ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸುಮಾರು ಏಳು ತಿಂಗಳುಗಳ ಕಾಲ ಜೈಲಿನಲ್ಲಿ ಇದ್ದು ಬಂದವರು ದರ್ಶನ್ ಮತ್ತು ಸ್ನೇಹಿತರು. ಬಳಿಕ ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದರು. ಆ ಜಾಮೀನು ಪ್ರಶ್ನಿಸಿ ಪೊಲೀಸ್ ಇಲಾಖೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ಕೋರ್ಟ್ ನಿಂದ ಶಾಕಿಂಗ್ ನ್ಯೂಸ್ ಸಿಕ್ಕಿದೆ.
ಜಸ್ಟೀಸ್ ಜೆ.ಬಿ.ಪರ್ದಿವಾಲಾ ಅವರ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯಿತು. ವಾದಿ ಮತ್ತು ಪ್ರತಿವಾದಿಗಳಿಬ್ಬರ ಪರ ವಕೀಲರು ಸುಪ್ರೀಂ ಕೋರ್ಟ್ ನಲ್ಲಿ ಉಪಸ್ಥಿತರಿದ್ದರು. ಈ ವೇಳೆ ವಾದ-ಪ್ರತಿವಾದ ನಡೆದಿದೆ.
ಜಾಮೀನು ನೀಡುವಾಗ ಹೈಕೋರ್ಟ್ ತನ್ನ ವಿವೇಚನೆಯನ್ನು ಸೂಕ್ತವಾಗಿ ಬಳಸಿಲ್ಲ ಎಂದು ನ್ಯಾ. ಪರ್ದಿವಾಲಾ ಆಕ್ಷೇಪಿಸಿದ್ದರು. ಈ ಬಗ್ಗೆ ಏನು ಹೇಳಬಯಸುತ್ತೀರಿ ಎಂದು ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿತು. ಹೈಕೋರ್ಟ್ ಆದೇಶವನ್ನು ಹೇಗೆ ನೀಡಿದೆ ಎನ್ನುವುದನ್ನು ನೀವು ಗಮನಿಸಿರಬಹುದು ಎಂದು ಸಿಬಲ್ ಅವರಿಗೆ ಸುಪ್ರೀಂ ಕೋರ್ಟ್ ಹೇಳಿದೆ. ಹಾಗೇ ಜುಲೈ 22ರಂದು ವಿಸ್ತೃತವಾಗಿ ಪ್ರಕರಣವನ್ನು ಆಲಿಸುವುದಾಗಿ ಸುಪ್ರೀಂ ಕೋರ್ಟ್ ನ್ಯಾಯಪೀಠ ತಿಳಿಸಿದೆ. ಎರಡು ಕಡೆಯ ವಕೀಲರಿಗೆ ವಾದವನ್ನು ಸಿದ್ಧಪಡಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಹೈಕೋರ್ಟ್ ಜಾಮೀನು ಆದೇಶದ ಪ್ರತಿಯನ್ನು ಸಂಪೂರ್ಣವಾಗಿ ಸುಪ್ರೀಂ ಕೋರ್ಟ್ ನ ಜಡ್ಜ್ ಜೆ.ಬಿ.ಪರ್ದಿವಾಲಾ ಅವರು ಓದಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಹೈಕೋರ್ಟ್ ತನ್ನ ವಿವೇಚನೆಯನ್ನು ಸರಿಯಾಗಿ ಬಳಸಿಲ್ಲ ಎಂಬುದನ್ನು ಸ್ಪಷ್ಟವಾಗಿ ತಿಳಿಸಿದೆ.






