ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 16 : ಡಿಬಾಸ್ ದರ್ಶನ್ ಗ್ಯಾಂಗ್ ನಿಂದ ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಬುಧವಾರ ಮುಂಜಾನೆ ಹೊಸ ಸದಸ್ಯನ ಆಗಮನವಾಗಿದೆ.
ರೇಣುಕಾ ಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾಗೆ ಐದು ತಿಂಗಳು. ಈಗ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರ ಕುಟುಂಬದ ಖುಷಿ ಹೆಚ್ಚಿಸಿದೆ.
ನಗರದ ಕೀರ್ತಿ ಆಸ್ಪತ್ರೆಯಲ್ಲಿ ಸಹನಾ ಹೆರಿಗೆಯಾಗಿದ್ದು, ತಾಯಿ, ಮಗು ಆರೋಗ್ಯವಾಗಿದ್ದಾರೆ. ಕೀರ್ತಿ ಆಸ್ಪತ್ರೆಯಿಂದ ಡಾ.ಮಲ್ಲಿಕಾರ್ಜುನ್ ಸಂಪೂರ್ಣ ಉಚಿತ ಚಿಕಿತ್ಸೆ ನೀಡಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಮಗ ಕೈ ಮುಗಿದು ಕೇಳಿಕೊಂಡಾಗ ಅವರು ಬಿಟ್ಟುಬಿಡಬೇಕಿತ್ತು ಎಂದು ತಂದೆ-ತಾಯಿ ಕಣ್ಣೀರು ಹಾಕಿದ್ದರು. ಅಲ್ಲದೆ, ದರ್ಶನ್ಗೆ ಒಳ್ಳೆಯದಾಗಲ್ಲ ಎಂದು ಶಾಪ ಕೂಡ ಹಾಕಿದ್ದರು. ಈಗ ನೊಂದಿದ್ದ ಕುಟುಂಬಕ್ಕೆ ಖುಷಿ ಆಗುವಂಥ ಸುದ್ದಿ ಸಿಕ್ಕಿದೆ.
ರೇಣುಕಾ ಸ್ವಾಮಿ ಕೊಲೆ ಬಳಿಕ ಜೂನ್ 11 ರಂದು ದರ್ಶನ್ ಬಂಧನವಾಗಿತ್ತು. ಅವರು ಕಳೆದ ನಾಲ್ಕು ತಿಂಗಳಿಂದ ಜೈಲಿನಲ್ಲಿಯೇ ಇದ್ದಾರೆ. ಅವರು ಜಾಮೀನಿಗೆ ಅರ್ಜಿ ಹಾಕಿದ್ದರು. ಆದರೆ, ಕೆಳ ಹಂತದ ಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿದೆ. ಅವರು ಈಗ ಈ ಅರ್ಜಿಯನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಿದ್ದಾರೆ.
ರೇಣುಕಾ ಸ್ವಾಮಿ ಕೊಲೆಯ ಬಳಿಕ ಇಡೀ ಕುಟುಂಬ ಕಣ್ಣೀರಲ್ಲೇ ಕೈ ತೊಳೆಯುತ್ತಾ ಬಂದಿದೆ. ಸುಮಾರು ನಾಲ್ಕು ತಿಂಗಳ ಬಳಿಗ ಮನೆಯಲ್ಲಿ ಸಂತಸ ಮಾನೆ ಮಾಡಿದ್ದು, ಕುಟುಂಬದ ಸದಸ್ಯರು ಒಂದೆಡೆ ರೇಣುಕಾ ಸ್ವಾಮಿಯನ್ನು ನೆನೆದು ಕಣ್ಣೀರಾದರೆ, ಮತ್ತೊಂದೆಡೆ ಸಹನಾ ಅವರು ಗಂಡು ಮಗುವಿಗೆ ಜನ್ಮ ನೀಡಿದ ಈ ಸಂದರ್ಭದಲ್ಲಿ ಇಡೀ ಕುಟುಂಬ ಸಂತಸದಲ್ಲಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್