಶಿಕ್ಷಣ ನೀಡಲು ಕ್ರಮವಹಿಸಬೇಕು. ಕುಡಿಯುವ ನೀರನ್ನು ಕ್ಲೋರಿನೇಷನ್ ಮಾಡಿಸಿಯೇ ಸರಬರಾಜು ಮಾಡಲು ಕ್ರಮಕೈಗೊಳ್ಳಬೇಕು ಎಂದು ನಗರಸಭೆ ಆಯುಕ್ತರಿಗೆ ತಿಳಿಸಿದರು.

ಡೆಂಗೀ ಪ್ರಕರಣಗಳು ವರದಿಯಾದ ತಕ್ಷಣ ಆ ಪ್ರದೇಶದಲ್ಲಿ ಮುಂಜಾಗ್ರತಾ ಕ್ರಮವಾಗಿ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಘನತ್ಯಾಜ್ಯ ವಸ್ತುಗಳ ವಿಲೇವಾರಿ ಹಾಗೂ ಪರಿಸರ ನೈರ್ಮಲ್ಯ ಕಾಪಾಡುವುದು, ಚರಂಡಿಗಳಲ್ಲಿ  ನೀರು ಸರಾಗವಾಗಿ ಹರಿಯುವಂತೆ ಮಾಡಲು ಕ್ರಮವಹಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ 2020ರಲ್ಲಿ 153 ಡೆಂಗೀ ಪ್ರಕರಣಗಳು, 83 ಚಿಕುಂಗುನ್ಯಾ ಪ್ರಕರಣಗಳು ವರದಿಯಾಗಿದೆ. 2021ರಲ್ಲಿ 241 ಡೆಂಗೀ, 108 ಚಿಕುಂಗುನ್ಯಾ ಪ್ರಕರಣಗಳು ವರದಿಯಾಗಿವೆ. 2022ರ ಏಪ್ರಿಲ್ ಅಂತ್ಯಕ್ಕೆ 76 ಡೆಂಗೀ ಪ್ರಕರಣಗಳು ಹಾಗೂ 21 ಚಿಕುಂಗುನ್ಯಾ ಪ್ರಕರಣಗಳು ವರದಿಯಾಗಿದೆ ಎಂದು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಡೆಂಗೀ ಹಾಗೂ ಮಲೇರಿಯಾ ನಿಯಂತ್ರಣ ಕುರಿತ ಪ್ರಚಾರ ಸಾಮಾಗ್ರಿಗಳನ್ನು ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ನಂದಿನಿದೇವಿ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್, ಆರ್‍ಸಿಹೆಚ್ ಅಧಿಕಾರಿ ಡಾ.ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!