Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುರುಘಾಶ್ರೀಗಳ ಬಿಡುಗಡೆ : ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದೇನು…?

ಸಚಿವ ಪರಮೇಶ್ವರ್
---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್.17 : ಫೋಕ್ಸೋ ಪ್ರಕರಣದಡಿಯಲ್ಲಿ ಬಂಧನಕ್ಕೆ ಒಳಗಾಗಿದ್ದ ಮುರುಘಾಶ್ರೀಗಳನ್ನು ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಈ ಸಂಬಂಧ ಗೃಹ ಸಚಿವ ಜಿ ಪರಮೇಶ್ವರ್ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಕೋರ್ಟ್ ಆದೇಶ ಏನೂ ಬಂದಿದೆ ಅದನ್ನು ಚಾಚು ತಪ್ಪದೇ ಪಾಲಿಸುತ್ತೇವೆ. ಕೋರ್ಟ್ ನಲ್ಲಿ ವಿಷಯ ಇರುವುದರಿಂದ ಕೋರ್ಟ್ ಆದೇಶದಂತೆ ನಡೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಇದೆ ವೇಳೆ ಹೆಚ್ಡಿಕೆ ವಿರುದ್ಧವೂ ಕಿಡಿಕಾರಿದ್ದು, ಮುಖ್ಯಮಂತ್ರಿಗಳು ಸೇರಿದಂತೆ ಅವರ ಪಟಾಲಂ ನನ್ನನ್ನು ಕಳ್ಳನನ್ನಾಗಿ ಮಾಡುತ್ತಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿರವರ  ಹೇಳಿಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಮುಖ್ಯಮಂತ್ರಿ ಆಗಿ ಎರಡು ಬಾರಿ ಹೆಚ್.ಡಿ ಕುಮಾರಸ್ವಾಮಿ ಕೆಲಸ ನಿರ್ವಹಿಸಿದ್ದಾರೆ. ಟೀಕೆ ಟಿಪ್ಪಣಿ ಮಾಡಲಿ ನಾವು ಬೇಡ ಅಂತ ಹೇಳಲ್ಲ. ಸಲಹೆ ಬೇಕು ನೀಡಲಿ, ಸುಖಾ ಸುಮ್ಮನೆ ನಮ್ಮ ಪ್ರತಿಕ್ರಿಯೆ ಇರಲ್ಲ ಎಂದರು.

ಮತ್ತೊಂದು ಕಡೆ ಗ್ಯಾರಂಟಿ ಯೋಜನೆ ಅರೆಬೆಂದ ಯೋಜನೆ ಎಂಬ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಚಿವರು ಸಾವಿರಾರು ಕೋಟಿ ಜನರಿಗೆ ನಾವು ಗ್ಯಾರಂಟಿ ಯೋಜನೆ ನೀಡಿದ್ದೇವೆ. ಅನ್ನಭಾಗ್ಯ, ಗೃಹಲಕ್ಷ್ಮಿ ನೇರವಾಗಿ ಜನರಿಗೆ ನೀಡಿದ್ದೇವೆ. ನಮ್ಮ ರಾಜಕೀಯ ನಾಯಕರ ಸರ್ಟಿಫಿಕೇಟ್ ಬೇಕಾಗಿಲ್ಲ. ಜನಸಮುದಾಯ ಸರ್ಟಿಫಿಕೇಟ್ ನೀಡಿದೆ ಮುಂದೆಯೂ ನೀಡುತ್ತಾರೆ ಎಂದರು.

 

ತೆಲಂಗಾಣದಲ್ಲಿ ಜಮೀರ್ ಹೇಳಿಕೆಗೆ ಪ್ರತಿಕ್ರಿಯಿಸಿ  ಜಮೀರ್ ಏನೂ ಹೇಳಿದ್ದಾರೆ ನನಗೆ ಗೊತ್ತಿಲ್ಲ. ಅದನ್ನು ತಿಳಿದುಕೊಂಡು ನಾನು ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಚಿವರು ತಿಳಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment