Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ರೋಗಿಯ ಸಂಬಂಧಿಕರು ಸಂದರ್ಶನ ಅವಧಿಯಲ್ಲಿ ಮಾತ್ರ ಭೇಟಿ ನೀಡಿ : ಡಾ.ಎಸ್.ಪಿ.ರವೀಂದ್ರ ಮನವಿ

---Advertisement---

 

ಚಿತ್ರದುರ್ಗ. ನ.27:  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಹಿತಾಸಕ್ತಿಯ ದೃಷ್ಟಿಯಿಂದ ಜಿಲ್ಲಾಸ್ಪತ್ರೆಗೆ ರೋಗಿಯ ಸಂಬಂಧಿಕರು ಸಂದರ್ಶನ ಅವಧಿಯಲ್ಲಿ ಮಾತ್ರ ಭೇಟಿ ನೀಡಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಪಿ.ರವೀಂದ್ರ ಮನವಿ ಮಾಡಿದ್ದಾರೆ.

ಬೆಳಿಗ್ಗೆ 6 ಗಂಟೆಯಿಂದ 7.30 ಗಂಟೆಯವರೆಗೆ, ಮಧ್ಯಾಹ್ನ 12 ಗಂಟೆಯಿಂದ 2 ಗಂಟೆಯವರೆಗೆ ಹಾಗೂ ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಮಾತ್ರ ಆಸ್ಪತ್ರೆಯಲ್ಲಿ ಸಂದರ್ಶನದ ಅವಧಿಯನ್ನು ನಿಗಧಿಪಡಿಸಲಾಗಿದೆ.
ರೋಗಿಗಳು ಆಸ್ಪತ್ರೆಗೆ ಬರುವಾಗ ಆಧಾರ್ ಕಾರ್ಡ್, ರೇಷನ್ ಕಾರ್ಡ್‍ಗಳ ನಕಲು ಪ್ರತಿಗಳನ್ನು ತರುಬೇಕು ಹಾಗೂ ಒಳ ರೋಗಿಗಳಾಗಿ ದಾಖಲಾಗುವ ಸಂದರ್ಭದಲ್ಲಿ ತಪ್ಪದೇ ಎ.ಬಿ-ಎ.ಆರ್.ಕೆ ಕೊಠಡಿಯಲ್ಲಿ ಎಂಟ್ರಿ ಮಾಡಿಸಬೇಕು. ಎ.ಬಿ-ಎ.ಆರ್.ಕೆ ಅಡಿಯಲ್ಲಿ ನೋಂದಣಿಯಾದ ಅರ್ಹ ಫಲಾನುಭವಿಗಳಿಗೆ ಎಲ್ಲಾ ರಕ್ತ ಪರೀಕ್ಷೆಗಳು, ಸಿ.ಟಿ. ಸ್ಕ್ಯಾನ್, ಎಕ್ಸ್-ರೇ, ಸ್ಕ್ಯಾನಿಂಗ್, ಆರ್ಥೋ ಇಂಪ್ಲಾಂಟ್‍ಗಳು, ಔಷಧಿಗಳು ಮತ್ತು ಮಾತ್ರೆಗಳು ಉಚಿತವಾಗಿ ನೀಡಲಾಗುತ್ತದೆ. ಎ.ಬಿ-ಎ.ಆರ್.ಕೆ ಅಡಿಯಲ್ಲಿ ನೋಂದಣಿಯಾಗದ ರೋಗಿಗಳು ನಿಗದಿತ ಶುಲ್ಕವನ್ನು ಪಾವತಿಸಿ ಕಡ್ಡಾಯವಾಗಿ ರಸೀದಿಯನ್ನು ಕೇಳಿ ಪಡೆಯಬೇಕು.

ರೋಗಿಗಳು ಇತ್ತೀಚಿನ ದಿನಗಳಲ್ಲಿ ನೇರವಾಗಿ ಖಾಸಗಿ ಆಸ್ಪತ್ರೆಗೆ ತೆರಳಿ, ನಂತರ ಬಂದು ರೆಫರಲ್‍ಗಾಗಿ ಇಲ್ಲಿನ ವೈದ್ಯಾಧಿಕಾರಿಗಳಿಗೆ ಒತ್ತಡವನ್ನು ಹಾಕುತ್ತಿರುವುದು ಕಂಡುಬರುತ್ತಿದೆ. ಆದ್ದರಿಂದ ಈ ರೀತಿ ಮಾಡದೇ, ಮೊದಲು ಸರ್ಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಬೇಕು. ಒಂದು ವೇಳೆ  ಚಿಕಿತ್ಸೆ ಲಭ್ಯವಿಲ್ಲದಿದ್ದಾಗ ಮಾತ್ರ ಎ.ಬಿ-ಎ.ಆರ್.ಕೆ ಅಡಿಯಲ್ಲಿ ಖಾಸಗಿ ಆಸ್ಪತ್ರೆಗಳಿಗೆ ರೆಫರಲ್ ಮಾಡಿ ಕೊಡಲಾಗುವುದು.

 

ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳು ಹಾಗೂ ಅವರ ಸಂಬಂಧಿಕರು ಯಾವುದೇ ಮಧ್ಯವರ್ತಿಗಳಿಗೆ ಹಣ ನೀಡಬಾರದು. ಆಸ್ಪತ್ರೆಯ ಯಾವುದೇ ವೈದ್ಯರು, ಸಿಬ್ಬಂದಿ ಹಣ ಕೇಳಿದಲ್ಲಿ ಹಾಗೂ ಯಾವುದೇ ದೂರುಗಳು ಇದ್ದಲ್ಲಿ ಮೊಬೈಲ್ ಸಂಖ್ಯೆ 9448943163 ಕ್ಕೆ ಕರೆ ಮಾಡಿ ಗಮನಕ್ಕೆ ತರುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ. ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now