Connect with us

Hi, what are you looking for?

ಪ್ರಮುಖ ಸುದ್ದಿ

ಮುರುಘಾ ಮಠದಲ್ಲಿ ಜಯವಿಭವ ಮಹಾಸ್ವಾಮಿ ಸ್ಮರಣೆ

ಸುದ್ದಿಒನ್, ಚಿತ್ರದುರ್ಗ, (ಮೇ.21)  : ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಶುಕ್ರವಾರ ಲಿಂಗೈಕ್ಯ ಶ್ರೀ ಜಗದ್ಗುರು ಜಯವಿಭವ ಮುರುಘರಾಜೇಂದ್ರ ಮಹಾಸ್ವಾಮಿಗಳ ಸ್ಮರಣೆ ನಡೆಯಿತು.

ಡಾ.ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, ಜಯದೇವ ಶ್ರೀಗಳು ಲಿಂಗೈಕ್ಯರಾದ ನಂತರ ಜಯವಿಭವ ಸ್ವಾಮಿಗಳು ಪೀಠಾಧ್ಯಕ್ಷರಾಗಿ ಆಯ್ಕೆಯಾದರು. ಇವರ ಪೂರ್ವಾಶ್ರಮದ ಹೆಸರು ಶಿವಲಿಂಗದೇವರು. ಮೊದಲು ಅಥಣಿ ಗಚ್ಚಿನಮಠದಲ್ಲಿ ಮುರುಘೇಂದ್ರ ಶ್ರೀಗಳ ಕಾರುಣ್ಯದ ಜೊತೆ ಕಾರ್ಯಾರಂಭ ಮಾಡಿದರು ಎಂದರು.

ಮುಳಗುಂದದ ಬಾಲಲೀಲ ಶ್ರೀಗಳವರ ಮತ್ತು ಮುರುಘೇಂದ್ರ ಶಿವಯೋಗಿಗಳವರ ಆಶೀರ್ವಾದ ಇದ್ದುದನ್ನು ನೋಡಿದ ಜಯದೇವ ಶ್ರೀಗಳು ಶಿವಲಿಂಗ ದೇವರನ್ನು ಹೆಚ್ಚಿನ ವಿದ್ಯಾಭ್ಯಾಸಕ್ಕೆ ಕಾಶಿಗೆ ಕಳುಹಿಸುತ್ತಾರೆ. ಇವರ ಜೊತೆ ಮಲ್ಲಿಕಾರ್ಜುನ ಜಗದ್ಗುರುಗಳು ಸಹ ಕಾಶಿಪೀಠದಲ್ಲಿ ಜೊತೆಯಾಗಿ ಇಬ್ಬರು ಒಂದೇ ಕೊಠಡಿಯಲ್ಲಿ ಇದ್ದು ವಿದ್ಯಾಭ್ಯಾಸ ಮಾಡಿದ್ದರು. ಜಯವಿಭವ ಶ್ರೀಗಳಲ್ಲಿ ಕೃಷಿ ಆಸಕ್ತಿ ಮಾತ್ರವಲ್ಲ ಪಾಕಪ್ರವೀಣರಾಗಿದ್ದರು. ಪೀಠಾಧೀಶರಾದ ಮೇಲೆ ಪಶುಪಾಲನೆಗೆ ಹೆಚ್ಚಿನ ಆದ್ಯತೆ ನೀಡಿದರು.

ಯಾವ ಮಠವು ಗೋಶಾಲೆ ಮಾಡದ ಸಂದರ್ಭದಲ್ಲಿ ಜಯವಿಭವ ಸ್ವಾಮಿಗಳು ಮಾಡಿದ್ದರು. ಸಾವಿರಾರು ದನಕರುಗಳು ಇದ್ದವು. ಮಠದೊಳಗೆ ಇರುವ ತೆಂಗಿನ ಮರಗಳು ಸಹ ಅವರೇ ಹಾಕಿದ್ದು. ಸಾಧನೆ ಮಾಡಿದವರು ಲಿಂಗೈಕ್ಯರಾಗಬಹುದು ಆದರೆ ಅವರ ಸಾಧನೆಗೆ ಸಾವಿರುವುದಿಲ್ಲ. ದವಳಿ ಹೊಂಡದ ತೋಟವು ಸಹ ಅವರೇ ಹಾಕಿ ಬೆಳೆಸಿದ್ದು. ಜಯದೇವ ಶ್ರೀಗಳು ಹಾಗು ಜಯವಿಭವ ಶ್ರೀಗಳ ಮಧ್ಯೆ ಹಾರ್ದಿಕವಾದ ಸ್ಪರ್ಧೆ ಇತ್ತು ಎಂದು ನೆನೆದರು.

