Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಣುಕಾಸ್ವಾಮಿ ಕೊ*** ಪ್ರಕರಣ : ರಾಜ್ಯ ಸರ್ಕಾರಕ್ಕೆ ನೋಟೀಸ್ ನೀಡಿದ ಸುಪ್ರೀಂ ಕೋರ್ಟ್..!

---Advertisement---

ದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊ** ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಒಂದಷ್ಟು ಪ್ರಶ್ನೆಗಳನ್ನ ಕೇಳಿ, ನೋಟೀಸ್ ನೀಡಿದೆ. ಇಂದು ಸುಪ್ರೀಂ ಕೋರ್ಟ್ ನಲ್ಲಿ ದರ್ಶನ್ ಪರ ವಕೀಲರಾದ ಮುಕಲ್ ರೋಹ್ಟಗಿ ವಾದ ಮಂಡಿಸಿದರು‌.

ಈ ಕೇಸಿನ ಪ್ರಗತಿಯ ಬಗ್ಗೆ ಹಾಗೂ ಸಮಗ್ರ ವರದಿ ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಹಾಗೂ ವಿಜಯ್ ಬಿಷ್ಣೋಯಿ ಅವರ ಪೀಠವು ರಾಜ್ಯ ಸರ್ಕಾರಕ್ಕೆ ನೋಟೀಸ್ ನೀಡಿದೆ. ಈ ವಿಚಾರಣೆಯನ್ನು ಮುಂದೂಡಲಾಗಿದೆ. ಇನ್ನು ದಿನಾಂಕ ಸೂಚಿಸಿಲ್ಲ. ಆದರೆ ಒಂದು ವಾರದ ಒಳಗೆ ಉತ್ತರಿಸುವಂತೆ ಸೂಚನೆ ನೀಡಿದೆ. ಹಾಗಾದ್ರೆ ಸುಪ್ರೀಂ ಕೋರ್ಟ್ ಯಾವೆಲ್ಲಾ ಪ್ರಶ್ನೆಗಳನ್ನ ಕೇಳಿದೆ ಎಂಬ ಮಾಹಿತಿ ಇಲ್ಲಿದೆ‌. ಪ್ರಕರಣದಲ್ಲಿ ಇದುವರೆಗೂ ಎಷ್ಟು ಸಾಕ್ಷಿಗಳ ವಿಚಾರಣೆ ನಡೆಸಲಾಯ್ತು..? ಇನ್ನು ಎಷ್ಟು ಸಾಕ್ಷಿಗಳ ವಿಚಾರಣೆ ಬಾಕಿ ಇದೆ..? ಇಡೀ ಸಾಕ್ಷ್ಯ ವಿಚಾರಣೆ ಮುಗಿಯುವುದಕ್ಕೆ ಅಂದಾಜು ಎಷ್ಟು ಸಮಯ ಬೇಕಾಗಬಹುದು..? ನಿಯಮಾನುಸಾರ ದರ್ಶನ್ ಅವರಿಗೆ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆಯಾ..? ಇಲ್ಲವಾ..? ಎಂಬ ಪ್ರಶ್ನೆಗಳನ್ನ ಕೇಳಿದೆ. ಅದಕ್ಕೆ ಒಂದು ವಾರದ ಒಳಗೆ ಉತ್ತರಿಸುವುದಕ್ಕೂ ಸೂಚನೆ ನೀಡಿದೆ.

ಇನ್ನು ದರ್ಶನ್ ಪರ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದಾಗ ಆ ಅರ್ಜಿಯಲ್ಲಿ ಸಾಕ್ಷಿಗಳ ವಿಚಾರಣೆಯನ್ನು ತುಂಬಾ ನಿಧಾನ ಮಾಡುತ್ತಿರುವುದನ್ನು ಉಲ್ಲೇಖಿಸಲಾಗಿದೆ. ಜೈಲು ನಿಯಮಗಳಿಗೆ ವಿರುದ್ಧವಾಗಿ ಕ್ವಾರಂಟೈನ್ ಸೆಲ್ ನಲ್ಲಿ ಇಟ್ಟಿರುವುದು, ಸೌಲಭ್ಯ ಕೊಡದೆ ಇರುವುದು, ಕುಟುಂಬಸ್ಥರು ಬಂದಾಗ ಆತ್ಮೀಯವಾಗಿ ಮಾತನ್ನಾಡುವುದಕ್ಕೆ ಸಾಧ್ಯವಾಗದ ರೀತಿ ಬ್ಯಾರಿಕೇಡ್ ಹಾಕುವಂತದ್ದು, ಆರೋಗ್ಯ ಸನಸ್ಯೆ, ವೃತ್ತಿ ಜೀವನ, ಸಹ ಕೈದಿಗಳ ನಿಂದನೆ ಹೀಗೆ ಹಲವು ಮಾನಸಿಕ ಸಮಸ್ಯೆಯ ಬಗ್ಗೆಯೂ ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...