Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ಅರೆಸ್ಟ್ ಆಗಿ ಇಂದಿಗೆ 2 ವರ್ಷ

---Advertisement---

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ (Actor Darshan) ಬಂಧನವಾಗಿ ಇಂದಿಗೆ ಸರಿಯಾಗಿ ಎರಡು ವರ್ಷಗಳು ಪೂರೈಸಲಿವೆ.

2024ರ ಜೂನ್ 11ರಂದು ಮೈಸೂರಿನ ಹೋಟೆಲೊಂದರಲ್ಲಿದ್ದ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದರು. ಮಧ್ಯೆ ಒಂದು ಬಾರಿ ಮಧ್ಯಂತರ ಜಾಮೀನು ಪಡೆದು ಹೊರಬಂದಿದ್ದ ದರ್ಶನ್, ಬಳಿಕ ಸುಪ್ರೀಂ ಕೋರ್ಟ್ನಲ್ಲಿ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಸದ್ಯ ಇತರೆ ಆರು ಆರೋಪಿಗಳೊಂದಿಗೆ ಮತ್ತೆ ಜೈಲು ಪಾಲಾಗಿದ್ದಾರೆ.

ಈ ನಡುವೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ಗೆ ಹೈಕೋರ್ಟ್ನಲ್ಲಿ ಭಾರಿ ಹಿನ್ನಡೆಯಾಗಿದ್ದು, ನಟ ದರ್ಶನ್ ಗ್ಯಾಂಗ್ನ ಐವರು ಆರೋಪಿಗಳಿಗೆ ದೊಡ್ಡ ರಿಲೀಫ್ ಸಿಕ್ಕಿದೆ.

ಪ್ರಾಸಿಕ್ಯೂಷನ್ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್

ಆರೋಪಿಗಳಾದ ಪವನ್, ರಾಘವೇಂದ್ರ, ನಂದೀಶ್, ವಿನಯ್ ಹಾಗೂ ಧನರಾಜ್ ಅವರಿಗೆ ಕೆಳಹಂತದ ನ್ಯಾಯಾಲಯ ನೀಡಿದ್ದ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ವಿಶೇಷ ಸರ್ಕಾರಿ ಅಭಿಯೋಜಕರು (SPP) ಹೈಕೋರ್ಟ್ ಮೆಟ್ಟಿಲೇರಿದ್ದರು. “ಆರೋಪಿಗಳು ಜಾಮೀನಿನ ಮೇಲೆ ಹೊರಗಿದ್ದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಹೆಚ್ಚಿದೆ” ಎಂದು ಪ್ರಾಸಿಕ್ಯೂಷನ್ ಪರವಾಗಿ ಪ್ರಬಲ ವಾದ ಮಂಡಿಸಲಾಗಿತ್ತು.

ಆದರೆ, ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಚಯ್ಯ ಅವರ ಏಕಸದಸ್ಯ ಪೀಠವು ಎರಡೂ ಪಕ್ಷಗಳ ಸುದೀರ್ಘ ವಾದ-ವಿವಾದಗಳನ್ನು ಆಲಿಸಿತು. ಅಂತಿಮವಾಗಿ, ಆರೋಪಿಗಳ ಜಾಮೀನು ರದ್ದುಪಡಿಸಲು ಯಾವುದೇ ಸಮರ್ಪಕ ಕಾರಣಗಳಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯವು, ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು. ಈ ಮೂಲಕ ಐವರು ಆರೋಪಿಗಳ ಜಾಮೀನು ಮುಂದುವರಿಯಲಿದೆ.

Join WhatsApp

Join Now

Join Telegram

Join Now