ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಪ್ರಕರಣವನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಡೇ ಟು ಡೇ ವಿಚಾರಣೆ ನಡೆಸಬೇಕೆಂದು ಮನವಿ ಸಲ್ಲಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ 57ನೇ ಸೆಷನ್ಸ್ ಕೋರ್ಟ್‌ನಲ್ಲಿ ಸಾಕ್ಷ್ಯಗಳ ಪರಿಶೀಲನೆ ಹಾಗೂ ವಿಚಾರಣೆ ಹಿನ್ನೆಲೆ ಇಂದು ಟ್ರಯಲ್‌ಗೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಗಳನ್ನು ವಿಚಾರಣೆ ನಡೆದುದ್ದು, ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿ ನಟ ದರ್ಶನ್ ಇಂದು ವಿಡಿಯೋ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಪ್ರಕರಣವನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಡೇ ಟು ಡೇ (ಪ್ರತಿದಿನ) ಆಧಾರದ ಮೇಲೆ ವಿಚಾರಣೆ ನಡೆಸಬೇಕು ಎಂದು ದರ್ಶನ್ ಪರ ವಕೀಲರು ಮನವಿ ಸಲ್ಲಿಸಿದ್ದಾರೆ.



