ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ. 10 : ಐದು ವರ್ಷಗಳಿಂದಲೂ ಆರ್ಥಿಕ ಸಂಕಷ್ಟದಿಂದ ನಲುಗುತ್ತಿರುವ ಹಂಪಿ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಕನ್ನಡ ನಾಡು, ನುಡಿ, ನೆಲ, ಜಲದ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಭಿಮಾನ ತೋರ್ಪಡಿಸಿದರೆ ಸಾಲದು. ಕನ್ನಡ ಭಾಷೆಯ ಉಳಿವಿಗಾಗಿ ಇರುವ ಏಕೈಕ ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಆರ್ಥಿಕವಾಗಿ ಸಂಕಷ್ಟ ಅನುಭವಿಸುತ್ತಿರುವುದರಿಂದ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಅನುದಾನ ಬಿಡುಗಡೆಗೊಳಿಸಬೇಕು. ಕನ್ನಡ ಭಾಷೆಯ ಹಿತ ಕಾಯಬೇಕಾಗಿರುವ ರಾಜ್ಯ ಸರ್ಕಾರವೇ ಕನ್ನಡವನ್ನು ತಿರಸ್ಕಾರದಿಂದ ನೋಡುವುದು ತರವಲ್ಲ. ಅನುದಾನದ ಕೊರತೆಯಿಂದ ಸಂಶೋಧನೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳು ನಡೆಯುತ್ತಿಲ್ಲದಿರುವುದು ನೋವಿನ ಸಂಗತಿ. ಬೋಧಕ-ಬೋಧಕೇತರ ಸಿಬ್ಬಂದಿಗಳು ವೇತನವಿಲ್ಲದೆ ಪರದಾಡುವಂತಾಗಿದೆ. ವಿದ್ಯುತ್ ಶುಲ್ಕ ಕಟ್ಟಲು ಹಣವಿಲ್ಲದಂತಾಗಿರುವುದು ನಾಚಿಕೆಗೇಡಿನ ಸಂಗತಿ. ಈ ಕೂಡಲೆ ರಾಜ್ಯ ಸರ್ಕಾರ ಅನುದಾನ ನೀಡಿ ಹಂಪಿ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಆರ್ಥಿಕವಾಗಿ ಶಕ್ತಿ ತುಂಬಬೇಕೆಂದು
ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ ಎಂ. ವಿನಂತಿಸಿದರು.
ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತ್ಯಾಗರಾಜ್, ಉಪಾಧ್ಯಕ್ಷರುಗಳಾದ ಶರೀಫ್, ಶಿವಣ್ಣ, ನಗರಾಧ್ಯಕ್ಷ ರಾಮ್, ವಿದ್ಯಾರ್ಥಿ ಘಟಕದ ಅಧ್ಯಕ್ಷ
ಮಂಜುನಾಥ್ ಎಂ. ಯುವ ಘಟಕದ ಅಧ್ಯಕ್ಷ ಮಣಿ, ಕಾರ್ಮಿಕ ಘಟಕದ ಅಧ್ಯಕ್ಷ ಫೈಜುಲ್ಲಾ ಈ ಸಂದರ್ಭದಲ್ಲಿದ್ದರು.