Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಣುಕಾಸ್ವಾಮಿ ಕೊಲೆ ಕೇಸ್: ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಶಾಕಿಂಗ್ ನ್ಯೂಸ್..!

---Advertisement---

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸುಮಾರು ಏಳು ತಿಂಗಳುಗಳ ಕಾಲ ಜೈಲಿನಲ್ಲಿ ಇದ್ದು ಬಂದವರು ದರ್ಶನ್ ಮತ್ತು ಸ್ನೇಹಿತರು. ಬಳಿಕ ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದರು. ಆ ಜಾಮೀನು ಪ್ರಶ್ನಿಸಿ ಪೊಲೀಸ್ ಇಲಾಖೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ಕೋರ್ಟ್ ನಿಂದ ಶಾಕಿಂಗ್ ನ್ಯೂಸ್ ಸಿಕ್ಕಿದೆ.

ಜಸ್ಟೀಸ್ ಜೆ.ಬಿ.ಪರ್ದಿವಾಲಾ ಅವರ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯಿತು. ವಾದಿ ಮತ್ತು ಪ್ರತಿವಾದಿಗಳಿಬ್ಬರ ಪರ ವಕೀಲರು ಸುಪ್ರೀಂ ಕೋರ್ಟ್ ನಲ್ಲಿ ಉಪಸ್ಥಿತರಿದ್ದರು. ಈ ವೇಳೆ ವಾದ-ಪ್ರತಿವಾದ ನಡೆದಿದೆ.

ಜಾಮೀನು ನೀಡುವಾಗ ಹೈಕೋರ್ಟ್‌ ತನ್ನ ವಿವೇಚನೆಯನ್ನು ಸೂಕ್ತವಾಗಿ ಬಳಸಿಲ್ಲ ಎಂದು ನ್ಯಾ. ಪರ್ದಿವಾಲಾ ಆಕ್ಷೇಪಿಸಿದ್ದರು. ಈ ಬಗ್ಗೆ ಏನು ಹೇಳಬಯಸುತ್ತೀರಿ ಎಂದು ದರ್ಶನ್‌ ಪರ ಹಿರಿಯ ವಕೀಲ ಕಪಿಲ್‌ ಸಿಬಲ್‌ಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿತು. ಹೈಕೋರ್ಟ್‌ ಆದೇಶವನ್ನು ಹೇಗೆ ನೀಡಿದೆ ಎನ್ನುವುದನ್ನು ನೀವು ಗಮನಿಸಿರಬಹುದು ಎಂದು ಸಿಬಲ್‌ ಅವರಿಗೆ ಸುಪ್ರೀಂ ಕೋರ್ಟ್ ಹೇಳಿದೆ. ಹಾಗೇ ಜುಲೈ 22ರಂದು ವಿಸ್ತೃತವಾಗಿ ಪ್ರಕರಣವನ್ನು ಆಲಿಸುವುದಾಗಿ ಸುಪ್ರೀಂ ಕೋರ್ಟ್ ನ್ಯಾಯಪೀಠ ತಿಳಿಸಿದೆ. ಎರಡು ಕಡೆಯ ವಕೀಲರಿಗೆ ವಾದವನ್ನು ಸಿದ್ಧಪಡಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಹೈಕೋರ್ಟ್ ಜಾಮೀನು ಆದೇಶದ ಪ್ರತಿಯನ್ನು ಸಂಪೂರ್ಣವಾಗಿ ಸುಪ್ರೀಂ ಕೋರ್ಟ್ ನ ಜಡ್ಜ್ ಜೆ.ಬಿ.ಪರ್ದಿವಾಲಾ ಅವರು ಓದಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಹೈಕೋರ್ಟ್ ತನ್ನ ವಿವೇಚನೆಯನ್ನು ಸರಿಯಾಗಿ ಬಳಸಿಲ್ಲ ಎಂಬುದನ್ನು ಸ್ಪಷ್ಟವಾಗಿ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment