Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ: ಅರ್ಹ ಫಲಾನುಭವಿಗಳು ನೊಂದಣಿ ಮಾಡಿಕೊಳ್ಳಿ : ಜಿಲ್ಲಾಧಿಕಾರಿ ದಿವ್ಯ ಪ್ರಭು

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ(ಜುಲೈ.19) : ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಯ ನೊಂದಣಿ ಕಾರ್ಯ ಬುಧವಾರದಿಂದ ಪ್ರಾರಂಭಗೊಂಡಿದ್ದು, ಜಿಲ್ಲೆಯ ಎಲ್ಲ ಅರ್ಹರು ನೊಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

ಈಗಾಗಲೇ ತಿಳಿಸಿರುವಂತೆ ಪಡಿತರ ಚೀಟಿಯಲ್ಲಿ “ಯಜಮಾನಿ ಮಹಿಳೆ” ಎಂದು ಗುರುತಿಸಿರುವ ಮಹಿಳೆಯು ಈ ಯೋಜನೆಯ ಫಲಾನುಭವಿಯಾಗುತ್ತಾರೆ. ಆದರೆ ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ. ಪಾವತಿದಾರರಾಗಿರಬಾರದು.

ಫಲಾನುಭವಿಯು ನೋಂದಣಿಯನ್ನು ಎರಡು ವಿಧಾನದಿಂದ ಮಾಡಿಸಬಹುದಾಗಿದೆ. ಮೊದಲನೆಯದಾಗಿ ಈಗಾಗಲೇ ರೇಷನ್ ಕಾರ್ಡಿನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಹಾಗೂ ನೊಂದಾವಣಿ ಮಾಡಿಸುವ ಸ್ಥಳದ ವಿವರಗಳನ್ನು ಎಸ್‍ಎಂಎಸ್ ಮೂಲಕ ತಿಳಿಸಲಾಗುವುದು. ಗ್ರಾಮಾಂತರ ಪ್ರದೇಶದಲ್ಲಿ ಅವರು ವಾಸಿಸುವ ಗ್ರಾಮದ ಸಮೀಪವಿರುವ ಗ್ರಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರವಾಗಿರುತ್ತದೆ. ಹಾಗೆಯೇ ನಗರ ಪ್ರದೇಶದಲ್ಲಿ ಅವರ ಸಮೀಪವಿರುವ ಕರ್ನಾಟಕ-ಒನ್ ಬೆಂಗಳೂರು-ಒನ್, ಬಿಬಿಎಂಪಿ ವಾರ್ಡ್ ಕಛೇರಿ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಕಛೇರಿಗಳು ಕೇಂದ್ರವಾಗಿರುತ್ತದೆ.

ಪರ್ಯಾಯವಾಗಿ “ಪ್ರಜಾಪ್ರತಿನಿಧಿ” (ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂಸೇವಕರು) ತಮ್ಮ ಮನೆಗೆ ಭೇಟಿ ನೀಡಿದಾಗ ಅವರಿಂದಲೂ ಸಹ ನೊಂದಾಯಿಸಿಕೊಳ್ಳಬಹುದು. ಪ್ರತಿ ಫಲಾನುಭವಿಯ ನೊಂದಾವಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902 ಗೆ ಕರೆ ಮಾಡಿ ಅಥವಾ 8147500500 ನಂಬರ್‍ಗೆ ಎಸ್‍ಎಂಎಸ್ ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ.

ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ-ಒನ್/ ಬಾಪೂಜಿಕೇಂದ್ರ/ ಕರ್ನಾಟಕ-ಒನ್/ ಬೆಂಗಳೂರು-ಒನ್ ಕೇಂದ್ರಗಳಿಗೆ ಹೋಗಲು ಸಾಧ್ಯವಾಗದೇ ಇದ್ದಲ್ಲಿ ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 ರಿಂದ 7 ಗಂಟೆಯೊಳಗೆ ಭೇಟಿ ನೀಡಿ ನೊಂದಾಯಿಸಿಕೊಳ್ಳಬಹುದಾಗಿದೆ.

