ಸುದ್ದಿಒನ್, ಚಿತ್ರದುರ್ಗ, ಮೇ. 20 : “ಪದವಿ ಹಂತದಲ್ಲೇ ಸಂಶೋಧನಾ ಪ್ರವೃತ್ತಿಯನ್ನು ಮೈಗೂಡಿಸಿಕೊಳ್ಳುವುದು ವಿದ್ಯಾರ್ಥಿನಿಯರ ಬೌದ್ಧಿಕ ವಿಕಾಸಕ್ಕೆ ಸಹಕಾರಿಯಾಗಿದೆ. ಕನ್ನಡ ಸಾಹಿತ್ಯ ಲೋಕವನ್ನು ವಿಭಿನ್ನ ದೃಷ್ಟಿಕೋನದಿಂದ ನೋಡುವ ಶಕ್ತಿ ಇಂತಹ ಪ್ರಬಂಧಗಳ ಮೂಲಕ ಸಿದ್ಧಿಸುತ್ತದೆ” ಎಂದು ಪ್ರಾಂಶುಪಾಲರಾದ ಡಾ. ಶಿವಣ್ಣ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಐಚ್ಛಿಕ ಕನ್ನಡ ವಿದ್ಯಾರ್ಥಿನಿಯರ ಆಂಶಿಕ ಪ್ರಬಂಧದ (Project Dissertation) ಮೌಖಿಕ ಪರೀಕ್ಷೆಯನ್ನು ಕಾಲೇಜಿನಲ್ಲಿ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಈ ಮೌಖಿಕ ಪರೀಕ್ಷೆಯ ಬಾಹ್ಯ ಮೌಲ್ಯಮಾಪಕರಾಗಿ (External Examiner) ಆಗಮಿಸಿದ್ದ ಡಾ. ಯಶೋಧರ ಜಿ. ಎನ್. ಅವರು ವಿದ್ಯಾರ್ಥಿನಿಯರ ಸಂಶೋಧನಾ ಶ್ರಮವನ್ನು ಶ್ಲಾಘಿಸಿದರು. ಪ್ರಬಂಧಗಳ ವಸ್ತುವಿಷಯ, ಕ್ಷೇತ್ರಕಾರ್ಯ ಮತ್ತು ವಿಷಯ ಮಂಡನೆಯ ವಿಧಾನದ ಕುರಿತು ಉಪಯುಕ್ತ ಸಲಹೆಗಳನ್ನು ನೀಡಿದ ಅವರು, ಭವಿಷ್ಯದ ಉನ್ನತ ಸಂಶೋಧನೆಗಳಿಗೆ ಇದು ಭದ್ರ ಬುನಾದಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಇಂದಿನ ಶೈಕ್ಷಣಿಕ ಜಗತ್ತಿನಲ್ಲಿ ಕೇವಲ ಪಠ್ಯ ಆಧಾರಿತ ಕಲಿಕೆಗಿಂತ, ಸಂಶೋಧನಾ ಮನೋಭಾವವನ್ನು ಬೆಳೆಸಿಕೊಳ್ಳುವುದು ಅತ್ಯಂತ ಪ್ರಮುಖವಾಗಿದೆ. ಪದವಿ ಹಂತದಲ್ಲಿಯೇ ವಿದ್ಯಾರ್ಥಿನಿಯರು ಸಾಹಿತ್ಯ, ಸಂಸ್ಕೃತಿ ಮತ್ತು ಸಮಾಜದ ವಿವಿಧ ಆಯಾಮಗಳ ಕುರಿತು ಕ್ಷೇತ್ರಕಾರ್ಯ ಹಾಗೂ ಆಳವಾದ ಅಧ್ಯಯನ ನಡೆಸಿ ಸಿದ್ಧಪಡಿಸಿರುವ ಆಂಶಿಕ ಪ್ರಬಂಧಗಳು ಅವರ ವೈಚಾರಿಕ ಪ್ರಬುದ್ಧತೆಗೆ ಸಾಕ್ಷಿಯಾಗಿದ್ದವು.
ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಗಾಯಿತ್ರಮ್ಮ ಟಿ., ಉಪನ್ಯಾಸಕರಾದ ಡಾ. ನಂದಿನಿ ಟಿ., ಡಾ. ಶಿವಣ್ಣ ಟಿ. ಹಾಗೂ ಡಾ. ತಿಪ್ಪೇಸ್ವಾಮಿ ಅವರು ಉಪಸ್ಥಿತರಿದ್ದು, ವಿದ್ಯಾರ್ಥಿನಿಯರ ಸಂಶೋಧನಾ ಮಾರ್ಗದರ್ಶಕರಾಗಿ ಮೌಖಿಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.
ಕಾಲೇಜಿನ ಐಚ್ಛಿಕ ಕನ್ನಡ ವಿದ್ಯಾರ್ಥಿನಿಯರು ತಮ್ಮ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿ, ಮೌಲ್ಯಮಾಪಕರ ಪ್ರಶ್ನೆಗಳಿಗೆ ಉತ್ತರಿಸುವ ಮೂಲಕ ಯಶಸ್ವಿಯಾಗಿ ಮೌಖಿಕ ಪರೀಕ್ಷೆಯನ್ನು ಪೂರೈಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.





