ಸಾತ್ವಿಕರು, ಸಂಪನ್ನರು. ಬಹಳ ಕಾಲ ಪೀಠಾಧ್ಯಕ್ಷರಾಗಿರಲಿಲ್ಲ. ಅನಾರೋಗ್ಯದಿಂದ ಅಲ್ಪಕಾಲದಲ್ಲಿಯೇ ಲಿಂಗೈಕ್ಯರಾದರು. ಕಡಿಮೆ ಅವಧಿಯಲ್ಲಿ ಶ್ರೀಮಠದ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರು. ಇಂದು ಹಣ ಸಂಪಾದನೆಗಿಂತ ಪ್ರಾಣ ಸಂಪಾದನೆ ಮುಖ್ಯ. ನಮ್ಮ ಜೀವವನ್ನು ನಾವೇ ಉಳಿಸಿಕೊಳ್ಳಬೇಕಿದೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕೆಇಬಿ ಷಣ್ಮುಖಪ್ಪ, 1956 ರಿಂದ 65ರವರೆಗೆ ಶ್ರೀಮಠದ ಪೀಠಾಧ್ಯಕ್ಷರಾಗಿದ್ದ ಜಯವಿಭವ ಶ್ರೀಗಳಿಗೆ ಕೃಷಿಯ ಬಗ್ಗೆ ಅಪಾರ ಪ್ರೀತಿಯಿತ್ತು. 1962ರಲ್ಲಿ ಚೀನಾ ಯುದ್ಧವಾದಾಗ ನಿಜಲಿಂಗಪ್ಪ ಮುಖ್ಯಮಂತ್ರಿಗಳಾಗಿದ್ದರು. ಆ ಸಂದರ್ಭದಲ್ಲಿ ಜನರಿಗೆ ಸಹಾಯ ಮಾಡಲೆಂದು ಪರಂಪರಾಗತರಾಗಿ ಬಂದಿದ್ದಂತಹ ಕಿರೀಟವನ್ನು ಭಾರತ ಸರ್ಕಾರಕ್ಕೆ ಕೊಟ್ಟ ಉದಾರಿಗಳು ಎಂದು ಸ್ಮರಿಸಿದರು.

ಪಟೇಲ್ ಶಿವಕುಮಾರ್, ಎಂ.ಟಿ.ಮಲ್ಲಿಕಾರ್ಜುನಸ್ವಾಮಿ, ಮಹಡಿ ಶಿವಮೂರ್ತಿ, ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಉಮೇಶ ಪತ್ತಾರ, ಕೆ.ಎಂ.ವೀರೇಶ್, ವೀರೇಂದ್ರ ಕುಮಾರ್ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Latest

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

ಪ್ರಮುಖ ಸುದ್ದಿ

ಬೆಂಗಳೂರು :ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕೊನೆ ಕ್ಷಣದಲ್ಲಿ ತನ್ನ ಪಾಳಯದ ಬಸವರಾಜ್ ಬೊಮ್ಮಾಯಿ ಅವರಿಗೆ ಪಟ್ಟ ಕಟ್ಟಿ ಇದೀಗ ರಾಜ್ಯ ಪ್ರವಾಸಕ್ಕೆ ಮುಂದಾಗಿದ್ದಾರೆ ಬಿ.ಎಸ್.ಯಡಿಯೂರಪ್ಪ. ದೆಹಲಿಯಲ್ಲಿ ಸಚಿವ ಸಂಪುಟ ಕಸರತ್ತು...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!