ಈ ಯೋಜನೆಯಡಿ ನೊಂದಾಯಿಸಿಕೊಳ್ಳಲು ಪಡಿತರ ಚೀಟಿ ಸಂಖ್ಯೆ ಆಧಾರ್ ಕಾರ್ಡ್ ಸಂಖ್ಯೆ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ಪಾಸ್ ಬುಕ್ (ಆಧಾರ್ ನಂಬರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹೊರತುಪಡಿಸಿ ಪರ್ಯಾಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಆ ಬ್ಯಾಂಕ್ ಖಾತೆಯ ಪಾಸ್ ಬುಕ್) ಮಾಹಿತಿ ಅಗತ್ಯವಿರುತ್ತದೆ.

ನೊಂದಣಿಗೆ ನಿಗದಿಪಡಿಸಿದ ದಿನಾಂಕದಂದು ಈ ಎಲ್ಲಾ ಮಾಹಿತಿಯೊಂದಿಗೆ ಫಲಾನುಭವಿಗಳು ಕೇಂದ್ರಕ್ಕೆ ಹಾಜರಾಗುವುದು ಎಂದು ತಿಳಿಸಿದರು.
ಗ್ರಾಮ್-ಒನ್/ಬಾಪೂಜಿಕೇಂದ್ರ/ಕರ್ನಾಟಕ-ಒನ್/ಬೆಂಗಳೂರು ಒನ್ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡಾಗ ಮಂಜೂರಾತಿ ಪತ್ರವನ್ನು ನೀಡಲಾಗುವುದು. ಪ್ರಜಾಪ್ರತಿನಿಧಿ ಮೂಲಕ ನೊಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರವನ್ನು ತದನಂತರ ತಮ್ಮ ಮನೆಗೆ ತಲುಪಿಸಲಾಗುವುದು.

ಮೇಲಿನಂತೆ ಪುಜಾಪ್ರತಿನಿಧಿ ಮೂಲಕ ಅಥವಾ ಗ್ರಾಮ್-ಒನ್/ ಬಾಪೂಜಿಕೇಂದ್ರ/ ಕರ್ನಾಟಕ-ಒನ್ / ಬೆಂಗಳೂರುಒನ್ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡಲ್ಲಿ, ಅರ್ಜಿದಾರರು ನೀಡಿದ ಮೊಬೈಲ್ ಸಂಖ್ಯೆಗೆ ಎಸ್‍ಎಂಎಸ್ ಮೂಲಕ ಮಂಜೂರಾತಿ ಬಗ್ಗೆ ಸಂದೇಶ ರವಾನಿಸಲಾಗುವುದು. ಒಂದು ವೇಳೆ ಫಲಾನುಭವಿಯು ಗ್ರಾಮ್-ಒನ್/ ಬಾಪೂಜಿಕೇಂದ್ರ/ಕರ್ನಾಟಕ-ಒನ್ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡಿದಲ್ಲಿ, ಆನಂತರ ಪ್ರಜಾಪ್ರತಿನಿಧಿ ಅವರ ಮನೆಗೆ ಭೇಟಿ ನೀಡಿ ನೊಂದಾಯಿಸಲು ಪುಯತ್ನಿಸಿದರೆ ಈಗಾಗಲೇ ನೊಂದಾಯಿಸಿರುವ ಮಾಹಿತಿ ವ್ಯಕ್ತವಾಗುತ್ತದೆ.
ಈಗಾಗಲೇ ಆಧಾರ್ ಜೋಡಣೆಯಾಗಿರುವ ಫಲಾನುಭವಿಯ ಖಾತೆಗೆ ಮಾಹೆಯಾನ ರೂ.2000/-ಗಳನ್ನು ಡಿ.ಬಿ.ಟಿ. ಮೂಲಕ ಜಮೆ ಮಾಡಲಾಗುವುದು. ಒಂದು ವೇಳೆ ಫಲಾನುಭವಿಗಳು ಇಚ್ಚಿಸಿದಲ್ಲಿ ಪರ್ಯಾಯ ಬ್ಯಾಂಕ್ ಖಾತೆಯನ್ನು ನೀಡಬಹುದಾಗಿರುತ್ತದೆ. ಸದರಿ ಬ್ಯಾಂಕ್ ಖಾತೆಗೆ ಮಾಹೆಯಾನ ರೂ.2000/-ಗಳನ್ನು ಆರ್.ಟಿ.ಜಿ.ಎಸ್. ಮೂಲಕ ಜಮೆ ಮಾಡಲಾಗುವುದು. ಈ ಯೋಜನೆಯಡಿ ಫಲಾನುಭವಿಯು ಯಾವುದೇ ಶುಲ್ಕವನ್ನು ಪಾವತಿಸತಕ್ಕದ್ದಲ್ಲ. ಈ ಯೋಜನೆಯಡಿ ನೊಂದಾಯಿಸಿಕೊಳ್ಳುವ ಪ್ರಕ್ರಿಯೆ ಉಚಿತವಾಗಿರುತ್ತದೆ.

