Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಖ್ಯಾತ ಸಾಹಿತಿ ಡಾ.ಕಮಲಾ ಹಂಪ ನಿಧನ : ದೇಹದಾನ ಮಾಡಿದ ಕುಟುಂಬಸ್ಥರು

---Advertisement---

ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ ನಾಡೋಜಾ ಕಮಲಾ ಹಂಪಾ ಅವರು ಇಂದಯ ಇಹಲೋಕ ತ್ಯಜಿಸಿದ್ದಾರೆ. ಬೆಳಗ್ಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದು, ಇವರಿಗೆ 89 ವರ್ಷ ವಯಸ್ಸಾಗಿತ್ತು. ಈ ಮಧ್ಯೆ ವಯೋಸಹಜ ಕಾಯಿಕೆಯಿಂದ ಕೂಡ ಬಳಲುತ್ತಿದ್ದರು. ಕಮಲಾ ಹಂಪ ಅವರ ಪತಿಯೂ ಖ್ಯಾತ ಸಾಹಿತಿಗಳಾಗಿದ್ದಾರೆ. ಪತಿ ನಾಗರಾಜಯ್ಯ, ಮೂವರು ಮಕ್ಕಳು ಹಾಗೂ ಅಪಾರವಾದಂತ ಅಭಿಮಾನಿ ಬಳಗವನ್ನು ಕಮಲಾ ಹಂಪ ತೊರೆದಿದ್ದಾರೆ.

ಕಮಲಾ ಹಂಪ ಅವರು ತಮ್ಮ ಮಗಳ ಮನೆಯಲ್ಲಿಯೇ ವಾಸವಾಗಿದ್ದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮಗಳು ಆರತಿ ಮನೆಯಲ್ಲಿ ಇದ್ದರು. ಶುಕ್ರವಾರ ರಾತ್ರಿ 10 ಗಂಟೆಯ ವೇಳೆಗೆ ಅವರಿಗೆ ಹೃದಯಾಘಾತವಾಗಿದೆ. ಎಲ್ಲರನ್ನು ಬಿಟ್ಟು ಇಹಲೋಕ ತ್ಯಜಿಸಿದ್ದಾರೆ. ಅವರ ಮೃತದೇಹವನ್ನು ರಾಮಯ್ಯ ಕಾಲೇಜಿಗೆ ದಾನ ಮಾಡಿ, ಸಾರ್ಥಕತೆ ಮೆರೆದಿದ್ದಾರೆ.

ಕಮಲಾ ಹಂಪನಾ ಅವರ ಮೃತದೇಹವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ. ರಾಜಾಜಿನಗರದ ಅವರ ನಿವಾಸದಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕಮಲಾ ಹಂಪ ನಿಧನಕ್ಕೆ ಅನೇಕ ಕ್ಷೇತ್ರದ ಗಣ್ಯರು ಕಂಬನಿ‌ ಮಿಡಿದಿದ್ದಾರೆ.

 

ಬೆಂಗಳೂರಿನ ದೇವನಹಳ್ಳಿಯಲ್ಲಿ 1935ರ ಅಕ್ಟೋಬರ್ 28ರಂದು ಸಿ. ರಂಗಧಾಮನಾಯಕ್ ಮತ್ತು ಲಕ್ಷಮ್ಮ ದಂಪತಿ ಪುತ್ರಿಯಾಗಿ ಕಮಲಾ ಹಂಪನಾ ಜನಿಸಿದರು. ತುಮಕೂರು ಮತ್ತು ಮೈಸೂರಿನಲ್ಲಿ ಶಾಲಾ ಶಿಕ್ಷಣ ಪೂರ್ಣಗೊಳಿಸಿ 1956ರಲ್ಲಿ ಕನ್ನಡ ಅಧ್ಯಾಪಕಿಯಾಗಿ ವೃತ್ತಿ ಜೀವನ ಆರಂಭಿಸಿದ್ದರು. ಕಮಲಾ ಹಂಪನಾ ಅವರು 60 ವರ್ಷಗಳಕಾಲ ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಮಾಡಿದ್ದಾರೆ. ನಕ್ಕಿತು ಹಾಲಿನ ಬಟ್ಟಲು, ರೆಕ್ಕೆ ಮುರಿದಿತ್ತು, ಚಂದನಾ, ಬಣವೆ, ಸಂಶೋಧನಾ ಕೃತಿಗಳಾದ ತುರಂಗ ಭಾರತ – ಒಂದು ಅಧ್ಯಯನ, ಶಾಂತಿನಾಥ, ಆದರ್ಶ ಜೈನ ಮಹಿಳೆಯರು, ಅನೇಕಾಂತವಾದ, ನಾಡು ನುಡಿ ನಾವು, ಜೈನ ಸಾಹಿತ್ಯ ಪರಿಸರ, ಬದ್ದವಣ, ರೋಣದ ಬಸದಿ ಸೇರಿ ಹಲವು ಕಥಾ ಕವನ ಸಂಕಲನಗಳು, ಶಿಶು ಸಾಹಿತ್ಯ, ಅನುವಾದಗಳು, ಕಾದಂಬರಿಗಳನ್ನು ಕನ್ನಡ ಸಾಹಿತ್ಯ ಪ್ರಿಯರಿಗಾಗಿ ಕೊಡುಗೆ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment