Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

“ರಾಯರ ಫೋಟೋ ತಿರಸ್ಕರಿಸಿದ್ದಕ್ಕೇನಾ?”: ಸಿದ್ದರಾಮಯ್ಯ ರಾಜೀನಾಮೆ ಸುತ್ತ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ!

---Advertisement---

 

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೊಂದು ವಿಚಾರ ಭಾರೀ ವೈರಲ್ ಆಗುತ್ತಿದೆ. ಕೆಲ ಸಮಯದ ಹಿಂದೆ ನಡೆದಿದ್ದ ಒಂದು ಘಟನೆಗೆ ಇಂದಿನ ರಾಜಕೀಯ ಬೆಳವಣಿಗೆಯನ್ನು ಜೋಡಿಸಿ ನೆಟ್ಟಿಗರು ವಿವಿಧ ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಕೆಲವು ತಿಂಗಳುಗಳ ಹಿಂದೆ ಸಿದ್ದರಾಮಯ್ಯ ಅವರು ಕಾರಿನಲ್ಲೇ ಕುಳಿತು ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ವೇಳೆ, ಅಭಿಮಾನಿಯೊಬ್ಬರು ಶ್ರೀ ರಾಘವೇಂದ್ರ ಸ್ವಾಮಿಗಳ ಫೋಟೋವನ್ನು ಉಡುಗೊರೆಯಾಗಿ ನೀಡಲು ಮುಂದಾಗಿದ್ದರು. ಆದರೆ ಸಿಎಂ ಆ ಫೋಟೋ ಸ್ವೀಕರಿಸದೆ ವಾಪಸ್ ನೀಡಿದ ಘಟನೆ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.ಈ ಘಟನೆಗೆ ರಾಯರ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ನಟ ಜಗ್ಗೇಶ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿ, “ರಾಯರನ್ನು ಕಡೆಗಣಿಸಿದರೆ ಯಾರೂ ಉದ್ಧಾರವಾಗಲ್ಲ” ಎಂದು ಬರೆದುಕೊಂಡಿದ್ದರು. ಆ ಹೇಳಿಕೆ ಕೂಡ ಆ ವೇಳೆ ಸಾಕಷ್ಟು ವೈರಲ್ ಆಗಿತ್ತು.

ಇದೀಗ ಗುರುವಾರದಂದೇ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ಹಿನ್ನೆಲೆ, “ರಾಯರ ಫೋಟೋ ತಿರಸ್ಕರಿಸಿದ್ದಕ್ಕೆ ಇದೇ ಫಲ”, “ರಾಯರ ದಿನವಾದ ಗುರುವಾರವೇ ಅಧಿಕಾರ ಕಳೆದುಕೊಳ್ಳುವ ಪರಿಸ್ಥಿತಿ ಬಂದಿದೆ” ಎಂಬ ರೀತಿಯ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಕೆಲವರು ಇದನ್ನು ಕೇವಲ ಯಾದೃಚ್ಛಿಕ ಎಂದು ಹೇಳುತ್ತಿದ್ದರೆ, ಇನ್ನೂ ಕೆಲವರು ಇದನ್ನು ಭಕ್ತಿಭಾವದ ದೃಷ್ಟಿಯಿಂದ ಚರ್ಚಿಸುತ್ತಿದ್ದಾರೆ.

ಇನ್ನೊಂದೆಡೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 2.30ಕ್ಕೆ ಲೋಕಭವನಕ್ಕೆ ಭೇಟಿ ನೀಡಲಿದ್ದು, ಬಳಿಕ ಮಧ್ಯಾಹ್ನ 3 ಗಂಟೆಗೆ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮಹತ್ವದ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ ರಾಜೀನಾಮೆ ಕುರಿತು ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now