Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಣರಾಜ್ಯೋತ್ಸವ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ನಿರಾಕರಣೆ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

 

ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್‌, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ನೆಲದ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗಗೈದ ಅಪ್ರತಿಮ ದೇಶಪ್ರೇಮಿ ರಾಣಿ ಚೆನ್ನಮ್ಮ ಅವರ ಸ್ತಬ್ಧಚಿತ್ರ, ಕರುನಾಡಿನ ಪ್ರಾಕೃತಿಕ ಸೌಂದರ್ಯ ಮತ್ತು ಬ್ರಾಂಡ್ ಬೆಂಗಳೂರು ಹೀಗೆ 4 ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ.

 

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ.

 

ಕನ್ನಡ-ಕನ್ನಡಿಗ ಮತ್ತು ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿಹೋಗಿದ್ದಾರೆ. ಅವರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು.
ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್ ನ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ : ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಶಿವಮೊಗ್ಗ: ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ರಾಜಕೀಯ ಪಕ್ಷಗಳು ಭರ್ಜರಿ ಮತಯಾಚನೆ ನಡೆಸುತ್ತಿವೆ. ರಾಹುಲ್ ಗಾಂಧಿ ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದು, ಗೀತಾ ಶಿವ ರಾಜ್‍ಕುಮಾರ್ ಪರವಾಗಿ ಮತಯಾಚನೆ ಮಾಡಿದ್ದಾರೆ. ಈ ವೇಳೆ

error: Content is protected !!