Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರೇಣುಕಾಸ್ವಾಮಿ ಕೊ*ಲೆ ಕೇಸ್ : ಕೋರ್ಟ್ ಗೆ ಹಾಜರಾದ ನಟ ದರ್ಶನ್, ಪವಿತ್ರಾ ಗೌಡ

---Advertisement---

 

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಹಾಗೂ ಪವಿತ್ರ ಗೌಡ ಸೇರಿದಂತೆ ಹದಿನೇಳು ಆರೋಪಿಗಳು ಇಂದು ಕೋರ್ಟ್ ಗೆ ಹಾಜರಾಗಿದ್ದಾರೆ. ಈಗಾಗಲೇ ದರ್ಶನ್ ಹಾಗೂ ಪವಿತ್ರಾ ಗೌಡ ಕೋರ್ಟ್ ಗೆ ಬಂದಿದ್ದಾರೆ.

64ನೇ ಸಿಸಿಹೆಚ್ ಕೋರ್ಟ್ ನಲ್ಲಿ ಈ ಕೇಸ್ ಗೆ ಸಂಬಂಧಿಸಿದಂತೆ ವಿಚಾರಣೆ ನಡೆಯಲಿದೆ. ಪ್ರಕರಣದ ಕುರಿತು ಮಾಹಿತಿ ಹಾಗೂ ವಿವರಣೆಯನ್ನು ಪಡೆಯೋದಕ್ಕೆ ಕೋರ್ಟ್ ವಿಚಾರಣೆಯನ್ನು ನಡೆಸುತ್ತಾ ಇದೆ. ಹೀಗಾಗಿ ಹದಿನೇಳು ಮಂದಿ ಆರೋಪಿಗಳು ಹಾಜರಾಗುವ ಸಾಧ್ಯತೆ ಇದೆ. ವಾದ ಪ್ರತಿ ವಾದವನ್ನು ಕೋರ್ಟ್ ಆಲಿಸಲಾಗುತ್ತದೆ. ಇವತ್ತು ಟ್ರೈಯಲ್ ದಿನಾಂಕವನ್ನು ನಿಗದಿ ಪಡಿಸುವ ಸಾಧ್ಯತೆ ಇದೆ.

ಇನ್ನು ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳ ಜಾಮೀನು ಅರ್ಜಿಯನ್ನು ವಜಾ ಮಾಡಬೇಕೆಂದು ರಾಜ್ಯ ಪೊಲೀಸ್ ಇಲಾಖೆ ಅದಾಗಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಅಲ್ಲಿಯೂ ವಾದ ಪ್ರತಿವಾದ ನಡೆದಿದ್ದು, ಮುಂದಿನ ವಿಚಾರಣೆಯಲ್ಲಿ ಏನಾಗಬಹುದು ಎಂಬ ಕುತೂಹಲ ಎಲ್ಲರಲ್ಲಿಯೂ ಇದೆ. ಕಳೆದ ಬಾರಿ ವಿಚಾರಣೆ ನಡೆದಾಗ ಪವಿತ್ರಾ ಗೌಡಗೆ ಸುಪ್ರೀಂ ಕೋರ್ಟ್ ಕ್ಲಾಸ್ ತೆಗೆದುಕೊಂಡಿತ್ತು. ಬಳಿಕ ಪವಿತ್ರಾ ಗೌಡ ಪರ ವಕೀಲರು, ಪವಿತ್ರಾ ಗೌಡ ಸಿಂಗಲ್ ಪೇರೆಂಟ್ ಮಗಳನ್ನು ನೋಡಿಕೊಳ್ಳುವುದಕ್ಕೆ ಯಾರು ಇಲ್ಲ. ಬೇಲ್ ಕ್ಯಾನ್ಸಲ್ ಮಾಡಬೇಡಿ ಎಂದಿದ್ದರು.

ಸದ್ಯ ಇಂದು ಬೆಂಗಳೂರಿನ ಸಿಸಿಹೆಚ್ ಕೋರ್ಟ್ ಗೆ ಆಗಮಿಸಿದ್ದು, ಚಾರ್ಜ್ ಫ್ರೇಮ್ಲ ಮಾಡಲಾಗುತ್ತದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುವುದಕ್ಕೆ ದಿನಾಂಕವನ್ನು ನಿಗದಿ ಪಡಿಸಲಾಗುತ್ತದೆ. ಹೀಗಾಗಿ ಹದಿನೇಳು ಆರೋಪಿಗಳು ಹಾಜರಾಗಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...