ಈ ಯೋಜನೆಯಡಿ ಯಾವುದೇ ಅಂತಿಮ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿರುವುದಿಲ್ಲ. ಆದ್ದರಿಂದ ಒಂದು ವೇಳೆ ನಿಗದಿತ ದಿನಾಂಕ, ಸಮಯಕ್ಕೆ ನೊಂದಾಯಿಸಿಕೊಳ್ಳಲು ಸಾಧ್ಯವಾಗದೇ ಇದ್ದಲ್ಲಿ ಮುಂದೆ ಯಾವುದೇ ದಿನಾಂಕ, ಸಮಯದಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕನ್ನಡ ಭಾಷೆಗೆ ಮೊದಲ ಪ್ರಾಶಸ್ತ್ಯ ನೀಡಿ : ಲೇಖಕ ಯೋಗೀಶ್ ಸಹ್ಯಾದ್ರಿ

  ಸುದ್ದಿಒನ್, ಚಿತ್ರದುರ್ಗ, ನ. 23 : ಕನ್ನಡಿಗರು ಎಷ್ಟೇ ಭಾಷೆಗಳನ್ನು ಕಲಿತರೂ ಕನ್ನಡಕ್ಕೆ ಮೊದಲ ಪ್ರಾಶಸ್ತ್ಯ ನೀಡಬೇಕು. ಭಾರತದ ನೆಲದಲ್ಲಿ ಕನ್ನಡ ಭಾಷೆಗೆ ತನ್ನದೇ ಆದ ವಿಶಿಷ್ಟ ಸ್ಥಾನಮಾನವಿದೆ ಎಂದು ಲೇಖಕ ಹಾಗೂ

ಚಿತ್ರದುರ್ಗ | ನವೆಂಬರ್ 28 ರಂದು ಸೀರೆಗಳು, ಕರಕುಶಲ ಹಾಗೂ ಅಲಂಕಾರಿಕ ವಸ್ತುಗಳ ಮಾರಾಟ ಮೇಳ…!

  ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಅರ್ಬನ್ ಇಂಡಿಯಾ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಗರದ ಹೋಟೆಲ್ ದುರ್ಗದ ಸಿರಿಯಲ್ಲಿ ನವೆಂಬರ್ 28ರಂದು ಆಯೋಜಿಸಿದ್ದು, ವಿವಿಧ ರಾಜ್ಯಗಳ ಸೀರೆಗಳು, ಕರಕುಶಲ ಹಾಗೂ

ಹೀಟರ್ ಬಳಸದೆಯೇ‌ಚಳಿಗಾಲದಲ್ಲಿ ಮನೆಯನ್ನು ಬೆಚ್ಚಗಿರುವಂತೆ ಮಾಡಬಹುದು..!

ಈ ವರ್ಷ ಮುಂಗಾರು ಹಾಗೂ ಹಿಂಗಾರು ಮಳೆ ಅತ್ಯಧಿಕವಾಗಿ ಸುರಿದ ಪರಿಣಾಮ ಈ ಬಾರಿ ಚಳಿಯೂ ಜಾಸ್ತಿ ಇರಲಿದೆ. ಕಳೆದ ವರ್ಷಕ್ಕಿಂತ ಅತ್ಯಧಿಕವಾಗಿರಲಿದೆ. ಈಗಾಗಲೇ ಚಳಿಗಾಲ ಶುರುವಾಗಿದೆ ಕೂಡ. ಚಳಿಗಾಲದಲ್ಲಿ ಮನೆಯೆಲ್ಲಾ ತಂಪಾಗಿರುತ್ತದೆ. ಕೆಲವೊಬ್ಬರಿಗೆ

error: Content is protected !!