Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಡಿಕೆಶಿ ಮನೆಗೆ ಭೇಟಿ : ನಗುಮುಖದಲ್ಲಿ ಹೇಳಿದ್ದೇನು ರೇಣುಕಾಚಾರ್ಯ..?

---Advertisement---

 

ಬೆಂಗಳೂರು: ಎಂ.ಪಿ.ರೇಣುಕಾಚಾರ್ಯ ಇಂದು ಇದ್ದಕ್ಕಿದ್ದ ಹಾಗೇ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ್ದರು. 20 ನಿಮಿಷಕ್ಕೂ ಹೆಚ್ಚಿನ ಕಾಲ ಚರ್ಚೆಯನ್ನು ಮಾಡಿದರು. ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನ್ನಾಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮೊದಲನೆಯದಾಗಿ ಹೊಸ ವರ್ಷದ ಶುಭಾಶಯ ಕೋರಿದ್ದೇನೆ.  ಭದ್ರಾ ಜಲಾಶಯ ನಿರಾವರಿ ನಿಗಮದಲ್ಲಿ ಒಂದು ಲಕ್ಷದ ಐದು ಸಾವಿರ ಹೆಕ್ಟೇರ್ ಇದೆ. ಭದ್ರಾ ಜಲಾಶಯದ ಅಚ್ಚುಕಟ್ಟು. ಅದನ್ನ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಸೇರಿಸಲು ಹೊರಟಿದ್ದಾರೆ. ನಾನು ವಿನಂತಿ ಮಾಡಿದ್ದೇನೆ. 2 ಲಕ್ಷದ 25 ಸಾವಿರ ಹೆಕ್ಟೇರ್ ಹನಿ ನೀರಾವರಿ, ಚಿತ್ರದುರ್ಗ ಮತ್ತು ತುಮಕೂರಿಗೆ, ಒಂದು ವೇಳೆ ಭದ್ರಾ ಜಲಾಶಯವನ್ನ ವಿಶ್ವೇಶ್ವರಯ್ಯ ಯೋಜನೆಗೆ ಸೇರಿಸಿದ್ರೆ, ದಾವಣಗೆರೆ ಜಿಲ್ಲೆಯ ಹಕ್ಕು ಹೋಗುತ್ತೆ. ಹಾಗಾಗಿ ಮಾನ್ಯ ಉಪಮುಖ್ಯಮಂತ್ರಿಗಳನ್ನ ಭೇಟಿ ಮಾಡಿ, ಇದನ್ನ ಮ್ಯೂಸಿಯಂನಲ್ಲಿ ಸೇರಿಸುವುದು ಬೇಡ ಎಂದು ಮನವಿ ಮಾಡಿದ್ದೇನೆ.

ಕರ್ನಾಟಕ ನೀರಾವರಿ ನಿಗಮದಲ್ಲಿಯೇ ಇರಲಿ ಎಂದು ಮನವಿ ಮಾಡಿದ್ದೇನೆ. ಸುಮಾರು 20 ನಿಮಿಷಗಳ ಕಾಲ ಬಹಳಷ್ಟು ಆತ್ಮೀಯವಾಗಿ ಮಾತನ್ನಾಡಿದ್ದಾರೆ. ನಮ್ಮ ಉದ್ದೇಶ ಇಲ್ಲಿ ರಾಜಕಾರಣಕ್ಕಾಗಿ ಭೇಟಿ ಮಾಡಲ್ಲ. ನಮ್ಮ ಅವರ ನಡುವೆ ಆತ್ಮೀಯ ಸಂಬಂಧ, ವಿಶ್ವಾಸಕ್ಕೆ ಮಾತನ್ನಾಡಿದ್ದೀವಿ. ಇಲ್ಲಿ ಯಾವುದೇ ರಾಜಕೀಯ ವಿಚಾರಗಳನ್ನು ಮಾತನ್ನಾಡಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಭದ್ರಾ ಜಲಾಶಯ ನಮ್ಮ ಹಕ್ಕು. ನಮ್ಮ ದಾವಣಗೆರೆ ಜಿಲ್ಲೆಗೆ ಸೇರಿದ್ದು. ಒಂದು ಲಕ್ಷದ ಐದು ಸಾವಿರ ಹೆಕ್ಟೇರ್. ನೋಡೋಣಾ ಚರ್ಚೆ ಮಾಡ್ತೀವಿ ಅಂತ ಹೇಳಿದ್ದಾರೆ. ಈಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಬೇಕು. ಅವರ ಬಳಿಯೂ ಮನವಿ ಮಾಡ್ತೇನೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now