ಹುಬ್ಬಳ್ಳಿ: ಈ ಬಾರಿಯ ಚಳಿಗಾಲದ ಅಧಿವೇಶನ ಸುವರ್ಣಸೌಧದಲ್ಲಿ ನಡೆದಿದೆ. ಈ ಅಧಿವೇಶನದಲ್ಲಿ ಈ ಬಾರಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ನಡೆಯುತ್ತೆ ಅನ್ನೋ ನಿರೀಕ್ಷೆ ಇತ್ತು. ಆದ್ರೆ ಆ ನಿರೀಕ್ಷೆಯೂ ಹುಸಿಯಾಗಿದೆ. ಈ ಸಂಬಂಧ ಉತ್ತರ ಕರ್ನಾಟಕ ಭಾಗದ ಶಾಸಕರು, ಸಚಿವರಿಗೂ ಬೇಸರವಾಗಿದೆ.
ಇದೀಗ ಈ ಬಗ್ಗೆ ಮಾತನಾಡಿರುವ ಶಾಸಕ ರೇಣುಕಾಚಾರ್ಯ ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ. ಉತ್ತರ ಕರ್ನಾಟಕದ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಬಿಟ್ಟಿಲ್ಲ. ಸದನದ ಬಾವಿಗಿಳಿದು ಅನಾವಶ್ಯಕವಾಗಿ ಸಮಯ ವ್ಯರ್ಥ ಮಾಡಿದ್ರು ಎಂದಿದ್ದಾರೆ. ಇದು ಕಾಂಗ್ರೆಸ್ ನ ಹುನ್ನಾರ. ಉತ್ತರ ಕರ್ನಾಟಕದ ಬಗ್ಗೆ ಚರ್ಚೆಯಾಗೋದಕ್ಕೆ ಅವರು ಬಿಟ್ಟಿಲ್ಲ.
ಕಾಂಗ್ರೆಸ್ ನವರು ಇಟಲಿಯ ಸೋನಿಯಾಗಾಂಧಿ ಮಾತು ಕೇಳೋರು. ತಾಕತ್ತಿದ್ರೆ ಒಂದೇ ಒಂದು ಸಾರಿ ನಾವು ಹಿಂದೂಗಳು ಅಂತ ಹೇಳಲಿ. ಈಗಾಗಲೇ ಕಾಂಗ್ರೆಸ್ ಪಕ್ಷಕ್ಕೆ ಗರ್ಭಪಾತವಾಗಿದೆ. ಹೆಣ್ಣೋ ಗಂಡೋ ಗೊತ್ತಿಲ್ಲ. ಮತಾಂತರ ನಿಷೇಧ ಕಾಯ್ದೆಯನ್ನ ರದ್ದುಗೊಳಿಸ್ತೀವಿ ಅಂದಿದ್ದಾರೆ. 2016ರಲ್ಲಿ ಸಿದ್ದರಾಮಯ್ಯ, ಟಿ ಬಿ ಜಯಚಂದ್ರ ಸಹಿ ಹಾಕಿರುವ ದಾಖಲೆ ಇದೆ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…