ದಾವಣಗೆರೆ: ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಪುತ್ರಿ ಮತ್ತು ಸಹೋದರ ನಕಲಿ ಜಾತಿ ಪ್ರಮಾಣ ಪತ್ರ ಸೃಷ್ಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪತ್ರ ಬರೆದಿದ್ದಾರೆ. ಸುಳ್ಳು ಜಾತಿ ಪ್ರಮಾಣ ಪತ್ರ ಸೃಷ್ಟಿಸಿರುವ ಬಗ್ಗೆ ಯಾವ ರೀತಿಯಾದ ಕ್ರಮ ತೆಗೆದುಕೊಂಡಿದ್ದೀರಿ ಎಂದು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ ಕೇಳಿದೆ.
ರೇಣುಕಾಚಾರ್ಯ ಅವರ ಮಗಳು ಎಂ ಆರ್ ಚೇತನಾ ಹಾಗೂ ಸಹೋದರ ಎಂ ಪಿ ದ್ವಾರಕೇಶ್ವಯ್ಯ ತಮ್ಮ ಜಾತಿಯನ್ನು ಮರೆ ಮಾಚಿ, ಬೇಡ ಜಂಗಮ ಎಂದು ಪರಿಶಿಷ್ಟ ಜಾತಿ ಎಂದು ಸುಳ್ಳು ಪ್ರಮಾಣ ಪತ್ರ ಸೃಷ್ಟಿ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ದ್ವಾರಕೇಶಯ್ಯ ಅವರು ಎಸ್ಸಿ ಮೀಸಲಾತಿ ಪ್ರಮಾಣಪತ್ರದ ಮೂಲಕವೇ ಕಲಬುರಗಿಯ ಮೀಸಲು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದರು.
ಈ ನಕಲಿ ಪ್ರಮಾಣ ಪತ್ರವನ್ನು ರದ್ದು ಮಾಡಿ ಕಳೆದ ಏಪ್ರಿಲ್ ನಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಇದೀಗ ಸುಳ್ಳು ಜಾತಿ ಪ್ರಮಾಣ ಪತ್ರ ಸೃಷ್ಟಿಸಿದ್ದವರ ಮೇಲೆ ಕ್ರಮ ತೆಗೆದುಕೊಂಡಿದ್ದವರ ಬಗ್ಗೆ ಏನು ಕ್ರಮ ತೆಗೆದುಕೊಂಡಿದ್ದೀರಾ ಎಂದು ಪತ್ರದ ಮೂಲಕ ಕೇಳಿದ್ದಾರೆ.