Connect with us

Hi, what are you looking for?

ಪ್ರಮುಖ ಸುದ್ದಿ

ಬ್ಲ್ಯಾಕ್ ಫಂಗಸ್ ಬಗ್ಗೆ ನಿತ್ಯ ವರದಿ ಮಾಡಿ; ಡಿಸಿ ಕವಿತಾ ಎಸ್.ಮನ್ನಿಕೇರಿ

ಸುದ್ದಿಒನ್, ಚಿತ್ರದುರ್ಗ, (ಮೇ.18) : ಕೊರೋನಾ ನಡುವೆ ಬ್ಲ್ಯಾಕ್ ಫಂಗಸ್ ಹರಡುತ್ತಿದ್ದು ಇಂತಹ ರೋಗ ಲಕ್ಷಣಗಳು ಕಂಡುಬಂದಲ್ಲಿ ನಿತ್ಯ ವರದಿ ಮಾಡಲು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು. ಈ ರೋಗವು ಒಬ್ಬರಿಂದ ಒಬ್ಬರಿಗೆ ಹರಡುವುದಿಲ್ಲ. ಮೂಗಲ್ಲಿ ಕಫ ತರಹ ರಕ್ತ, ಮೂಗಿನ ನಾಳಗಳಲ್ಲಿ ಕೆಂಪು ಬದಲಾಗಿ ಕಪ್ಪಾಗುವುದು, ಕಣ್ಣು, ಮೂಗಿನ ಮೂಲಕ ಮೆದುಳಿಗೆ ಹೋಗುತ್ತದೆ. ಆದ್ದರಿಂದ ಇದನ್ನು ಆರಂಭದಲ್ಲಿಯೇ ತಡೆಗಟ್ಟಬೇಕಾಗಿದ್ದು ಇಂತಹ ಲಕ್ಷಣಗಳು ಕಂಡು ಬಂದ ತಕ್ಷಣ ವೈದ್ಯರು ಸೂಕ್ತ ಚಿಕಿತ್ಸೆಗೆ ಸಲಹೆ ನೀಡಬೇಕು ಎಂದು ತಿಳಿಸಿದರು.

ಇಎನ್‍ಟಿ ವೈದ್ಯರ ಮೂಲಕ ಎಲ್ಲಾ ವೈದ್ಯರುಗಳಿಗೆ ಈ ರೋಗ ಲಕ್ಷಣಗಳ ಬಗ್ಗೆ ಆನ್‍ಲೈನ್ ಕಾರ್ಯಗಾರ ಏರ್ಪಡಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದರು. ಪ್ರತಿ ತಾಲ್ಲೂಕಿನಲ್ಲಿ ಇಎನ್‍ಟಿ ವೈದ್ಯರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಿ ಪ್ರತಿನಿತ್ಯ ಚಿಕಿತ್ಸೆ ಮಾಡುವ ವೇಳೆ ಈ ಲಕ್ಷಣಗಳು ಕಂಡುಬಂದ ರೋಗಿಗಳ ವಿವರವನ್ನು ಕಳುಹಿಸಲು ಸೂಚಿಸಿದರು.

ಇಎನ್‍ಟಿ ತಜ್ಞ ಡಾ.ಪ್ರಹ್ಲಾದ್ ಮಾತನಾಡಿ, ಈ ರೋಗ ಬಹಳ ಅಪಾಯಕಾರಿಯಾಗಿದ್ದು ಆರಂಭದಲ್ಲಿ ನೋಡಿಕೊಂಡಲ್ಲಿ ಶಸ್ತ್ರಚಿಕಿತ್ಸೆಯ ಮೂಲಕ ಇದನ್ನು ಗುಣಪಡಿಸಬಹುದಾಗಿದೆ. ಮೂಗಿನ ಎರಡು ಕಡೆ ಕೆಂಪಾಗಿನ ಬದಲಾಗಿ ಕಪ್ಪಾಗಿರುತ್ತದೆ. ಕಣ್ಣು ನೋವು, ತಲೆನೋವುನಂತಹ ಲಕ್ಷಣಗಳು ಕಂಡು ಬರುತ್ತವೆ. ದಂತ ವೈದ್ಯರು, ನರರೋಗ ತಜ್ಞರು ಇದನ್ನು ಗಮನಿಸಿ ವರದಿ ಮಾಡಬಹುದಾಗಿದೆ. ಆರಂಭದಲ್ಲಿ ಕಂಡುಕೊಂಡಲ್ಲಿ ಇದನ್ನು ಗುಣಪಡಿಸಬಹುದಾಗಿದೆ ಎಂದರು.

ಕೋವಿಡ್ ಲಸಿಕೆ ; ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಲಸಿಕೆಯನ್ನು ಹಾಕಲಾಗುತ್ತಿದ್ದು 28500 ಲಸಿಕೆಗಳು ಬಂದಿರುತ್ತವೆ. ಎರಡನೇ ಡೋಸ್ ಅವಶ್ಯಕತೆ ಇರುವ 4800 ಫಲಾನುಭವಿಗಳನ್ನು ಸಹ ಗುರುತಿಸಲಾಗಿದೆ. ಮತ್ತು 1750 ಕೋವ್ಯಾಕ್ಸಿನ್ ಎರಡನೇ ಲಸಿಕೆಯನ್ನು ಹಾಕಲಾಗುತ್ತದೆ. ಲಸಿಕೆ ಹಾಕಲು ಜಿಲ್ಲೆಯಲ್ಲಿ 500 ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದ್ದು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ನಿಗಧಿತ ಶಾಲೆಯಲ್ಲಿ ಹಾಕಲಾಗುತ್ತದೆ. ಮತ್ತು ಉಪ ಕೇಂದ್ರಗಳ ವ್ಯಾಪ್ತಿಯ ಗ್ರಾಮ ಹಾಗೂ ಇದೇ ವ್ಯಾಪ್ತಿಯ ಇನ್ನೊಂದು ಗ್ರಾಮದಲ್ಲಿ ಲಸಿಕೆ ಹಾಕಲಾಗುತ್ತದೆ. ಸಾರ್ವಜನಿಕರು ಆನ್‍ಲೈನ್‍ನಲ್ಲಿ ನೊಂದಣಿ ಮಾಡಿಸ ಬಹುದಾಗಿದೆ. ಮತ್ತು ಲಸಿಕಾ ಕೇಂದ್ರಕ್ಕೆ ಆಗಮಿಸುವವರಿಗೂ ಶೇ.50ರಷ್ಟು ಲಸಿಕೆ ಹಾಕಲಾಗುತ್ತದೆ. ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.

Click to comment

Leave a Reply

Your email address will not be published. Required fields are marked *

Latest

ದಿನ ಭವಿಷ್ಯ

ಬುಧವಾರ ರಾಶಿ ಭವಿಷ್ಯ-ಆಗಸ್ಟ್-4,2021 ಕಾಮಿಕಾ ಏಕಾದಶಿ ಸೂರ್ಯೋದಯ: 06:04 AM, ಸೂರ್ಯಸ್ತ: 06:44 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಆಷಾಢ ಮಾಸ, ದಕ್ಷಿಣಾಯಣ, ಗ್ರೀಷ್ಮ...

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!